ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿರುವ ಕನಗನಮರಡಿಯ ಕಾಲುವೆ ಖಾಸಗಿ ಬಸ್ ಉರುಳಿ 24 ಅಧಿಕ ಪ್ರಯಾಣಿಕರು ಮೃತಪಟ್ಟಿರುವುದಕ್ಕೆ ಮುಖ್ಯಮಂತ್ರಿ  ಕುಮಾರಸ್ವಾಮಿಯವರು ಇಂದು ಸಂಜೆ ನಡೆಯಬೇಕಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡುವಂತೆ ಸೂಚನೆ ನೀಡಿದ್ದಾರೆ.



COMMERCIAL BREAK
SCROLL TO CONTINUE READING

ಈ ಕುರಿತಾಗಿ ಮುಖ್ಯಮಂತ್ರಿ ಕಚೇರಿ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ."ಮುಖ್ಯಮಂತ್ರಿಗಳು ತಮ್ಮ ಇಂದಿನ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಪಡಿಸಿ ಪಾಂಡವಪುರ- ಕನಗನಮರಡಿ ಗ್ರಾಮದ ಬಸ್ ಅಪಘಾತ ನಡೆದ ಸ್ಥಳಕ್ಕೆ ಧಾವಿಸಲಿದ್ದಾರೆ.ಇಂದು ಸಂಜೆ ನಡೆಯಬೇಕಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ " ಎಂದು ಧೃಡಪಡಿಸಿದೆ,


ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ತೀವ್ರ ಸಂತಾಪ 


ಬಸ್ ದುರಂತ್ ಪ್ರಕರಣದಲ್ಲಿ ಮಡಿದವರಿಗೆ ಸಂತಾಪ ಸೂಚಿಸಿರುವ ರಾಹುಲ್ ಗಾಂಧಿ ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.ಬಸ್ ದುರಂತದ ಬಗ್ಗೆ ಟ್ವೀಟ್ ಮಾಡಿರುವ ಅವರು ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ಬಸ್ ದುರಂತ ಪ್ರಕರಣದಿಂದಾಗಿ 20ಕ್ಕೂ ಅಧಿಕ ಜನರು ಮೃತಪಟ್ಟು ಹಲವರು ಗಾಯಗೊಂಡಿರುವುದು ನಿಜಕ್ಕೂ ಆಘಾತಕಾರಿ ಸಂಗತಿ. ಈ ದುರಂತದಲ್ಲಿ ಮಡಿದ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ ಮತ್ತು ಗಾಯಗೊಂಡವರು ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.




ಇನ್ನೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ನವರು ಸಹಿತ ಟ್ವೀಟ್ ಮಾಡಿ "ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಗ್ರಾಮದ ಬಳಿ ನಾಲೆಗೆ ಖಾಸಗಿ ಬಸ್ ಉರುಳಿ 20 ಕ್ಕೂ ಅಧಿಕ ಮಂದಿ ಸಾವಿಗೀಡಾಗಿರುವುದು ಅತೀವ ನೋವುಂಟುಮಾಡಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು ಹಾಗೂ ಮುಂದೆ ಇಂತಹ ದುರ್ಘಟನೆಗಳು ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಸಂತಾಪ ಸೂಚಿಸಿದ್ದಾರೆ.