Cauvery water dispute: ಕಾವೇರಿ ನೀರಿಗಾಗಿ ಜೀವಂತ ಸಮಾಧಿಯಾಗಿ ವಿನೂತನ ಪ್ರತಿಭಟನೆ!
Cauvery Water Sharing Dispute: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಶಿವಕುಮಾರ್ ಆರಾಧ್ಯ ಎಂಬ ರೈತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ತಾಲೂಕಿನ ಉಪ್ಪಾರಕನಹಳ್ಳಿ ಗ್ರಾಮದಲ್ಲಿ ಸ್ವತಃ ಭೂಮಿಯೊಳಗೆ ಜೀವಂತ ಸಮಾಧಿಯಾಗಿ ಅವರು ವಿನೂತನವಾಗಿ ಪ್ರತಿಭಟಿಸಿ ಗಮನ ಸೆಳೆದಿದ್ದಾರೆ.
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಸಕ್ಕರೆ ನಾಡು ಮಂಡ್ಯದಲ್ಲಿ ರೈತನೊಬ್ಬ ವಿನೂತನ ಪ್ರತಿಭಟನೆ ನಡೆಸಿದ್ದಾನೆ. ಕಾವೇರಿಗಾಗಿ ಜಮೀನಿನಲ್ಲಿ ಜೀವಂತ ಸಮಾಧಿಯಾಗಿ ರಾಜ್ಯ ಸರ್ಕಾರದ ವಿರುದ್ಧ ವಿಭಿನ್ನ ಪ್ರತಿಭಟನೆ ನಡೆಸಿದ್ದಾನೆ.
ಸಕ್ಕರೆ ನಾಡು ಮಂಡ್ಯದಲ್ಲಿ ಕಾವೇರಿ ಕಿಚ್ಚು ಮುಂದುವರೆದಿದೆ. ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಶಿವಕುಮಾರ್ ಆರಾಧ್ಯ ಎಂಬ ರೈತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ತಾಲೂಕಿನ ಉಪ್ಪಾರಕನಹಳ್ಳಿ ಗ್ರಾಮದಲ್ಲಿ ಸ್ವತಃ ಭೂಮಿಯೊಳಗೆ ಜೀವಂತ ಸಮಾಧಿಯಾಗಿ ಅವರು ವಿನೂತನವಾಗಿ ಪ್ರತಿಭಟಿಸಿ ಗಮನ ಸೆಳೆದಿದ್ದಾರೆ.
ಇದನ್ನೂ ಓದಿ: ದೊಡ್ಡತುಮಕೂರು ಕೆರೆಗಳ ಕಲುಷಿತ ನೀರು ಪೂರೈಕೆ
ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಮೂಲಕ ರೈತರನ್ನು ಜೀವಂತ ಸಮಾಧಿ ಮಾಡುತ್ತಿದೆ. ಇಷ್ಟು ದಿನ ವಿರೋಧಿ ಘೋಷಣೆ ಕೂಗಿದ್ವಿ, ಇನ್ನು ಅವರ ಪರವಾಗಿ ಘೋಷಣೆ ಕೂಗುತ್ತೇವೆ ಅಂತಾ ಹೇಳಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಕೃಷಿ ಸಚಿವ ಚಲುವರಾಯಸ್ವಾಮಿಗೆ ಧಿಕ್ಕಾರದ ಬದಲಿಗೆ ಜೈಕಾರ ಕೂಗುತ್ತಲೇ ರೈತರು ಆಕ್ರೋಶ ಹೊರಹಾಕಿದರು.
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವುದಿಲ್ಲ. ವರುಣನ ಕೃಪೆಯಿಂದ ಜಲಾಶಯ ತುಂಬುತ್ತಿದೆ. ರೈತರನ್ನು ಸಮಾಧಿ ಮಾಡುವುದನ್ನು ಬಿಟ್ಟು, ಇನ್ನಾದರೂ ನೀರು ಹರಿಸುವುದನ್ನು ನಿಲ್ಲಿಸಲಿ ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ: ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ
ತಮಿಳುನಾಡಿಗೆ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೆಪ್ಟೆಂಬರ್ 26ರಂದು ನಡೆದ ಸಭೆಯಲ್ಲಿ CWRC ಶಿಫಾರಸು ಮಾಡಿತ್ತು. CWMA ಅ.15ರವರೆಗೂ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಸೆ. 29ರಂದು ಆದೇಶ ಹೊರಡಿಸಿದೆ. ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ವಿವಿಧೆಡೆ ರೈತರು ಗುರುವಾರವೂ ಪ್ರತಿಭಟನೆ ನಡೆಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.