ಬೆಂಗಳೂರು: KRS ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರವಾಗಿ ರೈತರ ನಿರಂತರ ಹೋರಾಟಕ್ಕೆ ಮಣಿಯಿತಾ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ? ಅನ್ನೋ ಪ್ರಶ್ನೆ ಮೂಡಿದೆ. ಕಡೆಗೂ ಅನ್ನದಾತರ ಹೋರಾಟಕ್ಕೆ ಮಣಿದ ಸರ್ಕಾರವು ತಮಿಳುನಾಡಿಗೆ ಹರಿಸುತ್ತಿರುವ ನೀರಿನ ಪ್ರಮಾಣ ಕಡಿಮೆ ಮಾಡಿದೆ. 10 ಸಾವಿರ ಕ್ಯೂಸೆಕ್ಸ್ನಿಂದ 5 ಸಾವಿರ ಕ್ಯೂಸೆಕ್ಸ್ಗೆ ಇಳಿಕೆ ಮಾಡಿದೆ.
ಪ್ರತಿನಿತ್ಯ KRS ಜಲಾಶಯದಿಂದ ತಮಿಳುನಾಡಿಗೆ 10 ರಿಂದ 12 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿತ್ತು. ಇದೀಗ ನೀರಿನ ಪ್ರಮಾಣವನ್ನು 5 ಸಾವಿರ ಕ್ಯೂಸೆಕ್ಸ್ಗೆ ಇಳಿಕೆ ಮಾಡಲಾಗಿದೆ. KRS ಜಲಾಶಯದಿಂದ 5,038 ಕ್ಯೂಸೆಕ್ಸ್ ನೀರು ಹೊರ ಬಿಡಲಾಗುತ್ತಿದೆ.
ಇದನ್ನೂ ಓದಿ: ಶನಿವಾರ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ
KRS ಜಲಾಶಯದ ಗರಿಷ್ಟ ಮಟ್ಟ 124.80 ಅಡಿ ಇದ್ದು, ಸದ್ಯ ಜಲಾಶಯದ ನೀರಿನ ಮಟ್ಟ 102.74 ಅಡಿ ಇದೆ. ಒಳ ಹರಿವಿನ ಪ್ರಮಾಣ 3,276 ಕ್ಯೂಸೆಕ್ಸ್ ಇದ್ದು, ಹೊರ ಹರಿವಿನ ಪ್ರಮಾಣ 5,743 ಕ್ಯೂಸೆಕ್ಸ್ ಇದೆ. ಗುರವಾರ ಹೊರ ಹರಿವಿನ ಪ್ರಮಾಣ ಸುಮಾರು 14 ಸಾವಿರ ಕ್ಯೂಸೆಕ್ಸ್ ಇತ್ತು.
ಇದುವರೆಗೂ KRS ಜಲಾಶಯದಿಂದ ತಮಿಳುನಾಡಿಗೆ ಸುಮಾರು 8 TMC ನೀರನ್ನು ಹರಿಸಲಾಗಿದೆ. ಈ ಹಿನ್ನೆಲೆ ಮಂಡ್ಯದಲ್ಲಿ ‘ಕಾವೇರಿ’ ಕಿಚ್ಚು ಜೋರಾಗಿತ್ತು. ಕೊನೆಗೂ ಅನ್ನದಾತರ ಹೋರಾಟಕ್ಕೆ ಮಣಿದು ನೀರು ಹರಿಸುವಿಕೆ ಪ್ರಮಾಣವನ್ನು ಸರ್ಕಾರ ಕಡಿಮೆ ಮಾಡಿದೆ.
ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಖರೀದಿ ಭರಾಟೆ ಜೋರು!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.