ಮಂಡ್ಯ: ಸದಾ ಒಂದಿಲ್ಲೊಂದು ಎಡವಟ್ಟುಗಳಿಂದ ಸುದ್ದಿಯಾಗುವ ಮಂಡ್ಯ ವೈದ್ಯಕೀಯ ಕಾಲೇಜಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಅನಾರೋಗ್ಯಕ್ಕೆ ಒಳಗಾಗಿದ್ದ ಪತಿಯ ಕಾಲನ್ನು ಕತ್ತರಿಸಿದ ವೈದ್ಯರು ಆತನ ಪತ್ನಿಗೆ ನೀಡಿ ಮಣ್ಣು ಮಾಡುವಂತೆ ಹೇಳಿದ್ದಾರೆ. ವೈದ್ಯರ ಈ ಮಹಾ ಎಡವಟ್ಟಿಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.  ಕಾರಣರಾಗಿದ್ದಾರೆ.


COMMERCIAL BREAK
SCROLL TO CONTINUE READING

ಗ್ಯಾಂಗ್ರೀನ್‌ ಕಾರಣ ಕಾಲು ಕತ್ತರಿಸಿದ ವೈದ್ಯರು


ಗ್ಯಾಂಗ್ರೀನ್‌ಗೆ ಒಳಗಾಗಿದ್ದ ಮಂಡ್ಯ ತಾಲೂಕಿನ ಕೀಲಾರ ಗ್ರಾಮದ ಪ್ರಕಾಶ್ ಎಂಬುವವರು ಚಿಕಿತ್ಸೆಗಾಗಿ ಮಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನೀಡಿದ ವೈದ್ಯರು ಗ್ಯಾಂಗ್ರೀನ್‌ಗೆ ಒಳಗಾಗಿದ್ದ ಕಾಲನ್ನು ಶಸ್ತ್ರಚಿಕಿತ್ಸೆ ಮಾಡಿ ತೆಗೆದಿದ್ದರು. ಬಳಿಕ ಆಸ್ಪತ್ರೆ ಸಿಬ್ಬಂದಿ ಕತ್ತರಿಸಲಾಗಿದ್ದ ಕಾಲನ್ನು ತಂದು ಪ್ರಕಾಶ್ ಅವರ ಪತ್ನಿ ಭಾಗ್ಯಮ್ಮರಿಗೆ ನೀಡಿ ಮಣ್ಣು ಮಾಡುವಂತೆ ಹೇಳಿದ್ದಾರೆ. ಇದನ್ನು ಕಂಡು ಕಣ್ಣೀರಿಟ್ಟ ಭಾಗ್ಯಮ್ಮರಿಗೆ ಏನು ಮಾಡಬೇಕೆಂದೇ ತೋಚಿಲ್ಲ. ಹೀಗಾಗಿ ಗಂಡನ ಕತ್ತಿರಿಸಿದ ಕಾಲನ್ನು ಹಿಡಿದುಕೊಂಡೇ ಅವರು ಕಣ್ಣೀರು ಹಾಕಿದ್ದಾರೆ.  


ಇದನ್ನೂ ಓದಿ: ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ : ಸಿಎಂ ಬೊಮ್ಮಾಯಿ


ಪ್ರಕಾಶ್ ಅವರು ಆಸ್ಪತ್ರೆಗೆ ದಾಖಲಾಗಿ 3 ದಿನಗಳ ಬಳಿಕ ಕಾಲನ್ನು ಕತ್ತರಿಸಲಾಗಿತ್ತು. ಬಳಿಕ ಆ ಕಾಲನ್ನು ಎಲ್ಲಾದರೂ ತೆಗೆದುಕೊಂಡು ಹೋಗಿ ಮಣ್ಣು ಮಾಡುವಂತೆ ಭಾಗ್ಯಮ್ಮನಿಗೆ ಆಸ್ಪತ್ರೆ ಸಿಬ್ಬಂದಿ ಹೇಳಿದ್ದರು ಎನ್ನಲಾಗಿದೆ. ಕಾಲನ್ನು ತಾವೇ ಮಣ್ಣು ಮಾಡಬೇಕೆಂದರೆ ಹಣ ನೀಡಬೇಕಾಗುತ್ತೆ ಅಂತಾ ಆಸ್ಪತ್ರೆಯವರು ಹೇಳಿದ್ದಾರೆಂದು ಭಾಗ್ಯಮ್ಮ ಆರೋಪಿಸಿದ್ದಾರೆ. ಮಿಮ್ಸ್ ಸಿಬ್ಬಂದಿಯ ಈ ನಡೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.


ನೋಟೀಸ್ ಜಾರಿ, ತನಿಖೆಗೆ ಆದೇಶ


‘ರೋಗಿಯ ಮೊಣಕಾಲಿನ ಕೆಳ ಭಾಗವನ್ನು ತೆಗೆಯಲಾಗಿತ್ತು. ತೆಗೆದ ಕಾಲಿನ ಭಾಗವನ್ನು ರೋಗಿಯ ಪತ್ನಿಗೆ ಡಿ ಗ್ರೂಪ್ ಸಿಬ್ಬಂದಿ ಕೊಟ್ಟಿದ್ದಾರೆ. ಇದು ನನ್ನ ಗಮನಕ್ಕೆ ಬಂದ ತಕ್ಷಣ ವಾಪಸ್ ಪಡೆಯಲಾಗಿದೆ. ನಿಮಯಗಳ ಪ್ರಕಾರ ವಿಲೇವಾರಿ ಮಾಡಲಾಗುತ್ತದೆ’ ಅಂತಾ ಮಿಮ್ಸ್ ನಿರ್ದೇಶಕ ಡಾ.ಬಿ.ಜೆ.ಮಹೇಂದ್ರ ಹೇಳಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ 5 ದಿನ ಮಳೆರಾಯನ ಅರ್ಭಟ : 18 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ


‘ಪ್ರಸ್ತುತ ಘಟನೆ ಬಗ್ಗೆ 24 ಗಂಟೆಯೊಳಗೆ ವರದಿ ನೀಡುವಂತೆ ಸರ್ಜರಿ ಮುಖ್ಯಸ್ಥರಿಗೆ ಸೂಚನೆ ನೀಡಿದ್ದೇನೆ. ಅಲ್ಲದೆ ಆಸ್ಪತ್ರೆಯ ಯಾವುದೇ ತ್ಯಾಜ್ಯವನ್ನು ರೂಲ್ಸ್ ಪ್ರಕಾರವೇ ವಿಲೇವಾರಿ ಮಾಡುವಂತೆ ಸುತ್ತೋಲೆ ಹೊರಡಿಸಿದ್ದೇನೆ. ಕಾನೂನು ಬಾಹಿರವಾಗಿ ವಿಲೇವಾರಿ ಮಾಡಿದರೆ ಕ್ರಮ ತೆಗೆದುಕೊಳ್ಳಲಾಗುವುದು. ಕತ್ತಿರಿಸಿದ ಕಾಲಿನ ವಿಲೇವಾರಿಗೆ ಹಣ ಕೇಳಿರುವ ಬಗ್ಗೆ ಆರೋಪ ಕೇಳಿಬಂದಿರುವ ಹಿನ್ನೆಲೆ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಅಂತಾ ಅವರು ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.