ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ‘ಕಮಲ’ ಅರಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ. ಈ ನಿಟ್ಟಿನಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತ ಇಂಡುವಾಳು ಸಚ್ಚಿದಾನಂದ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.


COMMERCIAL BREAK
SCROLL TO CONTINUE READING

ಇಂಡುವಾಳು ಸಚ್ಚಿದಾನಂದ ಅವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಚ್ಚಿದಾನಂದ ನೇತೃತ್ವದಲ್ಲಿ ನೂರಾರು ಜನರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.


"ನೀವು ನನ್ನನ್ನು ಬಾಲಂಗೋಚಿಯಾಗಿಯಾದರೂ ಬಳಸಿಕೊಳ್ಳಿ, ತಲೆಯಂತಾದರು ಬಳಸಿಕೊಳ್ಳಿ"


ಸಚಿವರಾದ ಸಿ.ಎನ್.ಅಶ್ವತ್ಥ್ ನಾರಾಯಣ್, ನಾರಾಯಣಗೌಡ, ಗೋಪಾಲಯ್ಯ ಮತ್ತು ಸಿ.ಪಿ.ಯೋಗೀಶ್ವರ್ ಸಮ್ಮುಖದಲ್ಲಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸಚ್ಚಿದಾನಂದ ಅವರು ಬಿಜೆಪಿ ಸೇರ್ಪಡೆಯಾದರು. ಇದೇ ವೇಳೆ ಮಂಡ್ಯದ ಹಲವು ನಾಯಕರು ಸಹ ಬಿಜೆಪಿ ಬಾವುಟ ಹಿಡಿದುಕೊಂಡಿದ್ದರು.


ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡ ಬಳಿಕ ಸಚ್ಚಿದಾನಂದ ಬಿಜೆಪಿ ಸೇರ್ಪಡೆ ಆಗ್ತಿದ್ದಾರೆ. ಇದೇ ವೇಳೆ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾತನಾಡಿರುವ ಸಚ್ಚಿದಾನಂದ, ‘ಸೂಕ್ತ ಸಮಯದಲ್ಲಿ ಅವರು ಸರಿಯಾದ ನಿರ್ಧಾರ ತೆಗೆದುಕೊಳ್ಳಲಿದ್ದಾರೆ’ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಗಡಿ ವಿವಾದ: ಕಾನೂನು ಸಮರಕ್ಕೆ ರಾಜ್ಯ ಸಿದ್ಧ ಎಂದ ಸಿಎಂ ಬೊಮ್ಮಾಯಿ


ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಸಂಸದೆ ಸುಮಲತಾ ಅಂಬರೀಶ್‍ರನ್ನು ಪಕ್ಷಕ್ಕೆ ಕರೆತರಲು ಬಿಜೆಪಿ ಆರಂಭದಿಂದಲೂ ಪ್ರಯತ್ನಿಸುತ್ತಿದೆ. ಇದಕ್ಕೆ ನಿದರ್ಶನವೆಂಬಂತೆ ಸುಮಲತಾ ಆಪ್ತ ಸಚ್ಚಿದಾನಂದ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದೀಗ ಸುಮಲತಾ ಅವರು ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋ ಕುತೂಹಲ ಮೂಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.