Mandya : ಮೈಸೂರು-ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂಪಾಯಿ ಅಧಿಕಾರಿಗಳ ವಶಕ್ಕೆ
ಮೈಸೂರು-ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಆರಂಭಗೊಂಡಿರುವ ಚೆಕ್‌ಪೋಸ್ಟ್ ತಪಾಸಣೆ ನಡೆಸುವಾಗ ಈ ನಗದು ಸಿಕ್ಕಿದ್ದು, ಜಪ್ತಿ ಮಾಡಿದ್ದಾರೆ.
Maddur : ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿಗೂ ಹೆಚ್ಚು ಹಣವನ್ನು ವಶಕ್ಕೆ ಪಡೆಯಲಾಗಿದೆ.
ಗಿರೀಶ್ ಎಂಬುವರು ಕ್ರೆಟಾ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆರ್.ಪೇಟೆ ಕಡೆಗೆ ಪ್ರಯಾಣ ಮಾಡುತ್ತಿದ್ದರು.
ಇದನ್ನು ಓದಿ : Madhuri Dixit : ನವಿಲಿನಂತೆ ಕಂಗೊಳಿಸುತ್ತಿರುವ ನಾಟ್ಯ ಮಯೂರಿ ಇವಳು !
ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಕೊಂಗಬೋರನದೊಡ್ಡಿ ಗ್ರಾಮದ ಬಳಿ ಚೆಕ್‌ಪೋಸ್ಟ್ ಆರಂಭಿಸಿ ವಾಹನಗಳನ್ನು ತಡೆದು ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ.ಚುನಾವಣಾಧಿಕಾರಿಗಳು ಪ್ರಶ್ನಿಸಿದಾಗ ಸೂಕ್ತ ಉತ್ತರ, ಹಣಕ್ಕೆ ಪೂರಕ ದಾಖಲೆ ನೀಡಿರಲಿಲ್ಲ. ಹೀಗಾಗಿ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದಾರೆ.
ಹೀಗಾಗಿ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದರು. ನಂತರ ಅಧಿಕಾರಿಗಳು ಮದ್ದೂರು ಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಳವಳ್ಳಿ ಡಿವೈಎಸ್‌ಪಿ ಕೃಷ್ಣಪ್ಪ, ತಹಶೀಲ್ದಾರ್ ಕೆ.ಎಸ್.ಸೋಮಶೇಖರ್, ಮದ್ದೂರು ಪೋಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಕೆ.ಆರ್.ಪ್ರಸಾದ್, ಚುನಾವಣಾಧಿಕಾರಿ ಲೋಕನಾಥ್ ಸ್ಥಳದಲ್ಲಿ ಹಾಜರಿದ್ದರು.
ಇದನ್ನು ಓದಿ : ಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ 5 ಅದ್ಭುತ ಆರೋಗ್ಯ ಪ್ರಯೋಜನಗಳು ಇಲ್ಲಿವೆ
ಗಿರೀಶ್ ಎಂಬುವವರು ತಮ್ಮ ಕ್ರೆಡಾ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆರ್.ಪೇಟೆ ಕಡೆಗೆ ಪ್ರಯಾಣ ಮಾಡುತ್ತಿದ್ದರು. ಕೊಂಗಬೋರನದೊಡ್ಡಿ ಗ್ರಾಮದ ಬಳಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಆರಂಭಗೊಂಡಿರುವ ಚೆಕ್‌ಪೋಸ್ಟ್ ಸಿಬ್ಬಂದಿ ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ ದೊಡ್ಡ ಚೀಲದಲ್ಲಿ ತುಂಬಿಟ್ಟಿದ್ದ ನಗದು ಪತ್ತೆಯಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.