KPCC ಕಚೇರಿಗೆ ಹಳೆ ಚಡ್ಡಿಗಳನ್ನು ಕೊರಿಯರ್ ಮಾಡಿದ RSS ಮುಖಂಡರು!

ಮಂಡ್ಯ ತಾಲೂಕಿನ ಆರ್‌ಎಸ್‌ಎಸ್ ಮುಖಂಡ ಮಂಜುನಾಥ್ ನೇತೃತ್ವದಲ್ಲಿ ಹಳ್ಳಿಗಳಲ್ಲಿ ಹಳೆಯ ಚಡ್ಡಿಗಳನ್ನು ಸಂಗ್ರಹಿಸಿ ಕೊರಿಯರ್ ಮೂಲಕ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಕಳುಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Last Updated : Jun 6, 2022, 05:37 PM IST
  • ಆರ್‌ಎಸ್‌ಎಸ್ ಚಡ್ಡಿ ಸುಡುವ ಅಭಿಯಾನ ಮಾಡುವ ಬಗ್ಗೆ ಸಿದ್ದರಾಮಯ್ಯ ಹೇಳಿಕೆ
  • ಕೆಆರ್ ಪೇಟೆಯಲ್ಲಿ ಆರ್‌ಎಸ್‌ಎಸ್ ಮುಖಂಡರು ವಿಭಿನ್ನ ಪ್ರತಿಭಟನೆ ಆರಂಭಿಸಿದ್ದಾರೆ.
  • ಹಳೆಯ ಚಡ್ಡಿಗಳನ್ನು ಸಂಗ್ರಹಿಸಿ ಕೊರಿಯರ್ ಮೂಲಕ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ
KPCC ಕಚೇರಿಗೆ ಹಳೆ ಚಡ್ಡಿಗಳನ್ನು ಕೊರಿಯರ್ ಮಾಡಿದ RSS ಮುಖಂಡರು! title=

ಮಂಡ್ಯ : ಆರ್‌ಎಸ್‌ಎಸ್ ಚಡ್ಡಿ ಸುಡುವ ಅಭಿಯಾನ ಮಾಡುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಕೆಆರ್ ಪೇಟೆಯಲ್ಲಿ ಆರ್‌ಎಸ್‌ಎಸ್ ಮುಖಂಡರು ವಿಭಿನ್ನ ಪ್ರತಿಭಟನೆ ಆರಂಭಿಸಿದ್ದಾರೆ. 

ಮಂಡ್ಯ ತಾಲೂಕಿನ ಆರ್‌ಎಸ್‌ಎಸ್ ಮುಖಂಡ ಮಂಜುನಾಥ್ ನೇತೃತ್ವದಲ್ಲಿ ಹಳ್ಳಿಗಳಲ್ಲಿ ಹಳೆಯ ಚಡ್ಡಿಗಳನ್ನು ಸಂಗ್ರಹಿಸಿ ಕೊರಿಯರ್ ಮೂಲಕ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಕಳುಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ : ಹಿಂದೂ ಧರ್ಮ ತ್ಯಜಿಸಿದ ಕಾರಣಕ್ಕೆ ಬಸವಣ್ಣ ಮತ್ತು ಅಂಬೇಡ್ಕರ್‌ರನ್ನು ನಿರ್ಲಕ್ಷಿಸಲಾಯಿತೇ?: ಸಿದ್ದರಾಮಯ್ಯ

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಮುಖಂಡ ಮಂಜುನಾಥ್, ಬಿಜೆಪಿ ಬಗ್ಗೆ ಮಾತನಾಡುವ ಮುನ್ನ ನಮ್ಮ ಆರ್‌ಎಸ್‌ಎಸ್ ಬಗ್ಗೆ ತಿಳಿದು ಮಾತನಾಡಲಿ. ಸಿದ್ದರಾಮಯ್ಯ, ನಲಪಾಡ್ ಚಡ್ಡಿ ಸುಡುವ ಅಭಿಯಾನ ನಡೆಸಿದ್ರೆ ನಾವೇ ರಾಜ್ಯದ ಪ್ರತಿ ಹಳ್ಳಿಗಳಿಂದ ಚಡ್ಡಿ ಸಂಗ್ರಹಿಸಿ ಕೆಪಿಸಿಸಿ ಕಚೇರಿಗೆ ಕಳಿಸ್ತೀವಿ. ಅವ್ರು ರಾಜಕಾರಣ ಮಾಡುವ ಬದಲು ಚಡ್ಡಿ ಸುಟ್ಟುಕೊಂಡೇ ಇರಲಿ.. ರಾಜಕೀಯ ನಾಯಕರು ಪಕ್ಷದ ಬಗ್ಗೆ ಮಾತನಾಡೇಬೇಕು ಹೊರತು ಸಂಘದ ಬಗ್ಗೆಯಲ್ಲ. ಇದೇ ರೀತಿ ಸಂಘದ ವಿರುದ್ದ ಮಾತನಾಡುತ್ತಿದ್ರೆ ಇಡೀ ದೇಶದಿಂದ ಪಕ್ಷದ ಕಚೇರಿಗೆ ಚಡ್ಡಿ ಕಳಿಸುವ ಅಭಿಯಾನ ನಡೆಸುತ್ತವೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. 

ಶುಕ್ರವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದಾದ್ಯಂತ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)  ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ಹೇಳಿಕೆ ನೀಡಿದ್ದರು. 

ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ ನವರು ಹಿಂದೆ ಚಡ್ಡಿ ಹಾಕುತ್ತಿದ್ದರು, ಈಗ ಪ್ಯಾಂಟ್‌ ಹಾಕುತ್ತಿದ್ದಾರೆ. ನಮ್ಮವರು ಪ್ರತಿಭಟನೆ ಸಂದರ್ಭದಲ್ಲಿ ಸಾಂಕೇತಿಕವಾಗಿ ಒಂದೇ ಒಂದು ಚಡ್ಡಿ ಸುಟ್ಟು ಹಾಕಿದ್ದಾರೆ. ಅದು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ದೊಡ್ಡ ಅಪರಾಧವಾಗಿ ಕಂಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : Textbook Revision Row: ‘ಸಂವಿಧಾನ ಶಿಲ್ಪಿ’ ಬಿರುದು ತೆಗೆದು ಡಾ.ಬಿ.ಆರ್.ಅಂಬೇಡ್ಕರ್‌ಗೆ ಅವಮಾನ

ಅವರೇನು ಮನೆಗೆ ಬೆಂಕಿ ಹಚ್ಚುವ ಅಥವಾ ಬೆಂಕಿಯನ್ನು ಸಮಾಜ ವಿರೋಧಿ ಕೆಲಸಕ್ಕೆ ಬಳಸಿಲ್ಲ. ಇದು ಕಾನೂನು ವಿರೋಧಿ ಕೃತ್ಯ ಹೇಗಾಗುತ್ತದೆ? ಕಾನೂನು ಉಲ್ಲಂಘನೆಗಾಗಿ ಗುಂಪುಗೂಡಿರುವುದು ಹೇಗಾಗುತ್ತದೆ ? ಒಬ್ಬರೇ ಪ್ರತಿಭಟನೆ ಮಾಡುವುದಕ್ಕಾಗುತ್ತದೆಯೇ ? ಅನ್ಯಾಯದ ವಿರುದ್ಧ, ನ್ಯಾಯಕ್ಕಾಗಿ ಹೋರಾಟ ಮಾಡುವುದು ಸಂವಿಧಾನ ನಮಗೆ ಕೊಟ್ಟ ಹಕ್ಕು.ಅದು ಮೂಲಭೂತ ಹಕ್ಕು. ಪ್ರತಿಭಟನೆ ವೇಳೆ ಆರ್'ಎಸ್ಎಸ್ ನವರ ಚಡ್ಡಿಯನ್ನು ಸುಟ್ಟು ಹಾಕಿದ್ದಾರೆ. ಒಂದೇ ಒಂದು ಚಡ್ಡಿ ಸುಟ್ಟಿದ್ದು ಪೊಲೀಸರಿಗೆ, ಸರ್ಕಾರದವರಿಗೆ ದೊಡ್ಡ ಅಪರಾಧವಾಗಿದೆ. ಅವರೇನು ಮನೆಗೆ ಬೆಂಕಿ ಹಚ್ಚೋಕೆ ಹೋಗಿರಲಿಲ್ಲ. ಕಾಂಪೌಂಡ್ ಗೇಟ್ ತೆಗೆದು ಒಳಗೆ ಹೋಗಿದ್ದಾರೆ. ಮನೆಗೆ ಪ್ರವೇಶ ಮಾಡಿಲ್ಲ. ಆಗ ಪೊಲೀಸರು ಏನು ಮಾಡುತ್ತಿದ್ದರು? ತಡೆಯಬೇಕಿತ್ತು ಅಲ್ಲವೇ? ಎಂದು ಪ್ರಶ್ನಿಸಿದ್ದರು.

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News