Mangaluru Blast: ರಾಜ್ಯ ಗುಪ್ತಚರ ವಿಭಾಗ & ಗೃಹ ಇಲಾಖೆಯ ವೈಫಲ್ಯ ಮತ್ತೊಮ್ಮೆ ಸಾಬೀತಾಗಿದೆ
ಮಂಗಳೂರಿನ ನಾಗುರಿಯಿಂದ ಪಂಪ್ ವೆಲ್ ಕಡೆಗೆ ಸಂಚರಿಸುತ್ತಿದ್ದ ಆಟೋದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಇದ್ದಕ್ಕಿದ್ದಂತೆಯೇ ಸ್ಫೋಟ ಸಂಭವಿಸಿದೆ.
ಬೆಂಗಳೂರು: ಮಂಗಳೂರು ಬಾಂಬ್ ಸ್ಫೋಟ ಪ್ರಕರಣವು ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಅವರು, ‘ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬ್ ಸ್ಫೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಮಂಗಳೂರು ಆಟೋ ಸ್ಫೋಟ ಉಗ್ರರ ಕೃತ್ಯ: ಡಿಜಿಪಿ ಪ್ರವೀಣ್ ಸೂದ್
ಆಟೋ ಸ್ಫೋಟಗೊಂಡಿರುವ ದೃಶ್ಯವು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: ಆಟೋ ರಿಕ್ಷಾದೊಳಗೆ ಸ್ಪೋಟ ನಡೆದಿದ್ದು ಆಕಸ್ಮಿಕವಲ್ಲ, ಇದೊಂದು ಉಗ್ರ ಕೃತ್ಯ : ಡಿಜಿಪಿ ಪ್ರವೀಣ್ ಸೂದ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.