Mangaluru Auto Blast: ಸ್ಥಳಕ್ಕೆ ಎಡಿಜಿಪಿ ಭೇಟಿ, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ!

Mangaluru auto rickshaw blast: ಮಂಗಳೂರು ನಗರದ ಗರೋಡಿಯಲ್ಲಿ ಆಟೋ ರಿಕ್ಷಾದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

Written by - Zee Kannada News Desk | Last Updated : Nov 21, 2022, 06:25 PM IST
  • ಮಂಗಳೂರು ಆಟೋದಲ್ಲಿ ಬಾಂಬ್ ಸ್ಫೋಟದ ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ
  • ಎಫ್‌ಎಸ್‌ಎಲ್ ಅಧಿಕಾರಿ ಮತ್ತು ಮಂಗಳೂರು ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ ಕಲೆ ಹಾಕಿದ ಎಡಿಜಿಪಿ
  • ಬಾಂಬ್ ಸ್ಫೋಟ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ
Mangaluru Auto Blast: ಸ್ಥಳಕ್ಕೆ ಎಡಿಜಿಪಿ ಭೇಟಿ, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ! title=
ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ

ಮಂಗಳೂರು: ಮಂಗಳೂರಿನ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಎಫ್‌ಎಸ್‌ಎಲ್ ಅಧಿಕಾರಿಯಿಂದ ಮತ್ತು ಮಂಗಳೂರು ನಗರ ಪೊಲೀಸ್ ಆಯುಕ್ತರಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ಆಸ್ಪತ್ರೆಗೂ ಭೇಟಿ ನೀಡಿದ ಎಡಿಜಿಪಿ ಅವರು ಗಾಯಾಳುಗಳನ್ನು ವಿಚಾರಿಸಿ ಮಾಹಿತಿ ಪಡೆದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಯ ಗುರುತು ಇನ್ನೂ ಸ್ಪಷ್ಟವಾಗಿಲ್ಲ. ಸುಟ್ಟಗಾಯಗಳಿಂದ ಆತನ ಮುಖ ಊದಿಕೊಂಡಿದೆ, ಗುರುತು ಸಿಗುತ್ತಿಲ್ಲ. ಶಂಕಿತ ಆರೋಪಿಯ ಮನೆಯವರನ್ನು ಆಸ್ಪತ್ರೆಗೆ ಬರುವಂತೆ ಸೂಚನೆ ನೀಡಲಾಗಿದೆ. ಅವರು ಬಂದು ಗುರುತು ಪತ್ತೆ ಹಚ್ಚಿದ ಬಳಿಕ ಆರೋಪಿಯ ಬಗ್ಗೆ ಪೂರ್ಣ ಮಾಹಿತಿ ನೀಡಲಾಗುವುದು’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟ್ಯಾಂಕ್ ಸ್ವಚ್ಛ ಪ್ರಕರಣ: ಗ್ರಾಮದ ಎಲ್ಲಾ‌ ತೊಂಬೆಗಳಲ್ಲಿ ನೀರು‌ ಕುಡಿದ ದಲಿತ ಯುವಕರು

ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ!

ಮಂಗಳೂರು ನಗರದ ಗರೋಡಿಯಲ್ಲಿ ಆಟೋ ರಿಕ್ಷಾದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿನ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಲು ಗೃಹ ಇಲಾಖೆಯು ಸೂಚನೆ ನೀಡಿರುವ ಬೆನ್ನಲ್ಲೇ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ಹಿನ್ನೆಲೆ ಮಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಪೊಲೀಸರು ಕಟ್ಟುನಿಟ್ಟಿನ ತಪಾಸಣೆ ಪ್ರಕ್ರಿಯೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಶಾಸಕ ಎಂ.ಪಿ ಕುಮಾರಸ್ವಾಮಿ ಮೇಲೆ ಗ್ರಾಮಸ್ಥರಿಂದ ಹಲ್ಲೆ

ಬೆಂಗಳೂರಿನ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳು ಸೇರಿದಂತೆ ಜನನಿಬಿಡ ಪ್ರದೇಶಗಳು, ಪ್ರಮುಖ ಪ್ರವಾಸಿ ತಾಣಗಳು, ಅಣೆಕಟ್ಟುಗಳು, ಪ್ರತಿಷ್ಠಿತ ದೇವಾಲಯಗಳು, ಧಾರ್ಮಿಕ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಮುನ್ನಚ್ಚರಿಕೆ ಕ್ರಮವಾಗಿ ನಿಗಾ ವಹಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News