ಕಾಲುಸಂಕ ದಾಟುತ್ತಿದ್ದ ವೇಳೆ ಕಾಲುಜಾರಿ ಬಿದ್ದು ನೀರುಪಾಲಾಗಿದ್ದ ವ್ಯಕ್ತಿ: ಇಂದು ಮೃತದೇಹ ಪತ್ತೆ!
ನಾಲ್ಕು ದಿನಗಳ ಹಿಂದೆ ಕಾಲುಸಂಕ ದಾಟುತ್ತಿದ್ದ ವೇಳೆ ಕಾಲುಜಾರಿ ಬಿದ್ದು ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆಯಾಗಿದೆ.
ಮಂಗಳೂರು: ನಾಲ್ಕು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಕಾಲುಸಂಕ ದಾಟುತ್ತಿದ್ದ ವೇಳೆ ಕಾಲುಜಾರಿ ಬಿದ್ದು ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆಯಾಗಿದೆ.
ಕಾಸರಗೋಡು ಜಿಲ್ಲೆಯ ಈಸ್ಟ್ ಎಳೇರಿ ಪಂಚಾಯತ್ನ ಚಿಟ್ಟಾರಿಕಾಲ್ ಸಮೀಪದ ಕಡುಮೇನಿಯ ನಾರಾಯಣನ್ (45) ಮೃತಪಟ್ಟವರು. ಇವರ ಮೃತದೇಹವು 3 ದಿನಗಳ ತೀವ್ರ ಶೋಧದ ಬಳಿಕ ಇಂದು ಘಟನಾ ನಡೆದ ಸ್ಥಳದಿಂದ 4 ಕಿ.ಮೀ. ದೂರದಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಎಸ್.ಡಿ.ಆರ್.ಎಫ್. ತಂಡ ಮೇಲೆತ್ತಿದೆ.
ಇದನ್ನೂ ಓದಿ: ವಿದ್ಯುತ್ ತಿದ್ದುಪಡಿ ಮಸೂದೆ ತರಾತುರಿಯಲ್ಲಿ ಬೇಡ: ರೈತ ಸಮುದಾಯ ಕಳವಳ
ಕೂರ್ನಡ್ಕದಲ್ಲಿ ಗುರುವಾರ ಸಂಜೆ ಕಾಲುಸಂಕ ದಾಟುತ್ತಿದ್ದ ವೇಳೆ ನಾರಾಯಣನ್ ಆಕಸ್ಮಿಕವಾಗಿ ಕಾಲುಜಾರಿ ಪಯಸ್ವಿನಿ ನದಿಯನ್ನು ಸಂಪರ್ಕಿಸುವ ತೋಡಿಗೆ ಬಿದ್ದು ನಾಪತ್ತೆಯಾಗಿದ್ದರು.
ಅವರಿಗಾಗಿ ಕಳೆದ ಮೂರು ದಿನಗಳಿಂದ ಅಗ್ನಿಶಾಮಕ ದಳ, ಪೊಲೀಸ್, ಎಸ್.ಡಿ.ಆರ್.ಎಫ್. ತಂಡ ಹಾಗೂ ಸ್ಥಳೀಯ ಈಜುಗಾರರು ಭಾರೀ ಮಳೆಯ ನಡುವೆ ನಿರಂತರ ಶೋಧ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಮಧ್ಯಾಹ್ನ ಘಟನೆ ಸಂಭವಿಸಿದ ಸ್ಥಳದಿಂದ ಸುಮಾರು 4 ಕಿ.ಮೀ. ದೂರದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮಳೆಯಲ್ಲಿ ಸಾಧ್ಯವಾದಷ್ಟು ಎಚ್ಚರಿಕೆ ವಹಿಸಿ ಎಂದು ಅಧಿಕಾರಿಗಳು ಸೂಚನೆ ಹೊರಡಿಸಿದ್ದಾರೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.