ಹಾವೇರಿ : ಮಾಜಿ ಸಂಸದ ಮಂಜುನಾಥ್ ಕುನ್ನೂರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. 


COMMERCIAL BREAK
SCROLL TO CONTINUE READING

ಮಂಜುನಾಥ್ ಕುನ್ನೂರ 1989 - 1994, 1994-1999 ಅವಧಿಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಹಿಂದೆ ಶಾಸಕರಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ, 2004 ರಲ್ಲಿ ಧಾರವಾಡ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿದ್ದರು. 2009ರಲ್ಲಿ ಕಾಂಗ್ರೆಸ್ ನಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಹ್ಲಾದ್ ಜೋಶಿ ವಿರುದ್ಧ ಸೋತಿದ್ದರು. ನಂತರ 2018 ರಲ್ಲಿ ಮತ್ತೆ ಬಿಜೆಪಿ ಸೇರಿದ್ದರು. 


ಸಿಎಂ ಸ್ವಕ್ಷೇತ್ರದಲ್ಲಿ ಆಪರೇಷನ್ ಹಸ್ತ


ಮಂಜುನಾಥ್ ಕುನ್ನೂರ ಪಂಚಮಸಾಲಿ ಸಮುದಾಯದ ಪ್ರಬಲ ಮುಖಂಡನಾಗಿದ್ದು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೈ ನಾಯಕರು ತಂದೆ ಮಗ ಇಬ್ಬರಿಗೂ ಗಾಳ ಹಾಕಿ ಮರಳಿ ಕಾಂಗ್ರೆಸ್ ಗೆ ಸೇರಿಸಿಕೊಳ್ಳುತ್ತಿದ್ದಾರೆ.


ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೇರ್ಪಡೆ ಸಾಧ್ಯತೆ ಇದೆ. ಶಿಗ್ಗಾಂವಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮತ ಕ್ಷೇತ್ರವಾಗಿದ್ದು, ಇಲ್ಲಿ ಅವರನ್ನು ಸೋಲಿಸಲು ಕಾಂಗ್ರೆಸ್ ಮಂಜುನಾಥ್ ಕುನ್ನೂರಗೆ ಗಾಳ ಹಾಕಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.