ಬಿಜೆಪಿಯ ಹಲವು ಶಾಸಕರು‌ ಕಾಂಗ್ರೆಸ್ ಸೇರಲು ಸಿದ್ದರಾಗಿದ್ದಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷರ ಹೊಸ ಬಾಂಬ್

Operation Congress : ಕಾಂಗ್ರೆಸ್ ಸೇರಲು ಹಲವಾರು ಬಿಜೆಪಿ ಜೆಡಿಎಸ್ ಮುಖಂಡರು ಮುಂದಾಗಿದ್ದಾರೆ. ಹಲವು ಶಾಸಕರು‌ ಕಾಂಗ್ರೆಸ್ ಸೇರಲು ಸಿದ್ದರಾಗಿದ್ದಾರೆ. ಬೆಳಗಾವಿ ಅಧಿವೇಶನ ಮುಗಿಯಲಿ ಎಂದು ಸಲೀಂ ಅಹ್ಮದ್ ಹೇಳಿದರು.  

Written by - Chetana Devarmani | Last Updated : Dec 2, 2023, 01:44 PM IST
  • ಆಪರೇಷನ್ ಹಸ್ತದ ಸುಳಿವು ನೀಡಿದ ಸಲೀಂ ಅಹ್ಮದ್
  • ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹೊಸ ಬಾಂಬ್
  • ಬೆಳಗಾವಿ ಅಧಿವೇಶನದ ಬಳಿಕ ನಡೆಯುತ್ತಾ ಆಪರೇಷನ್ ಹಸ್ತ?
ಬಿಜೆಪಿಯ ಹಲವು ಶಾಸಕರು‌ ಕಾಂಗ್ರೆಸ್ ಸೇರಲು ಸಿದ್ದರಾಗಿದ್ದಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷರ ಹೊಸ ಬಾಂಬ್ title=

ಹಾವೇರಿ : ಮೊನ್ನೆ ನಡೆದ 4 ರಾಜ್ಯದ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ಮಿಜೋರಾಮ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತದಿಂದ ಭ್ರಮನಿರಸನಗೊಂಡಿದ್ದರು. ತೆಲಂಗಾಣದಲ್ಲಿ ಕೆಸಿಆರ್ ಸುಳ್ಳು ಹೇಳಿಕೊಂಡು ಬಂದಿದ್ದಾರೆ. ಲೋಕಸಭಾ ಚುನಾವಣೆಗೆ ಇದು‌ ಸಮಿಫೈನಲ್. ಫೈನಲ್ ಮ್ಯಾಚ್ ನಲ್ಲಿ ಇಂಡಿಯಾ ಗೆಲ್ಲುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು. 

ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮನ್ನಣೆಗೆ ಕೊಟ್ಟಿದ್ದಾರೆ. ಮುಂದಿನ‌ ಆರು ತಿಂಗಳು ಬಿಜೆಪಿ ಸರಕಾರವನ್ನ ಬೆತ್ತಲೆ ಮಾಡುವ ಕೆಲಸ ಮಾಡುತ್ತೇವೆ. ಹತ್ತು ವರ್ಷ ಮೋದಿ ಸರಕಾರ ಏನು ಮಾಡಿದೆ? ನಾಚಿಕೆಯಾಗಬೇಕು ಅವರಿಗೆ ಎಂದರು. 

ಇದನ್ನೂ ಓದಿ: 25 ಶಾಸಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡುವ ಸಾಧ್ಯತೆ 

ಆರು ತಿಂಗಳು ಅತ್ತು ಕರೆದು ರಾಜ್ಯಧ್ಯಕ್ಷರ ಆಯ್ಕೆ ಮಾಡಿದ್ದಾರೆ. ರಾಜ್ಯಕ್ಕೆ ಬರಬೇಕಾದ ಪರಿಹಾರ ಕೊಡಿಸಿ ವಿಜಯೇಂದ್ರ ಅವರೆ. ಜನವರಿ ಕೊನೆಯ ವಾರದಲ್ಲಿ ಲೋಕಸಭಾ ಅಭ್ಯರ್ಥಿಗಳ ಘೋಷಣೆಯಾಗಲಿದೆ. ರಾಜ್ಯದ 28 ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುತ್ತೇವೆ ಎಂದರು. 

ಕೆಪಿಸಿಸಿ ಕಾರ್ಯಾಧ್ಯಕ್ಷರ ಹೊಸ ಬಾಂಬ್: 

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಪರೇಷನ್ ಹಸ್ತದ ಸುಳಿವು ನೀಡಿದ್ದಾರೆ. ಕಾಂಗ್ರೆಸ್ ಸೇರಲು ಹಲವಾರು ಬಿಜೆಪಿ ಜೆಡಿಎಸ್ ಮುಖಂಡರು ಮುಂದಾಗಿದ್ದಾರೆ. ಹಲವು ಶಾಸಕರು‌ ಕಾಂಗ್ರೆಸ್ ಸೇರಲು ಸಿದ್ದರಾಗಿದ್ದಾರೆ. ಬೆಳಗಾವಿ ಅಧಿವೇಶನ ಮುಗಿಯಲಿ ಎಂದು ಸಲೀಂ ಅಹ್ಮದ್ ಹೇಳಿದರು.

ಬೆಳಗಾವಿ ಅಧಿವೇಶನದ ಬಳಿಕ ಸಾಕಷ್ಟು ಜನರು ಸೇರಬೇಕು ಅಂತಿದ್ದಾರೆ. ಸೂಕ್ತ‌ ಸಮಯದಲ್ಲಿ ಅದನ್ನ ಹೇಳುತ್ತೇವೆ. ಬಿಜೆಪಿಯ ಪಾಪದ ಕೊಡ ತುಂಬಿತ್ತು. ಕಾಂಗ್ರೆಸ್ ಗೆ ಜನರು ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರು ಬಿಜೆಪಿ ಹೋಗುತ್ತಾರೆ ಎಂದು ಹಗಲುಗನಸು ಕಾಣುತ್ತಿದ್ದಾರೆ ಬಿಜೆಪಿಯವರು. ನಮಗೆ ಆಪರೇಷನ್ ಹಸ್ತ ಮಾಡಬೇಕು ಅಂತೇನಿಲ್ಲ. ಬಿಜೆಪಿ, ಜೆಡಿಎಸ್ ನಿಂದ ನೊಂದು ಹಲವರು ಕಾಂಗ್ರೆಸ್ ಸೇರಲು ಆಸೆ ಪಟ್ಟಿದ್ದಾರೆ ಎಂದು ಹೇಳಿದರು. 

ಇದನ್ನೂ ಓದಿ: ಮತಾಂತರವಾಗಿ, ಇಲ್ಲ ಇಸ್ಲಾಂನ ಕತ್ತಿಯಿಂದ ಸಾಯಿರಿ..! ಭಯಾನಕವಾಗಿದೆ ʼಸ್ಕೂಲ್‌ ಬಾಂಬ್‌ ಮೇಲ್‌ʼ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News