Marakumbi caste atrocity case : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದ ದಶಕದಷ್ಟು ಹಳೆಯದಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣದಲ್ಲಿ ಒಟ್ಟು 101 ಜನರನ್ನು ದೋಷಿ ಎಂದು ತೀರ್ಪು ನೀಡಿದೆ. ಈ ಪೈಕಿ 98 ಮಂದಿಗೆ ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2014 ರ ಆಗಸ್ಟ್ 28 ರಂದು ಎಸ್‌ಸಿ ಸಮುದಾಯದವರ ಮನೆಗಳಿಗೆ ಬೆಂಕಿ ಹಚ್ಚಿ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.


COMMERCIAL BREAK
SCROLL TO CONTINUE READING

98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಜೊತೆ ತಲಾ ಐದು ಸಾವಿರ ದಂಡ ಮತ್ತು ಮೂವರು ಅಪರಾಧಿಗಳಿಗೆ ತಲಾ ಎರಡು ಸಾವಿರ ದಂಡದ ಜೊತೆಹೆ ಐದು ವರ್ಷ ಕಠೀಣ ಶಿಕ್ಷೆ ವಿಧಿಸಲಾಗಿದೆ. ಕೊಪ್ಪಳದ  ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಈ ಆದೇಶ ಹೊರಡಿಸಿದ್ದಾರೆ.


ಏನಿದು ಪ್ರಕರಣ?


2014ರ ಆಗಸ್ಟ್ 28 ರಂದು ಎಸ್‌ಸಿ ಸಮುದಾಯದವರ ಮನೆಗಳಿಗೆ ಬೆಂಕಿ ಹಚ್ಚಿ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ದೀರ್ಘಕಾಲದ ದ್ವೇಷವಿದೆ ಎಂದು ವರದಿಯಾಗಿದೆ. ಅನೇಕ ದಲಿತರಿಗೆ ಕ್ಷೌರಿಕ ಅಂಗಡಿ ಮತ್ತು ದಿನಸಿ ಅಂಗಡಿಗೆ ಪ್ರವೇಶವನ್ನು ನಿರಾಕರಿಸಲಾಯಿತು.


ಇದನ್ನೂ ಓದಿ: ವಿಮೆ ತಿರಸ್ಕರಿಸಿದ ಮ್ಯಾಗಮಾ ವಿಮಾ ಕಂಪನಿಗೆ 1 ಲಕ್ಷ 80 ಸಾವಿರ ರೂ ದಂಡ ವಿಧಿಸಿದ ಕೋರ್ಟ್


ವರದಿಗಳ ಪ್ರಕಾರ, ಪ್ರಕರಣದ ಪ್ರಮುಖ ಆರೋಪಿ ಮಂಜುನಾಥ್ ತನ್ನ ಸ್ನೇಹಿತರೊಂದಿಗೆ ಗಂಗಾವತಿ ಪಟ್ಟಣದಲ್ಲಿ ಸಿನಿಮಾ ವೀಕ್ಷಿಸಲು ಹೋಗಿದ್ದ. ಮಂಜುನಾಥ್ ತನ್ನ ಸ್ನೇಹಿತರೊಂದಿಗೆ ಸೇರಿ ಮತ್ತೊಂದು ಗುಂಪಿನೊಂದಿಗೆ ಚಿತ್ರಮಂದಿರದಲ್ಲಿ ಜಗಳವಾಡಿದ್ದಾನೆ. ಬಳಿಕ ತನ್ನ ಮೇಲ್ಜಾತಿಯ ಜನರ ಗುಂಪಿಗೆ ಪ್ರಚೋದನೆ ನೀಡಿ ಮರಕುಂಬಿ ಗ್ರಾಮದ ಎಸ್‌ಸಿ ಕಾಲೋನಿಗೆ ಕರೆದೊಯ್ದಿದ್ದಾನೆ. ಮುಂಜಾನೆ 4 ಗಂಟೆಗೆ ಕಾಲೋನಿಯಲ್ಲಿರುವ ಮನೆಗಳ ಮೇಲೆ ಗುಂಪು ದಾಳಿ ನಡೆಸಿದ್ದಾರೆ. ಮನೆಗಳಿಗೆ ಇಟ್ಟಿಗೆ ಎಸೆದು ಕಲ್ಲು ತೂರಿದ್ದಾರೆ. ಕಾಲೋನಿಯಲ್ಲಿನ ಕೆಲವು ಗುಡಿಸಲುಗಳಿಗೆ ಬೆಂಕಿ ಸಹ ಹಚ್ಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.  


ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ದೀರ್ಘಕಾಲದ ದ್ವೇಷವಿತ್ತು. ಆ ದಿನ ಜಗಳ ವಿಕೋಪಕ್ಕೆ ತಿರುಗಿ ಗ್ರಾಮದಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ವರದಿಯಾಗಿದೆ. ಘಟನೆಯಲ್ಲಿ 117 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಪರಾಧದಲ್ಲಿ ಭಾಗಿಯಾದ 11 ಜನರು ವಿಚಾರಣೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅವರಲ್ಲಿ ಇಬ್ಬರು ಬಾಲ ನ್ಯಾಯ ಮಂಡಳಿಯ ವ್ಯಾಪ್ತಿಗೆ ಒಳಪಟ್ಟಿದ್ದಾರೆ.


ಇದನ್ನೂ ಓದಿ: ಮಾಲ್ ಆಫ್ ಏಷ್ಯಾದಲ್ಲಿ ಫುಡ್ ಟೆಸ್ಟಿಂಗ್ ಕೇಂದ್ರಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.