ಬೆಂಗಳೂರು: ತೀವ್ರ ಕಂಗಟ್ಟಾಗಿ ಪರಿಣಮಿಸಿದ್ದ ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಟಾಟಾ ಮೋಟಾರ್ ಕಂಪನಿಯ ಬಿಕ್ಕಟ್ಟನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಲು ಆಡಳಿತ ಮಂಡಳಿ ಹಾಗೂ ಕಾರ್ಮಿಕ  ಸಂಘಟನೆಗಳು ಸಮ್ಮತಿಸಿವೆ. ಸೋಮವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ಆರ್.ನಿರಾಣಿ ಅವರ ಕಚೇರಿ ಕೊಠಡಿಯಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಜನಪ್ರತಿನಿಗಳು, ಟಾಟಾ ಮೋಟಾರ್ ಆಡಳಿತ ಮಂಡಳಿ ಹಾಗೂ ಕಾರ್ಮಿಕ ಸಂಘಟನೆಯ ಪ್ರಮುಖರ ಜೊತೆ ನಡೆದ ಸಭೆಯಲ್ಲಿ ಸಮಸ್ಯೆಯನ್ನು ಮಾತುಕತೆಯ ಮೂಲಕವೇ ಪರಿಹರಿಸಿಕೊಳ್ಳಬೇಕೆಂಬ ಸಚಿವ ಮುರುಗೇಶ್  ನಿರಾಣಿ ಅವರ  ಪ್ರಸ್ತಾವನೆಯನ್ನು ಸಭೆಯಲ್ಲಿದ್ದ ಎಲ್ಲರೂ ಸರ್ವಸಮ್ಮತದಿಂದ ಒಪ್ಪಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಡಿಂಪಲ್ ಕ್ವೀನ್ ರಚಿತಾ ರಾಮ್ ಹೊಸ ಫೋಟೋ ಶೂಟ್‌, ಬ್ರೇಕ್ ಯಾಕೆ ಎಂದ ನೆಟ್ಟಿಗರು?


ಕೈಗಾರಿಕೆಗಳು ಉಳಿಯಬೇಕು, ಜೊತೆಗೆ ಆಡಳಿತ ಮಂಡಳಿ ಮತ್ತು ಕಾರ್ಮಿಕರ ಹಿತ ಕಾಯುವುದು ಸರ್ಕಾರದ ಉದ್ದೇಶ ಇದರಲ್ಲಿ ಯಾರಿಗೂ ಕೂಡ ಪ್ರತಿಷ್ಠೆ ಬೇಡ, ಎದುರಾಗಿರುವ ಸಮಸ್ಯೆಯನ್ನು ಒಟ್ಟಾಗಿ ಕುಳಿತು ಪರಿಹರಿಸಿಕೊಳ್ಳಬೇಕು ಎಂದು ನಿರಾಣಿ ಅವರು ಸಲಹೆ ಮಾಡಿದರು.


ಟಾಟಾ ಕಂಪೆನಿ ದೇಶದ  ಆಸ್ತಿ. ಇಲ್ಲಿ  ಲಾಭ, ನಷ್ಟಕ್ಕಿಂತ ಕಾರ್ಮಿಕರ ಹಿತ  ಹಾಗೂ ಆಡಳಿತ ಮಂಡಳಿ ಎರಡೂ ಮುಖ್ಯ. ಪದೇ ಪದೇ ಪ್ರತಿಷ್ಠೆಯನ್ನೇ ಮುಂದಿಟ್ಟುಕೊಂಡರೆ ಸಮಸ್ಯೆ ಬಗೆಹರಿಯುವುದಿಲ್ಲ, ಯಾರೂ ಕೂಡ ಪ್ರತಿಷ್ಠೆಗೆ  ಹೋಗದೆ  ಬಿಕ್ಕಟ್ಟನ್ನು ಪರಿಹರಿಸಿಕೊಳ್ಳಬೇಕು ಎಂದು  ಸಲಹೆ ನೀಡಿದರು.


ಇದನ್ನೂ ಓದಿ: ಎರಡು ದೇಶದ ಪೊಲೀಸರಿಗೂ ಸಿಗದ ಆರೋಪಿಯನ್ನು ಗಂಟೆಗಳಲ್ಲಿ ಪತ್ತೆ ಹಚ್ಚಿತು ನಾಯಿ!


ಇದಕ್ಕೆ ಸಹಮತ  ವ್ಯಕ್ತಪಡಿಸಿದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು, ನಮಗೆ ಆಡಳಿತ ಮಂಡಳಿ ಬೇರೆ  ಅಲ್ಲ , ಕಾರ್ಮಿಕರು ಬೇರೆ ಅಲ್ಲ ಇವರಿಬ್ಬರು ಒಂದೇ ನಾಣ್ಯದ ಎರಡು ಮುಖಗಳು. ಅದರಲ್ಲೂ ಟಾಟಾ ಕಂಪೆನಿಯೆಂದರೆ ಅದು ದೇಶದ ಆಸ್ತಿ. ಯಾರೂ ಕೂಡ ಇದನ್ನು ವೈಯಕ್ತಿಕ ಮಟ್ಟಕ್ಕೆ ತೆಗೆದುಕೊಳ್ಳಬಾರದು ಎಂದು ಆಡಳಿತ ಮಂಡಳಿ ಮತ್ತು ಕಾರ್ಮಿಕರಿಗೆ ಮನವಿ ಮಾಡಿದರು.


ಸಭೆಯಲ್ಲಿ  ಶಾಸಕರಾದ ಅಮೃತ್ ದೇಸಾಯಿ, ಅರವಿಂದ್ ಬೆಲ್ಲದ್, ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂಪಾಷಾ, ಕಾರ್ಯದರ್ಶಿ ಮನೋಜ್ ಜೈನ್ ಮತ್ತಿತರರು ಹಾಜರಿದ್ದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.