ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಡಿಕೇರಿಯಲ್ಲಿ ಕೂಡಾ ಕಳೆದ ಕೆಲವು ದಿನಗಳಿಂದ ಜೋರು ಮಳೆ ಸುರಿಯುತ್ತಿದೆ. ಈ ನಡುವೆ ಇದೀಗ ಜಿಲ್ಲೆಯಲ್ಲಿ ಮತ್ತೊಂದು ಆತಂಕದ ಸನ್ನಿವೇಶ ಎದುರಾಗಿದೆ. ಹೌದು, ಕೊಡಗಿನ ಹರಪಳ್ಳಿಯಲ್ಲಿ ಭೂಕುಸಿತ ಸಂಭವಿಸಿದೆ. 


COMMERCIAL BREAK
SCROLL TO CONTINUE READING

ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ತಪ್ಪಲಿನಲ್ಲಿರುವ ಹರಪಳ್ಳಿಯಲ್ಲಿ ಭೂ ಕುಸಿತ ಸಂಭವಿಸಿದೆ. ಭೂಕುಸಿತದ ಪರಿಣಾಮ ಬೆಟ್ಟದ ಒಂದು ಭಾಗವೇ ಕೊಚ್ಚಿ ಹೋಗಿದೆ. ಬೆಟ್ಟದ ಮೇಲ್ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದೆ. ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. 


ಇದನ್ನೂ ಓದಿ : ‘ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ’: ಜಂಟಿ ಸಭೆ ನಡೆಸಿದ ಸಚಿವರು


ಕಳೆದ ಕೆಲ ವರ್ಷಗಳ ಹಿಂದೆ ಕೂಡಾ ಜಿಲ್ಲೆಯಲ್ಲಿ ಭೂ  ಕುಸಿತ ಸಂಭವಿಸಿದ್ದು ಭಾರೀ ಸಾವು ನೋವು ಉಂಟಾಗಿತ್ತು. ಈ ಹಿನ್ನೆಯಲ್ಲಿ ಇದೀಗ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಳ್ಳುತ್ತಿರುವಂತೆಯೇ  ಸ್ಥಳೀಯರನ್ನು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗಿದೆ. 


ಈ ಮಧ್ಯೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.  ಕೊಡಗಿನಲ್ಲಿಯೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. 


ಇದನ್ನೂ ಓದಿ : Rakesh Tikait : ರಾಕೇಶ್ ಟಿಕಾಯತ್​ಗೆ ಮಸಿ ಬಳಿದ ಪ್ರಕರಣ : 450 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.