ಬೆಳಗಾವಿ: ತೀವ್ರ ಬರಗಾಲ ಹಿನ್ನೆಲೆ ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಳಗಾವಿಯ ಚನ್ನಮ್ಮ ವೃತ್ತದಿಂದ ಸುವರ್ಣ ಗಾರ್ಡನ್ ಟೆಂಟ್ ವರೆಗೆ ರೈತರ ಬೃಹತ್ ಪಾದಯಾತ್ರೆ ನಡೆಯುತ್ತಿದೆ. 


COMMERCIAL BREAK
SCROLL TO CONTINUE READING

ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡ ಸಾವಿರಾರು ರೈತರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ರೈತರ ಪ್ರತಿಭಟನೆಗೆ ಮೇಲುಕೋಟೆ ಶಾಸಕ ದರ್ಶನ ಪುಟ್ಟಣ್ಣಯ್ಯ ಕೂಡ ಸಾಥ್ ಕೊಟ್ಟರು. ಚನ್ನಮ್ಮ ವೃತ್ತದಿಂದ ಪಾದಯಾತ್ರೆ ಆರಂಭಿಸಿದ ರೈತರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು. 


ಇದನ್ನೂ ಓದಿ- Kalaburagi: ಹಾಡಹಗಲೇ ವಕೀಲನ ಬರ್ಬರ ಹತ್ಯೆ..!


ರೈತರ ಸಂಪೂರ್ಣ ಸಾಲಮನ್ನಾ, ಮಹಾದಾಯಿ ಯೋಜನೆ ಜಾರಿ, ಸ್ವಾಮಿನಾಥನ್ ವರದಿ ಜಾರಿ ಸೇರಿ ಇನ್ನಿತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ ರೈತರು ರಸ್ತೆ ಮೇಲೆ ಬಾರುಕೋಲಿನಿಂದ ಬಾರಿಸಿ, ಬಾಯಿ ಬಾಯಿ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು. 


ಈ ವೇಳೆ ಮಾತನಾಡಿದ ಶಾಸಕ ದರ್ಶನ ಪುಟ್ಟಣ್ಣಯ್ಯ, ಹಲವು ದಶಕಗಳಿಂದ ಹೋರಾಟ ಮಾಡಿಕೊಂಡು ಬಂದರೂ ರೈತರ ಬೇಡಿಕೆಗಳು ಮಾತ್ರ ಈಡೇರುತ್ತಿಲ್ಲ. ತುರ್ತಾಗಿ ಬರದಿಂದ ಕಂಗೆಟ್ಟಿರುವ ರೈತರಿಗೆ ದೊಡ್ಡ ಮಟ್ಟದ ಪರಿಹಾರವನ್ನು ಸರ್ಕಾರ ಘೋಷಿಸಬೇಕು. ಅದೇ ರೀತಿ ಬರವನ್ನು ತಡೆಗಟ್ಟುವುದು ಹೇಗೆ ಎಂಬ ಬಗ್ಗೆಯೂ ಚಿಂತಿಸಬೇಕು. ಈಗ ಪಾದಯಾತ್ರೆ ಮೂಲಕ‌ ಹೋರಾಟ ಆರಂಭಿಸಿದ್ದೇವೆ. ಸದನದಲ್ಲೂ ಈ ಬಗ್ಗೆ ಧ್ವನಿ ಎತ್ತುತ್ತೇನೆ. ಈ ಭಾಗದ ಮಹದಾಯಿ ಸೇರಿ ಪ್ರಮುಖ ನೀರಾವರಿ ಯೋಜನೆಗಳು ಶೀಘ್ರವೇ ಆಗಬೇಕಿದೆ ಎಂದರು.


ಇದನ್ನೂ ಓದಿ- ಅಕ್ರಮವಾಗಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದವರ ಬಂಧನ!


ಪಾದಯಾತ್ರೆ ಮಾಡದಂತೆ ಪೊಲೀಸರು ತಡೆಯಲು ಯತ್ನಿಸಿದರೂ ಕೂಡ ರೈತರು ಮಾತ್ರ ಸುವರ್ಣ ವಿಧಾನಸೌಧ ಬಳಿಯ ಸುವರ್ಣ ಗಾರ್ಡನ್ ಪ್ರತಿಭಟನೆ ಟೆಂಟ್ ವರೆಗೂ ಸಾವಿರಕ್ಕೂ ಹೆಚ್ಚು ರೈತರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.