ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೂಡಲಸಂಗಮದ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಇಂದು ಮಧ್ಯಾಹ್ನ 3:30ರ ಸುಮಾರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಲಿಂಗೈಕ್ಯರಾದರು.


COMMERCIAL BREAK
SCROLL TO CONTINUE READING

ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಮಾತೆ ಮಹಾದೇವಿ ಬಹು ಅಂಗಾಂಗ ವೈಫಲ್ಯದಿಂದ ಬಳಸುತ್ತಿದ್ದು ಕೋಮಾ ಸ್ಥಿತಿಗೆ ತಲುಪಿದ್ದಾರೆ ಎಂದು ಕೆಲಹೊತ್ತಿಗೆ ಮುಂಚೆ ವೈದ್ಯ ಸುದರ್ಶನ್ ಬಲ್ಲಾಳ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು.


ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಮುನ್ನಲೆಗೆ ಬಂದಾದ ಹೋರಾಟದ ನೇತೃತ್ವ ವಹಿಸಿದ್ದ ಮಾತೆ ಮಹಾದೆವಿಯವರು ಲಿಂಗಾಯತ ಧರ್ಮದ ಸ್ಥಾನಮಾನ ಪಡೆಯುವವರೆಗೂ ಹೋರಾಟ ನಡೆಸುವುದಾಗಿ ಹೇಳಿದ್ದರು. 


ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆರುವ ಸಲುವಾಗಿ ರಾಷ್ಟ್ರ ರಾಜಧಾನಿ ದೆಹಲಿಯ ತಾಲ್ಕೊಟರಾ ಸ್ಟೇಡಿಯಂನಲ್ಲಿ 2018ರ ಡಿಸೆಂಬರ್ 10, 11 ಮತ್ತು 12 ರಂದು ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಬೃಹತ್ ಸಮಾವೇಶದಲ್ಲಿ ಮಾತೆ ಮಹಾದೇವಿ ನೇತೃತ್ವ ವಹಿಸಿದ್ದರು. 


ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಹಿನ್ನೆಲೆಯಲ್ಲಿ ಕಳೆದ ಡಿಸೆಂಬರ್ ನಲ್ಲಿ ಮಾತೆ ಮಹಾದೇವಿ ದೆಹಲಿಯಲ್ಲೇ ಹಲವು ದಿನಗಳು ತಂಗಿದ್ದರು.  ಹವಾಮಾನ ವೈಪರಿತ್ಯದಿಂದ ಅವರ ಅರೋಗ್ಯ ತೀವ್ರ ಕ್ಷೀಣಿಸಿದ್ದ ಕಾರಣ ಜನವರಿ 2ರಂದು ಏರ್ ಅಂಬ್ಯುಲೆನ್ಸ್ ಮೂಲಕ ಅವರನ್ನು ಬೆಂಗಳೂರಿಗೆ ಕರೆತರಲಾಗಿತ್ತು.