ಡಲ್ಲಾಸ್: ಅಮೆರಿಕದಲ್ಲಿರುವ ಕನ್ನಡಿಗರ ಪ್ರಮುಖ ಸಂಘಟನೆಗಳಲ್ಲಿ ಒಂದಾಗಿರುವ `ನಾವಿಕ’ (ನಾವು ವಿಶ್ವ ಕನ್ನಡಿಗರು) ಶನಿವಾರ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾಜ್ಯದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಅವರು, ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗ ಉದ್ಯಮಿಗಳು ಕರ್ನಾಟಕದಲ್ಲಿ ಹೆಚ್ಚುಹೆಚ್ಚು ಹೂಡಿಕೆ ಮಾಡಿ, ಕೈಗಾರಿಕೆಗಳ ಬೆಳವಣಿಗೆಗೆ ಮಹತ್ತರ ಕೊಡುಗೆ ನೀಡಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಫ್ರಿಸ್ಕೋ ನಗರದ ಮೇಯರ್ ಜಾನ್ ಕ್ರೀಟಿಂಗ್ ಸೇರಿದಂತೆ ನೂರಾರು ಗಣ್ಯ ಉದ್ಯಮಿಗಳು ಭಾಗವಹಿಸಿದ್ದರು.
ಕರ್ನಾಟಕದ ಸಾವಿರಾರು ಪ್ರತಿಭಾವಂತ ಎಂಜಿನಿಯರುಗಳು, ವೈದ್ಯರು, ವಿಜ್ಞಾನಿಗಳು ಅಮೆರಿಕಕ್ಕೆ ಬಂದು ನೆಲೆಸಿ, ಇಲ್ಲಿನ ಆರ್ಥಿಕ ಬೆಳವಣಿಗೆಗೆ ಮೌಲಿಕ ಕೊಡುಗೆ ನೀಡುತ್ತಿದ್ದಾರೆ. ಅಲ್ಲದೆ, ಕನ್ನಡಿಗರು ತಮ್ಮ ಪರಂಪರೆಗೆ ಅನುಗುಣವಾಗಿ ಅಮೆರಿಕದ ಸಂಸ್ಕೃತಿ-ಸಮಾಜಗಳಲ್ಲಿ ಒಂದಾಗಿದ್ದು, ಅಮೆರಿಕ ಮತ್ತು ಭಾರತದ ನಡುವಿನ ಸೇತುವೆಗಳಂತೆ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಸಂಗತಿಯಾಗಿದೆ ಎಂದು ಅವರು ಬಣ್ಣಿಸಿದರು.
ಇದನ್ನೂ ಓದಿ : ಒಂದು ಜಾತಿಗೆ ಸೀಮಿತವಾಗಿ ಅಧಿಕಾರಿಗಳ ನೇಮಕ ಆಗ್ತಿದೆ : ಬಿ.ವೈ. ವಿಜಯೇಂದ್ರ
‘ನಾವಿಕ’ ಸಂಘಟನೆಯ ಮೂಲಕ ಇಲ್ಲಿನ ಕನ್ನಡಿಗರು ನಮಗೆ ನೀಡಿರುವ ಸ್ವಾಗತವನ್ನು ಕಂಡು ಹೃದಯ ತುಂಬಿ ಬಂದಿದೆ. ಇಲ್ಲಿರುವ ಕನ್ನಡಿಗರು ಕರ್ನಾಟಕದ ಉದ್ಯಮಲೋಕದಲ್ಲಿ ಬಂಡವಾಳ ಹೂಡಿಕೆ, ಸಹಭಾಗಿತ್ವ, ಸಂಶೋಧನೆ ಮತ್ತು ನಾವೀನ್ಯತೆಗಳಿಗೆ ಇರುವ ಉಜ್ವಲ ಅವಕಾಶಗಳನ್ನು ಬಳಸಿಕೊಳ್ಳಬೇಕು. ಈ ಮೂಲಕ ರಾಜ್ಯದ ಯಶೋಗಾಥೆಯನ್ನು ಇನ್ನೊಂದು ಮಜಲಿಗೆ ಕೊಂಡೊಯ್ಯಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಕೈಗಾರಿಕೆಗಳ ಬೆಳವಣಿಗೆ, ಉದ್ಯೋಗಸೃಷ್ಟಿ ಮತ್ತು ಆರ್ಥಿಕ ಅಭಿವೃದ್ಧಿ ನಮ್ಮ ಮುಂದಿರುವ ಹೆಗ್ಗುರಿಗಳಾಗಿವೆ. ಆದ್ದರಿಂದ ಇದಕ್ಕೆ ಪೂರಕವಾದ ವಿಷನ್ ಗ್ರೂಪುಗಳ ರಚನೆ ಮತ್ತು ನೀತಿಗಳನ್ನು ರೂಪಿಸಲಾಗುತ್ತಿದೆ. ಜೊತೆಗೆ ಇಡೀ ಭಾರತದ ಬೇರಾವ ರಾಜ್ಯದಲ್ಲೂ ಇಲ್ಲದಂತಹ ಕಾರ್ಯ ಪರಿಸರವನ್ನು ಕರ್ನಾಟಕ ಹೊಂದಿದ್ದು, ಕೌಶಲಪೂರ್ಣ ಮಾನವ ಸಂಪನ್ಮೂಲ ಕೂಡ ನಮ್ಮಲ್ಲಿ ಸಮೃದ್ಧವಾಗಿದೆ. ಅಮೆರಿಕದಲ್ಲಿರುವ ಸಾಹಸಶೀಲ ಕನ್ನಡಿಗರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಇದಕ್ಕಾಗಿ ರಾಜ್ಯ ಸರಕಾರವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಅವರು ಆಶ್ವಾಸನೆ ನೀಡಿದರು.
ಕಾರ್ಯಕ್ರಮದಲ್ಲಿ ಫ್ರಿಸ್ಕೋ ನಗರದ ಉಪಮೇಯರ್ ಏಂಜೆಲಾ ಪಲ್ಹ್ಯಾಂ, ಸಿಟಿ ಕೌನ್ಸಿಲ್ ಸದಸ್ಯ ಟೋನಿ ಸಿಂಗ್, ‘ನಾವಿಕ’ದ ಅಧ್ಯಕ್ಷ ಮಂಜುರಾವ್, ಪದಾಧಿಕಾರಿಗಳಾದ ಗೌರೀಶಂಕರ್, ಫ್ರಿಸ್ಕೋ ಸ್ಕೂಲ್ ಡಿಸ್ಟ್ರಿಕ್ಟ್ ಟ್ರಸ್ಟಿ ಆ್ಯನ್ ಆ್ಯಂಡರ್ಸನ್, ಗೋಪಾಲ್ ಮುಂತಾದವರು ಉಪಸ್ಥಿತರಿದ್ದರು. ಜತೆಗೆ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಇದ್ದರು.
ಇದನ್ನೂ ಓದಿ : ಕಾಂಗ್ರೆಸ್ ಸರ್ಕಾರ ಗೊಂದಲದ ಗೂಡಾಗಿದೆ: ಬಸವರಾಜ ಬೊಮ್ಮಾಯಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.