/kannada/photo-gallery/rahu-star-transit-will-bless-these-zodiac-sign-221364 ರಾಹು ಕೃಪೆಯಿಂದಲೇ ಬೆಳಗುವುದು ಈ ರಾಶಿಯವರ ಭಾಗ್ಯ!ಇನ್ನು ಇಟ್ಟ ಹೆಜ್ಜೆಯಲ್ಲಿ ಸೋಲಿಲ್ಲ! ಧನಿಕರಾಗುವ ಕಾಲ ದೂರವಿಲ್ಲ  ರಾಹು ಕೃಪೆಯಿಂದಲೇ ಬೆಳಗುವುದು ಈ ರಾಶಿಯವರ ಭಾಗ್ಯ!ಇನ್ನು ಇಟ್ಟ ಹೆಜ್ಜೆಯಲ್ಲಿ ಸೋಲಿಲ್ಲ! ಧನಿಕರಾಗುವ ಕಾಲ ದೂರವಿಲ್ಲ 221364

 ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(AAP)ಕ್ಕೆ ಸ್ಪಷ್ಟ ಬಹುಮತ ದೊರೆತಿದ್ದು, 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯವಾದಂತಾಗಿದೆ.

ಬುಧವಾರ ಮಧ್ಯಾಹ್ನದ ವೇಳೆಗೆ ಹೊರಬಿದ್ದ ಅಂತಿಮ ಫಲಿತಾಂಶದ ಪ್ರಕಾರ, 250 ವಾರ್ಡ್‍ಗಳಿಗೆ ನಡೆದ ಚುನಾವಣೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು 134 ಸ್ಥಾನಗಳನ್ನು ಗಳಿಸಿದ್ದು, ಬಿಜೆಪಿ 104 ವಾರ್ಡ್‍ಗಳಲ್ಲಿ ಗೆಲುವು ಸಾಧಿಸುವ ಮೂಲಕ ಭಾರೀ ಮುಖಭಂಗ ಅನುಭವಿಸಿದೆ. 9 ವಾರ್ಡ್‍ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೆ, 3 ವಾರ್ಡ್‍ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.  

ಇದನ್ನೂ ಓದಿ: Free Ration: ಪಡಿತರ ಚೀಟಿದಾರರಿಗೆ ಇನ್ಮುಂದೆ ಉಚಿತವಾಗಿ ಸಿಗುತ್ತೆ 150 ಕೆಜಿ ಅಕ್ಕಿ: ಸರ್ಕಾರದಿಂದ ಮಹತ್ವದ ಘೋಷಣೆ

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಎಪಿ ಸ್ಪಷ್ಟ ಬಹುತದ ಮೂಲಕ ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕೆ ಅರವಿಂದ್ ಕೇಜ್ರಿವಾಲ್ ದೆಹಲಿಯ ಜನರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ‘ಜನರ ನಿರೀಕ್ಷೆಗೆ ತಕ್ಕಂತೆ ಬದುಕಲು ಪ್ರಯತ್ನಿಸುತ್ತೇನೆ, ದೆಹಲಿಯನ್ನು ಸುಧಾರಿಸಲು ಪಕ್ಷಗಳು ಒಗ್ಗೂಡುವಂತೆ ಒತ್ತಾಯಿಸುತ್ತೇವೆ’ ಎಂದು ಹೇಳಿದ್ದಾರೆ.

ದೆಹಲಿಯ 250 ವಾರ್ಡ್‌ಗಳ ಚುನಾವಣೆಗೆ 1,349 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಡಿಸೆಂಬರ್ 4ರಂದು ಶೇ.50ಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. 2017ರಲ್ಲಿ (ಅಂದಿನ) 270 ಮುನ್ಸಿಪಲ್ ವಾರ್ಡ್‌ಗಳಲ್ಲಿ ಬಿಜೆಪಿ 181 ಸ್ಥಾನಗಳನ್ನು ಗೆದ್ದಿತ್ತು, ಆದರೆ AAP ಕೇವಲ 48 ಸ್ಥಾನ ಗೆದಿದ್ದರೆ, ಕಾಂಗ್ರೆಸ್ 30 ಸ್ಥಾನಗಳನ್ನು ಗಳಿಸಿತ್ತು.

ದೆಹಲಿಯ ಪಾಲಿಕೆಯಲ್ಲಿ ಪ್ರಸ್ತುತ 250 ವಾರ್ಡ್‍ಗಳಿದ್ದು, ಸ್ಪಷ್ಟ ಬಹುಮತ ಪಡೆಯಲು 126 ಸ್ಥಾನಗಳು ಬೇಕು. ಯಾವುದೇ ಎಕ್ಸಿಟ್ ಪೋಲ್‌ಗಳು ಭವಿಷ್ಯ ನಿಜವಾಗಿಲ್ಲ. ಯಾವುದೇ ಪಕ್ಷ 91 ಸ್ಥಾನಗಳನ್ನು ಗೆಲ್ಲುವುದಿಲ್ಲವೆಂದು ಎಕ್ಸಿಟ್ ಪೋಲ್ ಭವಿಷ್ಯ ಹೇಳಿತ್ತು. ಕಾಂಗ್ರೆಸ್ 9 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ವಿಶೇಷವೆಂದರೆ ಈ 9 ಸ್ಥಾನಗಳ ಪೈಕಿ 3 ವಾರ್ಡ್‌ಗಳನ್ನು 2017ರಲ್ಲಿ ಎಎಪಿ ಮತ್ತು ಒಂದನ್ನು ಬಿಜೆಪಿ ಗೆದ್ದಿತ್ತು. ಸೀಲಾಂಪುರ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಶಕೀಲಾ ಬೇಗಂ ಗೆಲುವು ಸಾಧಿಸಿದರೆ, ಮೀನಾ ದೇವಿ ಮತ್ತು ಗಜೇಂದರ್ ಸಿಂಗ್ ದಾರಾಲ್ ಕ್ರಮವಾಗಿ ಇಸಾಪುರ್ ಮತ್ತು ಮುಂಡ್ಕಾ ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ.

ಶೇ.50ರಷ್ಟು ಮತದಾನವಾಗಿತ್ತು

ಡಿಸೆಂಬರ್ 4ರಂದು ನಡೆದ ದೆಹಲಿ ಪಾಲಿಕೆ ಚುನಾವಣೆಗೆ ಮತದಾನ ನಡೆದಿತ್ತು. ಕೇವಲ ಶೇ.50.48ರಷ್ಟು ಅಂದರೆ ಒಟ್ಟು 1.45 ಕೋಟಿ ಅರ್ಹ ಮತದಾರರ ಪೈಕಿ ಕೇವಲ 73 ಲಕ್ಷ ಜನರು ತಮ್ಮ ಹಕ್ಕು ಚಲಾಯಿಸಿದ್ದರು.

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Section: 
English Title: 
MCD Election Results: AAP Got full majority, Thank people of Delhi for bringing change says Kejriwal
News Source: 
Home Title: 

MCD Election Results: ಆಮ್ ಆದ್ಮಿ ಪಕ್ಷಕ್ಕೆ ಬಹುಮತ, 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ!

MCD Election Results: ಆಮ್ ಆದ್ಮಿ ಪಕ್ಷಕ್ಕೆ ಬಹುಮತ, 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ!
Caption: 
15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ!
Yes
Is Blog?: 
No
Tags: 
Facebook Instant Article: 
Yes
Highlights: 

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ ಸ್ಪಷ್ಟ ಬಹುಮತ

ದೊಡ್ಡ ಪಕ್ಷಕ್ಕೆ ಮಣ್ಣುಮುಕ್ಕಿಸಿದ ಕೇಜ್ರಿವಾಲ್, 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ

250 ವಾರ್ಡ್‍ಗಳಿಗೆ ನಡೆದ ಚುನಾವಣೆಯಲ್ಲಿ 134 ಸ್ಥಾನ ಗೆದ್ದ ಆಮ್ ಆದ್ಮಿ ಪಕ್ಷ  

Mobile Title: 
MCD Election Results: ಆಮ್ ಆದ್ಮಿ ಪಕ್ಷಕ್ಕೆ ಬಹುಮತ, 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ!
Puttaraj K Alur
Publish Later: 
No
Publish At: 
Wednesday, December 7, 2022 - 15:30
Created By: 
Puttaraj K Alur
Updated By: 
Puttaraj K Alur
Published By: 
Puttaraj K Alur
Request Count: 
1
Is Breaking News: 
No