ಮೀಸಲಾತಿ ಪ್ರಮಾಣ ಹೆಚ್ಚಿಸಲು ಕ್ರಮ; ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ
ಸ್ವಾತಂತ್ರ್ಯ ಉದ್ಯಾನವನದಲ್ಲಿ ವಾಲ್ಮೀಕಿ ಜನಾಂಗ ಸೇರಿದಂತೆ ಪರಿಶಿಷ್ಟ ಪಂಗಡದ ಸಮುದಾಯದವರು ಮೀಸಲಾತಿ ಹೆಚ್ಚಿಸಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.
ಬೆಂಗಳೂರು: ಪರಿಶಿಷ್ಟ ಪಂಗಡ(ಎಸ್‌ಟಿ)ಕ್ಕೆ ಶೇ. 7.5 ರಷ್ಟು ಮೀಸಲಾತಿ ಹೆಚ್ಚಿಸಲು ಸರಕಾರ ತೀರ್ಮಾನಿಸಿದ್ದು, ಕಾನೂನಿನ ಚೌಕಟ್ಟಿನಲ್ಲಿ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಭರವಸೆ ನೀಡಿದರು.
ಸ್ವಾತಂತ್ರ್ಯ ಉದ್ಯಾನವನದಲ್ಲಿ ವಾಲ್ಮೀಕಿ ಜನಾಂಗ ಸೇರಿದಂತೆ ಪರಿಶಿಷ್ಟ ಪಂಗಡದ ಸಮುದಾಯದವರು ಮೀಸಲಾತಿ ಹೆಚ್ಚಿಸಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.
ಶೋಷಣೆಗೆ ಒಳಗಾದ ಸಮುದಾಯಕ್ಕೆ ಸಂವಿಧಾನದಲ್ಲಿ ಮೀಸಲಾತಿ ಇದೆ. ಪರಿಶಿಷ್ಟ ಪಂಗಡಕ್ಕೆ ಈಗಿರುವ ಮೀಸಲಾತಿ ಶೇ. 3.5 ಪ್ರಮಾಣವನ್ನು ಶೇ.7.5 ಮೀಸಲಾತಿಗೆ ನೀವೆಲ್ಲ ಅರ್ಹರು. ಹೀಗಾಗಿ, ಸರಕಾರ ಮೀಸಲಾತಿ ನೀಡಲು ಸಮಿತಿ ರಚಿಸಲು ನಿರ್ಧರಿಸಿದೆ. ಮುಂದಿನ ಸಚಿವ ಸಂಪುಟದಲ್ಲಿ ಸಮಿತಿ ರಚನೆ ಸಂಬಂಧ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಎರಡು ತಿಂಗಳ ಅವಧಿಯಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗುವುದು ಎಂದು ಡಿಸಿಎಂ ಪರಮೇಶ್ವರ್ ಭರವಸೆ ನೀಡಿದರು.