ನವದೆಹಲಿ: ಮಾರುಕಟ್ಟೆಯಲ್ಲಿ ಏರಿಳಿತ ಕಾಣುತ್ತಿರುವ ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ ಕೈಗೊಳ್ಳಲಾಗಿದ್ದು, ಕೆಜಿಗೆ 60 ರೂ. ದರ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು: ನಮಗಿಂತ ತಮಿಳುನಾಡಿಗೆ ಹೆಚ್ಚು ಅನುಕೂಲ: ಮುಖ್ಯಮಂತ್ರಿ ಸಿದ್ದರಾಮಯ್ಯ


ದೆಹಲಿಯ ಕೃಷಿ ಭವನದಲ್ಲಿ ಇಂದು ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಟೊಮೆಟೊ ವ್ಯಾನ್‌ಗಳಿಗೆ ಚಾಲನೆ ನೀಡಿ ಬೆಲೆ ಸ್ಥಿರತೆ ಬಗ್ಗೆ ತಿಳಿಸಿದರು.


ದೆಹಲಿ, ಎನ್‌ ಸಿ ಆರ್‌ನ ಚಿಲ್ಲರೆ ಮಾರುಕಟ್ಟೆಗಳಲ್ಲಿ ಟೊಮೆಟೊ ಬೆಲೆ ಏರಿಳಿತ ಕಾಣುತ್ತಿದ್ದು, ಸ್ಥಿರತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.


ಟೊಮೆಟೋಗೆ ಚಿಲ್ಲರೆ ಬೆಲೆ ಪ್ರತಿ ಕಿಜಿಗೆ ₹ 60 ನಿಗದಿಪಡಿಸಲಾಗಿದೆ. ಅಲ್ಲದೇ, ಪ್ರಮುಖ 18 ಸ್ಥಳಗಳಲ್ಲಿ ಮಾರಾಟ ಮಾಡಲಾಗುವುದು. ಗ್ರಾಹಕರ ಅನುಕೂಲ ಮತ್ತು ಬೇಡಿಕೆಗೆ ಅನುಗುಣವಾಗಿ ಮಾರಾಟ ಸ್ಥಳಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ ಎಂದು ಸಚಿವ ಜೋಶಿ ತಿಳಿಸಿದರು.


ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಟೊಮೆಟೊ ವ್ಯಾನ್‌ಗಳು ದೆಹಲಿ- ಎನ್‌ಸಿಆರ್ ಪ್ರದೇಶಗಳಲ್ಲಿ ಲಭ್ಯವಿರುತ್ತವೆ ಎಂದರು.


ಇದನ್ನೂ ಓದಿ: ನಟಿ ಕಂಗನಾ ರಣಾವತ್‌ ಅಕ್ಕ ಯಾರು ಗೊತ್ತಾ? ಅಂದು ಪ್ರಪೋಸ್ ರಿಜೆಕ್ಟ್‌ ಮಾಡಿದಕ್ಕೆ ಈಕೆ ಮೇಲಾಗಿತ್ತು ಆಸಿಡ್‌ ಅಟ್ಯಾಕ್!!


ದೆಹಲಿ, ಕೋಲಾರ ಮತ್ತು ರಾಜಸ್ಥಾನದ ಮಾರುಕಟ್ಟೆಗಳಿಂದ ಟೊಮೆಟೊ ಖರೀದಿಸಿ, ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಪ್ರತಿ ಕೆಜಿಗೆ 60 ರೂ. ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ