ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಾದ್ಯಂತ  ಕೊರೊನಾವೈರಸ್ (Coronavirus) ಕೋವಿಡ್19 ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕಾ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯದೇ ಮೃತದೇಹಗಳ ಅಂತ್ಯಸಂಸ್ಕಾರ ನೆರವೇರಿಸುವದನ್ನು CRPC ಕಲಂ 144 ರಡಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಬಾಗಲಕೋಟೆ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್-19 (Covid-19) ತಡೆಗಟ್ಟಲು ವ್ಯವಸ್ಥಿತ ನಿರ್ವಹಣೆಗಾಗಿ ಐಸೋಲೇಶನ್ ಕೇಂದ್ರಗಳಲ್ಲಿ ಮತ್ತು ಕ್ವಾರಂಟೈನ್ ಕೇಂದ್ರಗಳಲ್ಲಿ ಕೊರೊನಾ ಸೋಂಕಿನಿಂದ ಮೃತರಾಗುವವರನ್ನು ಭಾರತ ಸರಕಾರವು ಹೊರಡಿಸಿದ ಕೋವಿಡ್-19 ಮೃತದೇಹಗಳ ನಿರ್ವಹಣಾ ಮಾರ್ಗಸೂಚಿಗಳನ್ವಯ ಜಿಲ್ಲಾ ಆಡಳಿತದ ಉಸ್ತುವಾರಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು. 


ಒಂದೂ ಕೊರೋನಾ ಪ್ರಕರಣ ವರದಿಯಾಗದಂತೆ ಕ್ರಮ ವಹಿಸಲು ಸಚಿವ ಬಸವರಾಜ್ ಎಚ್ಚರಿಕೆ


ಸ್ವಾಭಾವಿಕವಾಗಿ ಮೃತರಾದರೂ ಸಹಿತ ಅಂತ್ಯ ಸಂಸ್ಕಾರ ನೆರವೇರಿಸುವ ಮುನ್ನ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಈ ಆದೇಶ ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51(2)ರಡಿ ಶಿಕ್ಷೆಗೆ ಒಳಪಡಿಸಲಾಗುವುದೆಂದು ಆದೇಶದಲ್ಲಿ ತಿಳಿಸಿದ್ದಾರೆ.


CET, NEET ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕೊಡುಗೆ GetCETGo


ಮತಗಟ್ಟೆವಾರು ವ್ಯಕ್ತಿಗಳ ಆರೋಗ್ಯ ಮಾಹಿತಿ ಸಂಗ್ರಹ:
ರಾಜ್ಯಾದ್ಯಂತ ಹರಡುತ್ತಿರುವ ಕೊರೊನಾ ವೈರಸ್ ತಡೆಗಟ್ಟಲು ಅನೇಕ ಮುಂಜಾಗ್ರತಾ ಕ್ರಮಗಳನ್ನು ಜರುಗಿಸಲಾಗುತ್ತಿದೆ. ಜಿಲ್ಲೆಯಲ್ಲಿ ಎಲ್ಲ ಜನರು ಹೊಂದಿರಬಹುದಾದ ಕಾಯಿಲೆಗಳ ಬಗ್ಗೆ ಸರ್ವೆ ಮಾಡುವುದು ಅವಶ್ಯವಾಗಿದ್ದು, ಚುನಾವಣಾ ಆಯೋಗದಿಂದ ನೇಮಕಗೊಂಡ ಜಿಲ್ಲೆಯ ಎಲ್ಲ ಮತಗಟ್ಟೆ ಮಟ್ಟದ ಅಧಿಕಾರಿಗಳು ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ಪ್ರತಿ ಮನೆಗಳಿಗೆ ಭೇಟಿ ನೀಡಿ ಪ್ರತಿ ವ್ಯಕ್ತಿಗಳಿಗೆ ಸಂಬಂಧಿಸಿದ ಕಾಯಿಲೆಗಳ ಮಾಹಿತಿ ಸಂಗ್ರಹಿಸಬೇಕಾಗಿದ್ದು ಸನ್ನದ್ದರಾಗಿರಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.