ಸಹಕಾರಿ ಸಂಸ್ಥೆಗಳ ಮಧ್ಯಮಾವಧಿ-ದೀರ್ಘಾವಧಿ ಕೃಷಿ ಸಾಲ; ಬಡ್ಡಿ ಮನ್ನಾ ಮಾಡಿ ಸರ್ಕಾರದ ಆದೇಶ
ಈ ಸೌಲಭ್ಯವು ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ 2023ರ ಡಿಸೆಂಬರ್ 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.
ಬೆಂಗಳೂರು: ರಾಜ್ಯದ ಸಹಕಾರಿ ಸಂಸ್ಥೆಗಳ ಮೂಲಕ ಸಾಲ ಪಡೆದು 2023ರ ಡಿಸೆಂಬರ್ 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದ್ದಲ್ಲಿ ಅದರ ಮೇಲಿನ ಬಡ್ಡಿಯನ್ನು ಮನ್ನಾ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯನವರು ಬಡ್ಡಿ ಮನ್ನಾಗೆ ಸಂಬಧಿಸಿದಂತೆ ಘೋಷಣೆ ಮಾಡಿದ್ದರು. ಇದೀಗ ರಾಜ್ಯ ಸರ್ಕಾರ ಈ ಬಗ್ಗೆ ಅಧಿಕೃತವಾಗಿ ಆದೇಶ ಹೊರಡಿಸಿದೆ. ರೈತರು ರಾಜ್ಯದ ಸಹಕಾರ ಸಂಘಗಳಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು 2024ರ ಫೆಬ್ರವರಿ 29ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ ಅಥವಾ ಬ್ಯಾಂಕುಗಳಿಗೆ ಪೂರ್ತಿಯಾಗಿ ಮರುಪಾವತಿಸಿದಲ್ಲಿ ಈ ಮೊತ್ತಕ್ಕೆ ಬಾಕಿ ಇರುವ ಬಡ್ಡಿಯನ್ನು ಮನ್ನಾ ಮಾಡಲು ಮಂಜೂರಾತಿ ನೀಡಲಾಗಿದೆ.
ಇದನ್ನೂ ಓದಿ: ಬಿಜೆಪಿ - ಜೆಡಿಎಸ್ ನಲ್ಲಿ ನಾಯಕತ್ವದ ಕೊರತೆ, ಶೆಟ್ಟರ್ ಸೆಳೆಯಲು ತಂತ್ರ : ಡಿಸಿಎಂ ಡಿ.ಕೆ ಶಿವಕುಮಾರ್
ಬಡ್ಡಿ ಮನ್ನಾಗೆ ಸರ್ಕಾರದ ಷರತ್ತುಗಳೇನು..?
ಈ ಸೌಲಭ್ಯವು ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ 2023ರ ಡಿಸೆಂಬರ್ 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ. ಈ ಯೋಜನೆ ಕೃಷಿಯೇತರ ಸಾಲಗಳಿಗೆ ಅನ್ವಯವಾಗುವುದಿಲ್ಲ ಮತ್ತು ಮೇಲೆ ತಿಳಿಸಿರುವ ಸಂಸ್ಥೆಗಳನ್ನು ಹೊರತುಪಡಿಸಿ ಇತರೆ ಸಹಕಾರ ಸಂಸ್ಥೆಗಳಲ್ಲಿ ಪಡೆದ ಸಾಲಗಳಿಗೆ ಅನ್ವಯಿಸುವುದಿಲ್ಲ. ನಬಾರ್ಡ್ ಗುರುತಿಸಿದ ಕೃಷಿ ಅಥವಾ ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅಂದರೆ ಲಘು ನೀರಾವರಿ, ಭೂ ಅಭಿವೃದ್ಧಿ, ಸಾವಯವ ಕೃಷಿ, ಪಶುಸಂಗೋಪನೆ ಹಾಗೂ ಹೈನುಗಾರಿಕೆ, ಮೀನು ಕೃಷಿ, ರೇಷ್ಮೆ ಕೃಷಿ, ಕೃಷಿ ಯಾಂತ್ರೀಕರಣ, ಪ್ಲಾಂಟೇಷನ್ ಹಾಗೂ ತೋಟಗಾರಿಕೆ ಅಭಿವೃದ್ಧಿ ಉದ್ದೇಶಗಳಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ. ಇದಲ್ಲದೆ ರಾಜ್ಯ ಸರ್ಕಾರದ ಬಡ್ಡಿ ರಿಯಾಯತಿ ಬದ್ಧತೆಯಡಿ ವಿತರಿಸಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.
ಕೃಷಿ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಂದ ಪಡೆದು 2023ರ ಡಿಸೆಂಬರ್ 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲನ್ನು 2024 ಫೆಬ್ರವರಿ 29ರೊಳಗೆ ಸಂಬಂಧಪಟ್ಟ ಸಂಸ್ಥೆಗಳಿಗೆ ಸಾಲ ಪಡೆದ ರೈತರು ಮರುಪಾವತಿ ಮಾಡಿದಲ್ಲಿ ಸದರಿ ಸಾಲಗಳ ಮೇಲಿನ ಮರುಪಾವತಿ ದಿನಾಂಕದವರೆಗಿನ ಬಡ್ಡಿಯನ್ನು ಮನ್ನಾ ಮಾಡಿ ಸಂಬಂಧಪಟ್ಟ ಸಹಕಾರಿ ಸಂಸ್ಥೆಗಳಿಗೆ ಸರ್ಕಾರ ಭರ್ತಿ ಮಾಡುವುದು. ಈ ಯೋಜನೆಯು ಮಾರಿಟೋರಿಯಂ ಅವಧಿಯಲ್ಲಿ ಸುಸ್ತಿಯಾಗಿರುವ ಬಡ್ಡಿಗೂ ಸಹ ಅನ್ವಯವಾಗುತ್ತದೆ. ಯೋಜನೆಯಡಿ ಪ್ರಾಥಮಿಕ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಗೆ ರೈತರು ಮರುಪಾವತಿಸುವ ಸುಸ್ತಿ ಸಾಲದ ಅಸಲಿಗಿಂತ ಹಿಂದಿನ ಅವಧಿಯ ಸಾಲವಾಗಿದ್ದರೆ, ಬಡ್ಡಿ ಪಾವತಿಸಲು ಬಾಕಿ ಇದ್ದ ದಿನಾಂಕದಿಂದ ಸಾಲ ಮರುಪಾವತಿ ದಿನಾಂಕದವರೆಗೆ ಸಾಲಗಳಿಗೆ ನಿಗದಿಮಾಡಲಾಗಿರುವ ಬಡ್ಡಿ, ದರ ಅಥವಾ ಶೇ.12ರ ಬಡ್ಡಿದರ ಇದರಲ್ಲಿ ಯಾವುದು ಕಡಿಮೆಯೋ ಅಂತಹ ಬಡ್ಡಿ ಆಧಾರದಲ್ಲಿ ಸಹಕಾರ ಸಂಘಗಳಿಗೆ ಸರ್ಕಾರದ ವತಿಯಿಂದ ಬಡ್ಡಿ ಸಹಾಯಧನವನ್ನು ಭರಿಸಲಾಗುವುದು.
ಇದನ್ನೂ ಓದಿ: ATMಗೆ ಬರುವ ವೃದ್ದರೇ ಎಚ್ಚರ..! ಹಣ ಕಳೆದುಕೊಳ್ಳುವ ಮುನ್ನ ಈ ಸುದ್ದಿ ನೋಡಿ..
2004ರ ಏಪ್ರಿಲ್ 1ರ ನಂತರದಲ್ಲಿನ ಸಾಲಗಳಿಗೆ ಆಯಾ ವರ್ಷದಲ್ಲಿ ರೈತರು ಪಾವತಿಸಬೇಕಾದ ಬಡ್ಡಿ ಮತ್ತು ಸರ್ಕಾರ ಪಾವತಿಸಬೇಕಾದ ಬಡ್ಡಿ ಸಹಾಯಧನದ ಒಟ್ಟು ಬಡ್ಡಿ ಅಥವಾ ಗರಿಷ್ಠ ಶೇ.12 ಇದರಲ್ಲಿ ಯಾವುದು ಕಡಿಮೆಯೋ ಆ ಬಡ್ಡಿಯನ್ನು ಸಂಬಂಧಿಸಿದ ಸಹಕಾರ ಸಂಸ್ಥೆಗಳಿಗೆ ಸರ್ಕಾರದಿಂದ ಭರಿಸಲಾಗುವುದು. 10 ಲಕ್ಷ ರೂ.ಕ್ಕಿಂತ ಹೆಚ್ಚಿನ ಸಾಲವನ್ನು ಸಾಮಾನ್ಯ ಬಡ್ಡಿ ದರದಲ್ಲಿ ವಿತರಿಸಿದರೂ ಸಹ ಆಯಾ ವರ್ಷದಲ್ಲಿ 10 ಲಕ್ಷ ರೂ.ಗಳವರೆಗೆ ನಿಗದಿಪಡಿಸಿದ ಬಡ್ಡಿ ದರದನ್ವಯ ಬಡ್ಡಿ ಮನ್ನಾ ಮೊತ್ತ ಕ್ಲೇಮ್ ಮಾಡಬೇಕು. ಈ ಯೋಜನೆಯಲ್ಲಿ ಮರುಪಾವತಿಸುವ ಸಾಲಗಳಿಗೆ ಯಾವುದೇ ಸುಸ್ತಿ ಬಡ್ಡಿ, ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬಡ್ಡಿ, ವಸೂಲಿ ವೆಚ್ಚ ಹಾಗೂ ಇತರೆ ವೆಚ್ಚಗಳನ್ನು ಸಹಕಾರ ಸಂಸ್ಥೆಗಳು ಕ್ಲೇಮ್ ಮಾಡುವಂತಿಲ್ಲವೆಂದು ತಿಳಿಸಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.