ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಬಗ್ಗೆ ಬಜೆಟ್ ಅಧಿವೇಶನದ ನಂತರ ಕಾನೂನು ಹಾಗೂ ಸಂವಿಧಾನ ತಜ್ಞರೊಂದಿಗೆ ಸಭೆ ಕರೆದು ಸಂವಿಧಾನಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಪಂಚಮಸಾಲಿ ಸಮುದಾಯವನ್ನು ರಾಜ್ಯ 2A ಪಟ್ಟಿಗೆ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರಿಸಲು ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಂಚಮಸಾಲಿ ಶಾಸಕರ ನಿಯೋಗವು ಇಂದು ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮನವಿ ಮಾಡಿತು. ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಪಂಚಮಸಾಲಿ  ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿದಲ್ಲಿ ಅವರೂ ಮುಖ್ಯವಾಹಿನಿಗೆ ಬರಲು ಅನುಕೂಲವಾಗುತ್ತದೆ ಎಂದು ಸ್ವಾಮೀಜಿ ತಿಳಿಸಿದರು.


ಇದನ್ನೂ ಓದಿ: ನಮ್ಮ ಸರ್ಕಾರದ ಅವಧಿಯಲ್ಲಿ ಕಮಿಷನ್ ದಂಧೆಗೆ ಸಂಪೂರ್ಣ ಕಡಿವಾಣ: ಸಿಎಂ ಸಿದ್ದರಾಮಯ್ಯ ಭರವಸೆ


ಹಿಂದಿನ ಸರ್ಕಾರ  ಮೀಸಲಾತಿ ವಿಚಾರದಲ್ಲಿ ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಗೊಂದಲ ಸೃಷ್ಟಿಸಿದೆ. ಮೂಗಿಗೆ ತುಪ್ಪ ಸವರುವ ಬದಲು ಹಣೆಗೆ ತುಪ್ಪ ಸವರಿದೆ ಎಂದ ಸಿಎಂ ಸಿದ್ದರಾಮಯ್ಯ, ಮೀಸಲಾತಿ ವಿಚಾರವಾಗಿ ಆತುರದ ನಿರ್ಧಾರ ಸಲ್ಲದು. ಸಂವಿಧಾನಾತ್ಮಕ ಹಾಗೂ ಕಾನೂನಿನ ಚೌಕಟ್ಟಿನಲ್ಲಿ ತೀರ್ಮಾನ ಮಾಡಬೇಕು. ಹೀಗಾಗಿ ಸಭೆ ಕರೆದು ಕೂಲಂಕುಷವಾಗಿ ಚರ್ಚಿಸಲಾಗುವುದು ಎಂದು ಹೇಳಿದರು.


ನುಡಿದಂತೆ ನಡೆದವರು ನೀವು


ಚರ್ಚೆ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು, ‘ನುಡಿದಂತೆ ನಡೆದ ಮುಖ್ಯಮಂತ್ರಿಗಳು ನೀವು. ಬಸವಣ್ಣ ಅವರ ಭಾವಚಿತ್ರವನ್ನು ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದವರು, ರಾಣಿ ಚನ್ನಮ್ಮ ಜಯಂತಿಯನ್ನು ಮೊದಲ ಬಾರಿಗೆ ಆಚರಿಸಿದವರು ನೀವು’ ಎಂದು ಜಯಮೃತ್ಯುಂಜಯ ಸ್ವಾಮಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.


ಮೀಸಲಾತಿ ವಿಚಾರದಲ್ಲಿ ಕಾಟಾಚಾರ ಮಾಡಲ್ಲ


ಕಾಟಾಚಾರಕ್ಕಾಗಿ ಮೀಸಲಾತಿ ಕೊಡಬಾರದು. ಬಿಜೆಪಿಗೆ ಮೀಸಲಾತಿ ಕೊಡುವುದು ಬೇಕಾಗಿರಲಿಲ್ಲ. ಅದಕ್ಕೇ ನ್ಯಾಯಾಲಯಕ್ಕೆ ಹೋದರೆ ಬಿದ್ದೋಗುವ ರೀತಿಯಲ್ಲಿ ಕಾಟಾಚಾರಕ್ಕೆ ಕೊಟ್ಟರು. ಇದರಿಂದ ಗೊಂದಲ ಸೃಷ್ಟಿಯಾಗಿದೆ. ಸಂವಿಧಾನ ತಜ್ಞರ ಜೊತೆಗೆ ಚರ್ಚಿಸಿ ಗೊಂದಲ ಬಗೆಹರಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿರು.


ಇದನ್ನೂ ಓದಿ: 12ನೇ ದಿನಕ್ಕೆ ಕಾಲಿಟ್ಟ ‘ಶಕ್ತಿ’: 139 ಕೋಟಿ ಮೌಲ್ಯ ದಾಟಿದ ಮಹಿಳಾ "ಶಕ್ತಿ" ಸಂಚಾರ!


ಇನ್ನು ಸಿಎಂ ಸಿದ್ದರಾಮಯ್ಯರ ಮಾತಿಗೆ ಪ್ರತಿಕ್ರಿಯಿಸಿದ ಶಾಸಕ ವಿನಯ್ ಕುಲಕರ್ಣಿ, ‘ಮುಸ್ಲಿಂ ಸಮುದಾಯದ ಪಾಲಿನ ಮೀಸಲಾತಿಯನ್ನು ಕಿತ್ತು ಕೊಟ್ಟಿದ್ದನ್ನು ನಾವುಗಳು ಅವತ್ತೇ ವಿರೋಧಿಸಿದ್ದೆವು ಎಂದು ಹೇಳಿದರು. ಸಭೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಸಮುದಾಯದ 15 ಮಂದಿ ಶಾಸಕರು ಹಾಗೂ ಪಂಚಮಸಾಲಿ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.