ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ರಾಮನಗರ ಜಿಲ್ಲೆಯ ಸಂಗಮದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನಕ್ಕೆ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆಯನ್ನು ನಿಷೇಧಗೊಳಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Whatsapp: ವಾಟ್ಸಾಪ್‌ನಲ್ಲಿ ಬರಲಿದೆ ಮನಮೋಹಕ ಫೀಚರ್!


2005 ರ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿಯಮಗಳನ್ನು ಈ ಪಾದಯಾತ್ರೆ ಉಲ್ಲಂಘನೆ ಮಾಡಿದ್ದು ಈ ಕೂಡಲೇ ಪಾದಯಾತ್ರೆಯನ್ನು ನಿಲ್ಲಿಸಿ, ಈ ಪಾದಯಾತ್ರೆಗೆ ಬಾಗವಹಿಸುವ ಜನರ ಹಾಗೂ ವಾಹನಗಳ ಅಂತರ್ ಜಿಲ್ಲೆ ಹಾಗೂ ರಾಮನಗರ ಜಿಲ್ಲೆಯ ಸಂಚಾರ ನಿಷೇಧಿಸಿದೆ. ಹಾಗೂ ಪಾದಯಾತ್ರೆ ತಡೆಯಲು ರಾಮನಗರ ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಾರಿಗೆ ಆಯುಕ್ತರಿಗೆ ನಿರ್ದೇಶನ ನೀಡಿದೆ.


ಇದನ್ನೂ ಓದಿ: Jio ತಂದಿದೆ ಅಗ್ಗದ ಯೋಜನೆ! ಈ ಪ್ಲಾನ್ ಮೂಲಕ ಪಡೆಯಿರಿ 2GB ಡೇಟಾ, 336 ದಿನಗಳ ಅನಿಯಮಿತ ಕರೆ


ಈ ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿಯಮಗಳಡಿ ಹಾಗೂ ಐಪಿಸಿ 188 ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.


ಕರ್ನಾಟಕ ಹೈಕೋರ್ಟ್ ಇಂದು ಮೇಕೆದಾಟು ಪಾದಯಾತ್ರೆ ಇಂದ ಕೊರೊನಾ ಸೋಂಕು ಹೆಚ್ಚಾಗಲಿದ್ದು ಜನರ ಜೀವಕ್ಕೆ ಹಾನಿ ಉಂಟಾಗಲಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾಯಾಲಯ ಸರ್ಕಾರಕ್ಕೆ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಹಾಗೂ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ಸರ್ಕಾರ ಪಾದಯಾತ್ರೆ ತಡೆಯಲು ಯಾವ ರೀತಿ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿತ್ತು.


ಈ ಹಿನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಆದೇಶ ಪತ್ರ ಹೊರಡಿಸಿದ್ದು ಮೇಕೆದಾಟು ಪಾದಯಾತ್ರೆ ಕೂಡಲೇ ನಿಷೇಧಗೊಳಿಸಿ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.


Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.