ಬೆಂಗಳೂರು: ಮೇಕೆದಾಟು ಯೋಜನೆ(Mekedatu Project)ಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಜನವರಿ 9ರಿಂದ 19ರವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕಾನೂನಾತ್ಮಕ ಅಡೆತಡೆಗಳಿಲ್ಲದಿದ್ದರೂ ರಾಜ್ಯ ಬಿಜೆಪಿ ಸರ್ಕಾರ(BJP Govt.)ದ ವಿಳಂಬ ಧೋರಣೆಯಿಂದ ನೆನೆಗುದಿಗೆ ಬಿದ್ದಿರುವ ಮೇಕೆದಾಟು ಯೋಜನೆಗೆ ಆಗ್ರಹಿಸಿ ನಾವು ಪಾದಯಾತ್ರೆ ನಡೆಸುತ್ತೇವೆ’ ಎಂದು ಹೇಳಿದ್ದಾರೆ.
‘ಈ ಪಾದಯಾತ್ರೆ ನಮ್ಮ ಪಕ್ಷದ ಕಾರ್ಯಕ್ರಮವಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಆಯೋಜಿಸಿರುವ ಹೋರಾಟ. ಎಲ್ಲಾ ಸಂಘ ಸಂಸ್ಥೆಗಳು, ಆಸಕ್ತರು ಇದರಲ್ಲಿ ಭಾಗವಹಿಸುವಂತೆ ವಿನಮ್ರವಾಗಿ ಮನವಿ ಮಾಡುತ್ತೇನೆ. ಮೇಕೆದಾಟು ನಮ್ಮ ಹಕ್ಕು, ನಮ್ಮ ಹಕ್ಕಿಗಾಗಿ ಹೋರಾಡೋಣ. 1968ರಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಮೇಕೆದಾಟು ಯೋಜನೆ ಜಾರಿಗೆ ಚಿಂತನೆ ಮಾಡಿತ್ತು. ಆದರೆ ಜಲ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದುದ್ದರಿಂದ ಯೋಜನೆ ಜಾರಿ ಸಾಧ್ಯವಾಗಿರಲಿಲ್ಲ. 2013ರಲ್ಲಿ ನಾವು ಅಧಿಕಾರಕ್ಕೆ ಬಂದಮೇಲೆ ಮೇಕೆದಾಟು ಯೋಜನೆ(Mekedatu Project)ಯ ಯೋಜನಾ ವರದಿ ಸಿದ್ಧಪಡಿಸಿದ್ದೆವು’ ಅಂತಾ ಸಿದ್ದರಾಮಯ್ಯ(Siddaramaiah) ಟ್ವೀಟ್ ಮಾಡಿದ್ದಾರೆ.
ಕಾನೂನಾತ್ಮಕ ಅಡೆತಡೆಗಳಿಲ್ಲದಿದ್ದರೂ ರಾಜ್ಯ @BJP4Karnataka ಸರ್ಕಾರದ ವಿಳಂಬ ಧೋರಣೆಯಿಂದಾಗಿ ನೆನೆಗುದಿಗೆ ಬಿದ್ದಿರುವ ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಜನವರಿ 9 ರಿಂದ 19 ರ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ. 1/7#Mekedatu
— Siddaramaiah (@siddaramaiah) December 21, 2021
ಇದನ್ನೂ ಓದಿ: Omicron Variant: ಉಡುಪಿಯಲ್ಲಿ 2 ಒಮಿಕ್ರಾನ್ ಕೇಸ್ ಪತ್ತೆ, ಆತಂಕ ಬೇಡವೆಂದ ಡಿಸಿ
‘ಪ್ರವಾಹ, ಅತಿವೃಷ್ಟಿ ಮುಂತಾದ ಕಾರಣಗಳಿಂದ ಹರಿವು ಹೆಚ್ಚಾದ ಸಂದರ್ಭದಲ್ಲಿ ಸಮುದ್ರದ ಪಾಲಾಗಿ ವ್ಯರ್ಥವಾಗುವ ನೀರನ್ನು ಸಂಗ್ರಹಿಸಿ, ಬೇಸಿಗೆ ಸಮಯದಲ್ಲಿ ಕೃಷಿ, ವಿದ್ಯುತ್ ಉತ್ಪಾದನೆ ಮುಂತಾದ ಉದ್ದೇಶಗಳಿಗಾಗಿ ಬಳಕೆ ಮಾಡಿಕೊಳ್ಳುವುದು ಮೇಕೆದಾಟು ಯೋಜನೆಯ ಉದ್ದೇಶ. ಬೆಂಗಳೂರು ನಗರದ ಶೇ.30ರಷ್ಟು ಜನರಿಗೆ ಕಾವೇರಿ ನೀರಿನ ಪೂರೈಕೆ ಆಗುತ್ತಿಲ್ಲ. ಮೇಕೆದಾಟು ಯೋಜನೆಯಿಂದ ಬೆಂಗಳೂರು(Bengaluru) ಸೇರಿ ಸುಮಾರು 10 ಜಿಲ್ಲೆಗಳ 2.5 ಕೋಟಿ ಜನರಿಗೆ ಅನುಕೂಲ ಆಗಲಿದೆ. ಹೀಗಾಗಿ ಕೂಡಲೇ ಬಿಜೆಪಿ ಸರ್ಕಾರ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.
1968 ರಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಮೇಕೆದಾಟು ಯೋಜನೆ ಜಾರಿಗೆ ಚಿಂತನೆ ಮಾಡಿತ್ತು, ಆದರೆ ಜಲ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದುದ್ದರಿಂದ ಯೋಜನೆ ಜಾರಿ ಸಾಧ್ಯವಾಗಿರಲಿಲ್ಲ. 2013 ನಾವು ಅಧಿಕಾರಕ್ಕೆ ಬಂದಮೇಲೆ ಮೇಕೆದಾಟು ಯೋಜನೆಯ ಯೋಜನಾ ವರದಿ ಸಿದ್ಧಪಡಿಸಿದ್ದೆವು. 3/7#Mekedatu
— Siddaramaiah (@siddaramaiah) December 21, 2021
‘ಹಸಿರು ನ್ಯಾಯಾಧೀಕರಣ, ಸುಪ್ರೀಂಕೋರ್ಟ್‌ಗಳು ಯೋಜನೆ ಜಾರಿಗೆ ಆಕ್ಷೇಪ ಮಾಡುತ್ತಿಲ್ಲ. ಯೋಜನಾ ವರದಿ ಸಿದ್ಧವಾಗಿದೆ, ತಮಿಳುನಾಡಿಗೆ ಕಾನೂನಾತ್ಮಕವಾಗಿ ವಿರೋಧಿಸುವ ಹಕ್ಕು ಇಲ್ಲ, ಇಷ್ಟೆಲ್ಲಾ ಅನುಕೂಲಗಳಿದ್ದಾಗ್ಯೂ ಯೋಜನೆಯ ಅನುಷ್ಠಾನ ಆರಂಭವಾಗಿಲ್ಲ. ರಾಜ್ಯ ಬಿಜೆಪಿ ಸರ್ಕಾರ ಎಲ್ಲದಕ್ಕೂ ಕೊರೊನಾ ನೆಪ ಹೇಳಿದ್ದು ಸಾಕು. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ(BJP)ಅಧಿಕಾರಕ್ಕೆ ಬರಬೇಕು. ಡಬಲ್ ಇಂಜಿನ್ ಸರ್ಕಾರ ಇದ್ದರೆ ಕೇಂದ್ರದಿಂದ ಹಣದ ಹೊಳೆ ಹರಿಯುತ್ತದೆ ಎಂದಿದ್ದರು, ಈಗ ಹೋಗಿ ಹಣ ತಂದು ಅಭಿವೃದ್ಧಿ ಕೆಲಸ ಮಾಡಲಿ’ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ರಾಜ್ಯ @BJP4Karnataka ಸರ್ಕಾರ ಎಲ್ಲದಕ್ಕೂ ಕೊರೊನಾ ನೆಪ ಹೇಳಿದ್ದು ಸಾಕು.
ರಾಜ್ಯದಲ್ಲಿ ಮತ್ತು ಕೇಂದ್ರ @BJP4India ಅಧಿಕಾರಕ್ಕೆ ಬರಬೇಕು. ಡಬಲ್ ಇಂಜಿನ್ ಸರ್ಕಾರ ಇದ್ದರೆ ಕೇಂದ್ರದಿಂದ ಹಣದ ಹೊಳೆ ಹರಿಯುತ್ತದೆ ಎಂದಿದ್ದರು, ಈಗ ಹೋಗಿ ಹಣ ತಂದು ಅಭಿವೃದ್ಧಿ ಕೆಲಸ ಮಾಡಲಿ. 7/7#Mekedatu— Siddaramaiah (@siddaramaiah) December 21, 2021
ಇದನ್ನೂ ಓದಿ: ಕರ್ನಾಟಕ ಪೊಲೀಸ್ ಇಲಾಖೆಗೆ ಟ್ರಾನ್ಸ್‌ಜೆಂಡರ್‌ಗಳ ನೇಮಕ.. ತೃತೀಯ ಲಿಂಗಿಗಳಿಂದ ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.