ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ರಾಜ್ಯ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಒಂದು ಸಾವಿರ ಕೋಟಿ ಅನುದಾನ ಘೋಷಿಸಿರುವ ನಿರ್ಧಾರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D K Shivakumar) ಅವರು ಸ್ವಾಗತಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಪ್ರತಿಕ್ರಿಯಿಸಿರುವ ಅವರು "ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಬಜೆಟ್‌ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿರುವುದು ಸ್ವಾಗತಾರ್ಹ.ನೀರಿನ ವಿಷಯದಲ್ಲಿ ಕರ್ನಾಟಕವನ್ನು ಸ್ವಾವಲಂಬಿಯಾಗಿಸುವ ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ" ಎಂದು ಹೇಳಿದ್ದಾರೆ.


"ಬಸವರಾಜ ಬೊಮ್ಮಾಯಿ ಅವರೇ ನಿಮಗೆ ನಮ್ಮನ್ನು ಮತ್ತೆ ಜೈಲಲ್ಲಿ ನೋಡುವ ಆಸೆ ಇದೆ, ನಮ್ಮನ್ನು ಜೈಲಿಗೆ ಹಾಕಿ"


"ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆಸಲಾದ ನಮ್ಮ ನೀರು ನಮ್ಮ ಹಕ್ಕು ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬ ಕನ್ನಡಿಗರಿಗೂ ಇದರ ಪ್ರತಿಫಲ ಸಲ್ಲುತ್ತದೆ.ಇದು ನಮ್ಮೆಲ್ಲರ ಗೆಲುವು. ಸಾಮೂಹಿಕ ಹೋರಾಟದಿಂದ ಹಕ್ಕುಗಳನ್ನು ಪಡೆಯಬಹುದು ಎಂಬುದಕ್ಕೆ ಇದೊಂದು ನಿದರ್ಶನ.ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು"ಎಂದು ಅವರು ಹೇಳಿದ್ದಾರೆ.


ಆದರೆ, ಕಳೆದ ಸಾಲಿನ ಬಜೆಟ್‌ನಲ್ಲಿ ಬೆಂಗಳೂರು ನಗರಕ್ಕೆ ಘೋಷಿಸಿದ್ದ ₹ 7,795 ಕೋಟಿ ವೆಚ್ಚದ ಕಾರ್ಯಕ್ರಮವನ್ನು ಸರ್ಕಾರ ಒಂದು ವರ್ಷ ಕಳೆದರೂ ಈಡೇರಿಸಿಲ್ಲ ಎಂಬುದು ಗಮನಾರ್ಹ. ಹಾಗಾಗಿ ಮಹತ್ವಾಕಾಂಕ್ಷೆಯ ಯೋಜನೆಗೆ ಸಾವಿರ ಕೋಟಿ ರೂಪಾಯಿ ಘೋಷಣೆ ಕೇವಲ ಭರವಸೆಯಾಗಿ ಉಳಿಯದೆ ತ್ವರಿತವಾಗಿ ಕಾರ್ಯಗತಗೊಳ್ಳಬೇಕು" ಎಂದು ಅವರು ಆಗ್ರಹಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.