Melukote Vairamudi Festival: ಇಂದಿನಿಂದ ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ

Melukote Vairamudi Festival: ಏ.1ರಂದು ವಿಶ್ವ ವಿಖ್ಯಾತ ವೈರಮುಡಿ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಏ.5ರಂದು ಚಲುವನಾರಾಯಣನ ತೆಪೋತ್ಸವ ಕಾರ್ಯಕ್ರಮ ನಡೆಯಲಿದೆ. ​

Written by - Zee Kannada News Desk | Last Updated : Mar 27, 2023, 03:04 PM IST
  • ಇಂದಿನಿಂದ ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನಡೆಯಲಿದೆ
  • ಇಂದಿನಿಂದ ಏ.8ರವರೆಗೆ ನಡೆಯಲಿರುವ ಅದ್ದೂರಿ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ
  • ವೈರಮುಡಿ ಬ್ರಹ್ಮೋತ್ಸವಕ್ಕೆ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ನಡೆಸಲಾಗಿದೆ
Melukote Vairamudi Festival: ಇಂದಿನಿಂದ ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ title=
ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಇಂದಿನಿಂದ ವಿಶ್ವವಿಖ್ಯಾತ  ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನಡೆಯಲಿದೆ. ಅದ್ದೂರಿ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ ಏ.8 ರವರೆಗೆ ಉತ್ಸವ ನಡೆಯಲಿದೆ.

ವೈರಮುಡಿ ಬ್ರಹ್ಮೋತ್ಸವಕ್ಕೆ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ನಡೆಸಲಾಗಿದೆ. ಏ.1ರಂದು ವಿಶ್ವ ವಿಖ್ಯಾತ ವೈರಮುಡಿ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಏ.5ರಂದು ಚಲುವನಾರಾಯಣನ ತೆಪೋತ್ಸವ ಕಾರ್ಯಕ್ರಮ ನಡೆಯಲಿದೆ. ವೈರಮುಡಿ ಉತ್ಸವ ಕಣ್ತುಂಬಿಕೊಳ್ಳಲು ಬರುವ ಲಕ್ಷಾಂತರ ಭಕ್ತರಿಗಾಗಿ ಮೂಲ ಭೂತ ಸೌಕರ್ಯದ ಸೌಲಭ್ಯ ಮಾಡಲಾಗಿದೆ.

ಇದನ್ನೂ ಓದಿ: Yadgiri: ಬಟ್ಟೆ ಅಂಗಡಿಗೆ ಬೆಂಕಿ, ದಂಪತಿ ಸಜೀವ ದಹನ!

ಏ.1ರಂದು ವೈರಮುಡಿ ಉತ್ಸವಕ್ಕೆ ಜಿಲ್ಲಾ ಖಜಾನೆಯಿಂದ ಆಭರಣಗಳನ್ನು ರವಾನಿಸಲಾಗಿದೆ. ಮೇಲುಕೋಟೆಯಲ್ಲಿ 5 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ವೈರಮುಡಿ ಉತ್ಸವಕ್ಕೆ ಸುಮಾರು 4 ಲಕ್ಷ ಭಕ್ತರು ಬರುವ ನಿರೀಕ್ಷೆ ಇದೆ. ಪೊಲೀಸ್ ಇಲಾಖೆಯಿಂದಲೂ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ವೈರಮುಡಿ ಉತ್ಸವ ಕಣ್ತುಂಬಿಕೊಳ್ಳುವಂತೆ ಡಿಸಿ ಹೆಚ್.ಎನ್.ಗೋಪಾಲಕೃಷ್ಣ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Protest by Banjara community: ಮಾಜಿ ಸಿಎಂ ಬಿಎಸ್ ವೈ  ಮನೆ ಮೇಲೆ ಬಂಜಾರ ಸಮುದಾಯದಿಂದ ಕಲ್ಲು ತೂರಾಟ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
   

Trending News