ಚಾಮರಾಜನಗರ: ಮಾನಸಿಕ ಒತ್ತಡವು ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಮಾಜಿ ಸಂಸದ ಆರ್.ಧ್ರುವನಾರಾಯಣ್ ಅವರನ್ನು ಬಲಿ ಪಡೆಯಿತು ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬೇಸರ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಕೊಳ್ಳೇಗಾಲದಲ್ಲಿ ಶನಿವಾರ ಮಾತನಾಡಿದ ಅವರು, ‘ಈ ಕೊಳಕು ರಾಜಕಾರಣದಲ್ಲಿ ಮಾನಸಿಕ ಒತ್ತಡ ರಾಜಕಾರಣಿಗಳಿಗೆ ಭಾದಿಸುತ್ತಿದೆ. ಇದು ದಲಿತ ರಾಜಕಾರಣಿಗಳಲ್ಲಿ ಹೆಚ್ಚು ಕಂಡುಬರುತ್ತಿದೆ. ಒತ್ತಡ ನಿರ್ವಹಣೆ ಬಗ್ಗೆ ನಾವು ಸೋಲುತ್ತಿದ್ದೇವೆ, ಆ ಒತ್ತಡವೇ ಅವರನ್ನು ಬಲಿ ಪಡೆಯಿತು’ ಎಂದು ಮಹೇಶ್ ಅವರು ಕಂಬನಿ ಮಿಡಿದಿದ್ದಾರೆ.


ಇದನ್ನೂ ಓದಿ: ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಕೊಡ್ತಿದ್ದಂತೆ ಫುಲ್ ಖುಷ್ ಆದ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ! ಯಾಕೆ ಗೊತ್ತಾ?


ಮತದಾರರು, ಕಾರ್ಯಕರ್ತರು ಹಾಗೂ ರಾಜಕೀಯ ಪಕ್ಷಗಳಲ್ಲಿ ನಾನು ವಿನಂತಿ ಮಾಡಿಕೊಳ್ಳುತ್ತೇನೆ. ಅನಗತ್ಯವಾಗಿ ನಾಯಕರ ಮೇಲೆ ಒತ್ತಡ ಹೇರಬೇಡಿ, ವಿಶೇಷವಾಗಿ ದಲಿತ ರಾಜಕಾರಣಿಗಳ ಮೇಲೆ ಹೆಚ್ಚು ಒತ್ತಡ ಹೇರಬೇಡಿ ಎಂದು ಮನವಿ ಮಾಡಿಕೊಂಡರು.


ಆರ್.ಧ್ರುವನಾರಾಯಣ ಚುನಾವಣಾ ಸಮಯದಲ್ಲಿ ಮಾತ್ರ ರಾಜಕಾರಣ ಮಾಡುತ್ತಿದ್ದರೇ, ಹೊರತು ಉಳಿದ ಸಮಯದಲ್ಲಿ ಅಭಿವೃದ್ಧಿ, ಜನಪರ  ಕಾಳಜಿ ಇದ್ದ ವ್ಯಕ್ತಿ. ಯಾವ ಪಕ್ಷವೇ ಆಗಿರಲಿ, ಯಾರೇ ಆಗಲಿ ಅವರ ಕೆಲಸ ಮಾಡಿ ಕೊಡುತ್ತಿದ್ದರು. ಎಲ್ಲರ ಜೊತೆಗೂ ಉತ್ತಮ ಬಾಂಧವ್ಯ ಹೊಂದಿದ್ದರು. ಧ್ರುವನಾರಾಯಣ ಅವರು ಮಾಡಬೇಕೆಂದುಕೊಂಡಿದ್ದ ಕೆಲಸಗಳನ್ನು ಅವರ ಅಭಿಮಾನಿಗಳ ಜೊತೆಗೆ ಸೇರಿಕೊಂಡು ನಾವು ಮಾಡೋಣ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಎನ್.ಮಹೇಶ್ ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ: ಹೃದಯಾಘಾತ: ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ನಿಧನ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.