ಮದುವೆ ಸಮಾರಂಭದಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ MES ಪುಂಡರ ಕಿರಿಕ್!
ಮದುವೆ ಸಮಾರಂಭದಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಎಂಇಎಸ್ ಪುಂಡರು ಮದುವೆ ಮನೆಯವರ ಜೊತೆಗೆ ವಾಗ್ವಾದಕ್ಕಿಳಿದಿದ್ದಾರೆ.
ಬೆಳಗಾವಿ: ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ಪುಂಡರು ಕಿರಿಕ್ ಮಾಡಿರುವ ಘಟನೆ ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಧಾಮಣೆ ಗ್ರಾಮದಲ್ಲಿ ಗುರುವಾರ(ಮೇ 26) ಸಂಜೆ ಈ ಘಟನೆ ನಡೆದಿದ್ದು, ಎಂಇಎಸ್ ಪುಂಡರ ಕಿರಿಕ್‍ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮದುವೆ ಬಳಿಕ ನವ ದಂಪತಿಗಳ ಮೆರವಣಿಗೆ ವೇಳೆ ಕನ್ನಡ ಹಾಡು ಹಾಕಲಾಗಿತ್ತು. ಕನ್ನಡ ಧ್ವಜ, ಹಾಡು ಹಾಕಿ ಮದುವೆ ಮನೆಯವರ ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ಕನ್ನಡ ಹಾಡು ಹಾಕಿ ಡ್ಯಾನ್ಸ್ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿ ಎಂಇಎಸ್ ಸಂಘಟನೆಯ ಕಾರ್ಯಕರ್ತರು ತಗಾದೆ ತೆಗೆದಿದ್ದಾರೆ.
ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜತೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಮಹತ್ವದ ಮಾತುಕತೆ
ಮದುವೆ ಸಮಾರಂಭದಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಎಂಇಎಸ್ ಪುಂಡರು ಮದುವೆ ಮನೆಯವರ ಜೊತೆಗೆ ವಾಗ್ವಾದಕ್ಕಿಳಿದಿದ್ದಾರೆ. ಮದುಮಗನ ಸಹೋದರ ಹಾಗೂ ನಾಲ್ವರ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮದುವೆ ಮನೆಯಲ್ಲಿ ಕಿರಿಕ್ ಮಾಡಿರುವ ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ. ಕನ್ನಡ, ನಾಡು-ನುಡಿ ವಿಚಾರದಲ್ಲಿ ಗಡಿಭಾಗದಲ್ಲಿ ಆಗಾಗ ಕಿರಿಕ್ ಮಾಡುತ್ತಲೇ ಇರುವ ಎಂಇಎಸ್ ಪುಂಡರು ಇದೀಗ ಮದುವೆ ಮನೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಕನ್ನಡಿಗರ ಮೇಲೆ ಹಲ್ಲೆ ನಡೆಸಿರುವುದು ದುರಂತವೇ ಸರಿ. ಎಂಇಎಸ್ ಪುಂಡರ ಈ ಪುಂಡಾಟಕ್ಕೆ ಕಡಿವಾಣ ಹಾಕಲು ಪೊಲೀಸರು ಕ್ರಮ ಕೈಗೊಳ್ಳಬೇಕಾಗಿದೆ.
ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್ ನಿಂದ ಸಿಲಿಂಡರ್ ಸ್ಫೋಟ, ಯುವಕನ ಸಾವು
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.