ಕನ್ನಡ ರಾಜ್ಯೋತ್ಸವದಂದು ಕರಾಳ ದಿನಾಚರಣೆ : MES ಹಾರಾಟಕ್ಕೆ ಬ್ರೇಕ್ ಹಾಕುತ್ತಾ ಸರ್ಕಾರ..?
ನಾಡದ್ರೋಹಿ ಎಂಇಎಸ್ ಮತ್ತೆ ಪುಂಡಾಟ ಮೆರೆದಿದೆ. ಪ್ರತಿವರ್ಷದಂತೆ ಕನ್ನಡಿಗರ ಹೆಮ್ಮೆಯ ಹಬ್ಬ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಣೆ ಮಾಡಲು ಹೊರಟಿದೆ. ಅಲ್ಲದೆ, ಚಳಿಗಾಲದ ಅಧಿವೇಶನದ ಮೊದಲ ದಿನವೇ ಮಹಾಮೇಳಾವ್ ನಡೆಯಲು ತಯಾರಿ ನಡೆಸಿದೆ.
ಬೆಳಗಾವಿ : ನಾಡದ್ರೋಹಿ ಎಂಇಎಸ್ ಮತ್ತೆ ಪುಂಡಾಟ ಮೆರೆದಿದೆ. ಪ್ರತಿವರ್ಷದಂತೆ ಕನ್ನಡಿಗರ ಹೆಮ್ಮೆಯ ಹಬ್ಬ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಣೆ ಮಾಡಲು ಹೊರಟಿದೆ. ಅಲ್ಲದೆ, ಚಳಿಗಾಲದ ಅಧಿವೇಶನದ ಮೊದಲ ದಿನವೇ ಮಹಾಮೇಳಾವ್ ನಡೆಯಲು ತಯಾರಿ ನಡೆಸಿದೆ.
ಎಂಇಎಸ್ ಒಂದಲ್ಲ ಒಂದು ರೀತಿಯಿಂದ ಸದಾ ಕಾಲು ಕೆರೆದು ಜಗಳಕ್ಕೆ ಬರುತ್ತಿದೆ. ಸದ್ಯ ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಮುಂದಾಗಿದೆ. ಅಲ್ಲದೆ, ಚಳಿಗಾಲದ ಅಧಿವೇಶನದ ಮೊದಲ ದಿನವೇ ಮಹಾಮೇಳಾವ್ ನಡೆಯಲು ಸಿದ್ಧತೆ ನಡೆಸಿದೆ. ನವೆಂಬರ್1 ರಂದು ಕರಾಳ ದಿನಾಚರಣೆ ಆಚರಿಸಲು ಎಂಇಎಸ್ ತಯಾರಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕರಾಳ ದಿನದ ಪೋಸ್ಟರ್ ವೈರಲ್ ಆಗುತ್ತಿದೆ.
ಇದನ್ನೂ ಓದಿ:ಮಾದಪ್ಪನ ದೀಪಾವಳಿ ತೇರು ಸಂಪನ್ನ: ಡ್ರೋಣ್ ನಲ್ಲಿ ವೈಭವ ಸೆರೆ!!
ಹೌದು.. ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ಫೇಸ್ಬುಕ್ ಫೇಜ್‌ನಲ್ಲಿ ನಾಡದ್ರೋಹಿಗಳಿಂದ ಕರಾಳ ದಿನಾಚರಣೆ ಕುರಿತು ಪೋಸ್ಟ್ ಹಾಕಲಾಗಿದೆ. ಅಲ್ಲದೆ, ಚಳಿಗಾಲ ಅಧಿವೇಶನದ ಮೊದಲ ದಿನವೇ ಮಹಾಮೇಳಾವ್‌ಗೂ ತೀರ್ಮಾನ ಮಾಡಿರುವುದಾಗಿ ತಿಳಿಸಿದೆ. ಬೆಳಗಾವಿ ಸುವರ್ಣ ವಿಧಾನಸೌದದಲ್ಲಿ ಬರುವ ಡಿಸೆಂಬರ್ ತಿಂಗಳಲ್ಲಿ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಅಧಿವೇಶನದ ಸಂದರ್ಭದಲ್ಲಿ ಗಡಿ ಖ್ಯಾತೆ ತೆಗೆಯಲು ಎಂಇಎಸ್ ಪ್ಲ್ಯಾನ್ ಮಾಡುತ್ತಿದೆ.
ಚುನಾವಣಾ ವರ್ಷ ಆಗಿದ್ದರಿಂದ ರಾಜಕೀಯ ಬೆಳೆ ಬೆಯಿಸಿಕೊಳ್ಳಲು ಹುನ್ನಾರ್ ನಡೆಸಿರುವ ಎಂಇಎಸ್, ಮಾಜಿ ಶಾಸಕ ಮನೋಹರ ಕಿಣೇಕರ ನೇತೃತ್ವದಲ್ಲಿ ಮುಖಂಡ ಸಭೆ ನಡೆಸಿ ಕರಾಳ ದಿನಾಚರಣೆ, ಮಹಾಮೇಳಾವ್ ಆಚರಿಸಲು ನಿರ್ಧರಿಸಿದ್ದಾರೆ. ಪ್ರತಿ ವರ್ಷವೂ ಇದು ನಡೆಯುತ್ತಲೇ ಇದೆ. ಈ ಬಾರಿಯಾದರೂ ಎಂಇಎಸ್ ಪುಂಡರ ಹಾರಾಟಕ್ಕೆ ಸರ್ಕಾರ ಬ್ರೇಕ್ ಹಾಕುತ್ತಾ ಎಂದು ಕಾಯ್ದು ನೋಡಬೇಕಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.