ಬೆಂಗಳೂರು : ರಾಜ್ಯದಲ್ಲಿ ಕೊರೆಯುವ ಚಳಿಗೆ ಕರಾವಳಿ ಸೇರಿ ಉತ್ತರ ಕರ್ನಾಟಕ ತತ್ತರಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ಉಷ್ಣಾಂಶವು ದಾಖಲೆ ಪ್ರಮಾಣಕ್ಕಿಳಿದಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ ತುಮಕೂರು, ಚಿತ್ರದುರ್ಗ ಸೇರಿ ಹಲವು ಭಾಗದಲ್ಲಿ ಚಳಿ ಹೆಚ್ಚಾಗಿದೆ. ಹೀಗಾಗಿ, ಹವಾಮಾನ ಇಲಾಖೆಯುವು ಮುಂದಿನ ಎರಡು ದಿನ ಶೀತ ಗಾಳಿ ಅಬ್ಬರದ ಎಚ್ಚರಿಕೆ ಸಂದೇಶ ನೀಡಿದೆ.
ಅತೀ ಶೀತ ವಾತಾವರಣದ ಬಗ್ಗೆ ಮುನ್ಸೂಚನೆ ಬಗ್ಗೆ ಮಾಹಿತಿ ನೀಡಿದ ಹವಾಮಾನ ಇಲಾಖೆಯ ತಜ್ಞರು, ಕರಾವಳಿ ಭಾಗ, ಉತ್ತರ ಕರ್ನಾಟಕ ಭಾಗದಲ್ಲಿ 5 ರಿಂದ6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಿಗೆ ಶೀತ ಗಾಳಿ ಬಗ್ಗೆ ಮುನ್ಸೂಚನೆ ನೀಡಿದೆ. ಅಲ್ಲದೆ, ನಿನ್ನೆ ರಾಯಚೂರು ಜಿಲ್ಲೆಯಲ್ಲಿ ಅತೀ ಕನಿಷ್ಠ ಉಷ್ಣಾಂಶ 6.0 ಡಿ.ಸೆ. ದಾಖಲಾಗಿದೆ. ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ಕನಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 5 ರಿಂದ 6 ಡಿಗ್ರಿ ಸೆಲ್ಷಿಯಸ್ ಕಡಿಮೆ ಸಾಧ್ಯತೆ ಇದೆ. ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3 ರಿಂದ 4 ಡಿಗ್ರಿ ಸೆಲ್ಷಿಯಸ್, ಕಡಿಮೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : ಆರು ವರ್ಷದ ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಿಯತಮ ಆತ್ಮಹತ್ಯೆ
ಬೆಂಗಳೂರಿನಲ್ಲಿ ಉಷ್ಣಾಂಶವು 10-12 ಡಿಗ್ರಿ ಸೆಲ್ಸಿಯಸ್ ಗೆ ಕುಸಿದು, ಅತೀ ಕಡಿಮೆ ಉಷ್ಣಾಂಶ ದಾಖಲಾಗಿದೆ. ನಗರದಲ್ಲಿ ಮುಂದಿನ 24 ಗಂಟೆಗಳು ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅತೀ ಹೆಚ್ಚು ಮಂಜು ಕವಿಯುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳ ಕಾಲ ಚಳಿಯ ಚಳಿಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ವಿಧಾನಸಭಾ ಚುನಾವಣೆ-2023ರ ಪೂರ್ವ ಸಿದ್ಧತೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಮಿಷನರ್ ಪರಿಶೀಲನೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.