ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಸಂಪರ್ಕ ಹಾಗೂ ಮಹಾನಗರಗಳ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈಗ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಹಲವು ಭರಪೂರ ಘೋಷಣೆಗಳನ್ನು ಘೋಷಿಸಿದೆ.


COMMERCIAL BREAK
SCROLL TO CONTINUE READING

ಇದರಲ್ಲಿ ಪ್ರಮುಖವಾಗಿ ಬೆಂಗಳೂರು ಹೊರತುಪಡಿಸಿ ಉಳಿದ ರಾಜ್ಯದಲ್ಲಿನ ನಗರಗಳಲ್ಲಿ ಮೆಟ್ರೋ ರೈಲು ಸಾರಿಗೆಯನ್ನು ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಈಗ ರಾಜ್ಯಸರ್ಕಾರ ಕಾರ್ಯಪ್ರವತ್ತರಾಗಿದೆ.ಅದರಲ್ಲಿ ಪ್ರಮುಖವಾಗಿ ಈಗ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡ,ಮೈಸೂರು ಮತ್ತು  ಮಂಗಳೂರುಗಳಲ್ಲಿ ಮೆಟ್ರೋ ರೈಲು ಯೋಜನೆ ಬಗ್ಗೆ ಪೂರ್ವ ಕಾರ್ಯ ಸಾಧ್ಯತಾ ವರದಿ ತಯಾರಿಸಲು ಪರಿಶೀಲನೆ ನಡೆಸುವಂತೆ ಸರ್ಕಾರ ಬಜೆಟ್ ನಲ್ಲಿ  ಪ್ರಸ್ತಾಪಿಸಿದೆ.


ಒಂದು ವೇಳೆ ಈ ಯೋಜನೆಯನ್ನು ರಾಜ್ಯ ಸರ್ಕಾರ ಕಾರ್ಯರೂಪಕ್ಕೆ ತಂದಿದ್ದೆ ಆದಲ್ಲಿ ಕರ್ನಾಟಕವು ಟೈರ್-2 ನಗರಗಳಲ್ಲಿ ಮೆಟ್ರೋ ರೈಲ್ ಯೋಜನೆಯನ್ನು ಘೋಷಿಸಿದ ಮೊದಲ ರಾಜ್ಯ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ.