ಬೆಂಗಳೂರು: ಧಾರ್ಮಿಕ ಕೇಂದ್ರ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ನಿಷೇಧಿತ ಅವಧಿಯಲ್ಲಿ ಧ್ವನಿ ವರ್ಧಕ ಬಳಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.
ಹೈಕೋರ್ಟ್ ಆದೇಶ ಪಾಲನೆ ಮಾಡುವುದು ಎಲ್ಲರ ಕರ್ತವ್ಯ. ಮುಂಜಾನೆ ಹಾಗೂ ರಾತ್ರಿ ಅವಧಿಯಲ್ಲಿ ಮೈಕ್ ಬಳಸುತ್ತಿರವವರಿಗೆ 200 ಕ್ಕಿಂತ ಹೆಚ್ಚು ಮಂದಿಗೆ ನೊಟೀಸ್ ನೀಡಲಾಗಿದೆ. ಆದಾಗ್ಯೂ ಕಾನೂನು ಉಲ್ಲಂಘಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಇದನ್ನು ಓದಿ: ‘2023 ಮತ್ತೆ ಅಧಿಕಾರಕ್ಕೆ ಬರುತ್ತೇವೆಂದು ಕನಸು ಕಾಣದಿರಿ, ಜನ ಮೂರ್ಖರಲ್ಲ’
ಈಗಾಗಲೇ 6 ತಿಂಗಳ ಹಿಂದೆ ಹೈಕೋರ್ಟ್ ಆದೇಶಿಸಿದೆ. ಹೈಕೋರ್ಟ್ ನಿರ್ದೇಶನದಂತೆ ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಮಸೀದಿ, ಮಂದಿರ ಎಲ್ಲಾ ಸೇರಿದಂತೆ ನೋಟಿಸ್ ನೀಡಲಾಗಿದೆ. ಮಸೀದಿ ಮಂದಿರ ಅಲ್ಲ, ಕಾರ್ಖಾನೆಗಳಿಗೆ, ಪಬ್ ಗಳಿಗೆ ಕೂಡ ನೋಟೀಸ್ ನೀಡಿದ್ದಾರೆ. ಅಲ್ಲದೆ ಧರ್ಮ ಮುಖಂಡರ ಜೊತೆ ಸಭೆ ನಡೆಸಲಾಗಿದೆ. ಅವರಿಗೂ ಮಾರ್ಗದರ್ಶನ ನೀಡಲಾಗಿದೆ. ಅದರಂತೆ ಧರ್ಮಗುರುಗಳು ನಡೆದುಕೊಂಡಿದ್ದಾರೆ.
ಇದನ್ನು ಓದಿ: Viral Video: ಕಾಲೇಜು ವಿದ್ಯಾರ್ಥಿನಿಯರ ನಡುವೆ ನಡೀತು ಬೀದಿಕಾಳಗ..!
ಹೈಕೋರ್ಟ್ ಆದೇಶ ಪ್ರಕಾರ ಎಲ್ಲರೂ ಪಾಲನೆ ಮಾಡಲೇಬೇಕು.ಉಲ್ಲಂಘನೆ ಮಾಡಿದವರಿಗೆ ಶಿಕ್ಷೆ ಆಗುತ್ತೆ. ನಿಯಮ ಉಲ್ಲಂಘಿಸಿದ ಧಾರ್ಮಿಕ ಕೇಂದ್ರಗಳಲ್ಲಿ ಈಗಾಗಲೇ ಮೈಕ್ ಗಳನ್ನು ಜಪ್ತಿ ಮಾಡಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಬಾಲ ಬಿಚ್ಚಿದ್ರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.