ರಾಜ್ಯ ಬಜೆಟ್ 2019: ಹಾಲಿನ ಪ್ರೋತ್ಸಾಹಧನ ಪ್ರತಿ ಲೀಟರ್​ಗೆ ಒಂದು ರೂ. ಹೆಚ್ಚಳ

ಹಾಲು ಉತ್ಪಾದಕರ ಕ್ಷೇಮಾಭಿವೃದ್ಧಿಗಾಗಿ 2,502 ಕೋಟಿ ರೂ. ಅನುದಾನ ಮೀಸಲು

Last Updated : Feb 8, 2019, 03:25 PM IST
ರಾಜ್ಯ ಬಜೆಟ್ 2019: ಹಾಲಿನ ಪ್ರೋತ್ಸಾಹಧನ ಪ್ರತಿ ಲೀಟರ್​ಗೆ ಒಂದು ರೂ. ಹೆಚ್ಚಳ title=

ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ಹಾಲು ಉತ್ಪಾದಕರ ಕ್ಷೇಮಾಭಿವೃದ್ಧಿಗಾಗಿ 2,502 ಕೋಟಿ ರೂ. ಅನುದಾನ ಮೀಸಲಿರಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಲಿನ ಪ್ರೋತ್ಸಾಹಧನ ಪ್ರತಿ ಲೀಟರ್​ಗೆ ಒಂದು ರೂ. ಹೆಚ್ಚಳ ಮಾಡಿರುವುದಾಗಿ ಘೋಷಿಸಿದ್ದಾರೆ.

ಇದುವರೆಗೂ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿ​ಗೆ 5 ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಇದೀಗ ಇದರಲ್ಲಿ ಒಂದು ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಪ್ರತಿ ಲೀಟರ್​ಗೆ 6 ರೂಪಾಯಿ ಪ್ರೋತ್ಸಾಹಧನ ನೀಡುವುದಾಗಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

  • ಇದಲ್ಲದೆ ರಾಜ್ಯದ 15 ಜಿಲ್ಲೆಗಳಲ್ಲಿ ಸುಸಜ್ಜಿತ ಪಶುಚಿಕಿತ್ಸಾ ವಾಹನ ಒದಗಿಸಲು 2 ಕೋಟಿ ರೂ. ಅನುದಾನ.
  • 5 ಕೋಟಿ ರೂ. ವೆಚ್ಚದಲ್ಲಿ 10,000 ಬಡ ನಿರುದ್ಯೋಗಿ ಯುವಕ-ಯುವತಿಯರಿಗೆ "ನಾಟಿ ಕೋಟಿ ಸಾಕಾಣಿಕೆ"ಗೆ ಪ್ರೋತ್ಸಾಹ.
  • ದೇಶೀಯ ಕುರಿ ತಳಿಗಳಲ್ಲಿ ಅವಳಿ-ಜವಳಿ ಸಂತಾನೋತ್ತತ್ತಿಯನ್ನು ಅಭಿವೃದ್ಧಿ ಗೊಳಿಸುವ ಯೋಜನೆಗೆ ಪ್ರಯೋಗಾಲಯ ಸ್ಥಾಪನೆಗೆ 2 ಕೋಟಿ ರೂ. ಅನುದಾನ.
  • ರಾಜ್ಯದಲ್ಲಿ ಮಂಗನ ಕಾಯಿಲೆಯ ಲಸಿಕೆ ತಯಾರಿಕೆಗೆ ಬೆಂಬಲ ನೀಡಲು 5 ಕೋಟಿ ರೂ. ಅನುದಾನ.
  • ಕ್ಷೀರಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ 638 ಕೋಟಿ ರೂ. ಹಾಗೂ ಅಂಗನವಾಡಿ ಮಕ್ಕಳಿಗೆ 405 ಕೋಟಿ ರೂ. ವಿನಿಯೋಗ.

Trending News