Anand Singh: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ, ನನ್ನ ಮಾತಿಗೆ ಬದ್ಧ
ಈ ಹಿಂದೆ ಹೇಳಿದಂತೆ ನಾನು ಸಚಿವ ಸ್ಥಾನದ ತ್ಯಾಗಕ್ಕೆ ಸದಾ ಸಿದ್ಧವಾಗಿರುವೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಈಗಾಗಲೇ ಸರ್ಕಾರ ರಚನೆ ಮಾಡಲು ಕಾರಣೀಕರ್ತರಾದ ನಮಗೆಲ್ಲ ಸಚಿವ ಸ್ಥಾನ ನೀಡಿದ್ದಾರೆ ಎಂದರು.
ಹೊಸಪೇಟೆ: ಒಂದು ವರ್ಷದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗಿರುವುದು ಸಿಎಂ ಹಾಗೂ ಬಿಜೆಪಿ ಹೈಕಮಾಂಡಿಗೆ ತಲೆನೋವಾಗಿ ಪರಿಣಮಿಸಿದೆ.
ಆಡಳಿತ ಬಿಜೆಪಿ ಪಕ್ಷ(BJP Party)ದ ಹಲವು ಹಿರಿಯ ಶಾಸಕರು ನಮಗೂ ಅವಕಾಶ ಸಿಗಬಹುದು ಎಂದು ನೂತನ ಸಚಿವ ಸ್ಥಾನ ಪಟ್ಟಿ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ಇದೇ ಜ.13 ಅಥವಾ 14 ರಂದು 7 ಜನ ಶಾಸಕರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
Good News: Lithium ಗಾಗಿ ಇನ್ಮುಂದೆ ಭಾರತ ಚೀನಾ ಮೇಲೆ ಅವಲಂಭಿಸಬೇಕಾಗಿಲ್ಲ... ಕಾರಣ ಇಲ್ಲಿದೆ
ಇನ್ನು ಈ ವಿಚಾರವಾಗಿ ಮಾತನಾಡಿದ ಅರಣ್ಯ ಸಚಿವ ಆನಂದ್ ಸಿಂಗ್, ‘ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚು ಇರುವುದಾದರೆ ನನ್ನ ಸಚಿವ ಸ್ಥಾನ ತ್ಯಾಗಕ್ಕೆ ನಾನು ಸಿದ್ಧ’ ಎಂದು ಹೇಳಿದ್ದಾರೆ.
B.Sriramulu: ಸಿದ್ದುಗೆ 'ಭರ್ಜರಿ ಟಾಂಗ್' ನೀಡಿದ ಸಚಿವ ಶ್ರೀರಾಮುಲು..!
ಹೊಸಪೇಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಹೇಳಿದಂತೆ ನಾನು ಸಚಿವ ಸ್ಥಾನದ ತ್ಯಾಗಕ್ಕೆ ಸದಾ ಸಿದ್ಧವಾಗಿರುವೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಈಗಾಗಲೇ ಸರ್ಕಾರ ರಚನೆ ಮಾಡಲು ಕಾರಣೀಕರ್ತರಾದ ನಮಗೆಲ್ಲ ಸಚಿವ ಸ್ಥಾನ ನೀಡಿದ್ದಾರೆ ಎಂದರು.
ಇನ್ನುಳಿದವರಿಗೂ ಸಚಿವ ಸ್ಥಾನ ನೀಡುವ ವಿಶ್ವಾಸ ಇದೆ. ಸಿಎಂ ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ. ನಮ್ಮ ವಿಜಯನಗರ ಜಿಲ್ಲೆ ರಚನೆ ವಿಚಾರದಲ್ಲಿಯೂ ಕೊಟ್ಟ ಮಾತು ಈಡೇರಿಸಿದ್ದಾರೆ. ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚು ಇದ್ದರೆ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಾನು ಸಿದ್ಧ ಎಂದಿದ್ದೆ, ನಾನು ಈಗಲೂ ಆ ಮಾತಿಗೆ ಬದ್ಧನಾಗಿದ್ದೇನೆ ಎಂದು ಆನಂದ್ ಸಿಂಗ್ ತಿಳಿಸಿದರು.
Preetham Gowda: 'ಸಚಿವರಾಗಲು ಅರ್ಹತೆ-ಯೋಗ್ಯತೆ ಬೇಕು'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ