ರಾಮನಗರ: ಮೇಕೆದಾಟು ಯೋಜನೆಯನ್ನು ಜಾರಿ ಮಾಡುವ (Mekedatu Scheme implementation ) ಗಂಡಸ್ತನ ಇರೋದು ಬಿಜೆಪಿಗೆ ಮಾತ್ರ. ಕಾಂಗ್ರೆಸ್ ಪಕ್ಷಕ್ಕೆ ಇದನ್ನೆಲ್ಲ ಅನುಷ್ಠಾನಗೊಳಿಸುವ ಶಕ್ತಿಯೇ ಇಲ್ಲ. ಈ ವಿಷಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರಿಗೆ ಈ ಪೌರುಷವಿದೆಯಾ? ಈ ವಿಚಾರದಲ್ಲಿ ನಾನು ನೇರವಾಗಿ ಅವರಿಬ್ಬರಿಗೂ ಸವಾಲೆಸೆಯುತ್ತಿದ್ದೇನೆ. ತಾಕತ್ತಿದ್ದರೆ ಅವರು ಉತ್ತರಿಸಲಿ ಎಂದು ಸಚಿವ ಅಶ್ವತ್ಥ ನಾರಾಯಣ (Minister AshwathaNarayan) ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಮಂಗಳವಾರ ರಾಮನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ (DK Shivakumar) ಜಿಲ್ಲೆಯಿಂದ ಏಳು ಬಾರಿ ಶಾಸಕರಾಗಿದ್ದಾರೆ. ಸಚಿವರೂ ಆಗಿದ್ದವರು. ಇವರ ಸಹೋದರ ಎರಡು ಬಾರಿ ಸಂಸದರಾಗಿ ಆಯ್ಕೆ ಆಗಿದ್ದಾರೆ. ಆದರೆ ಇಷ್ಟು ವರ್ಷಗಳಲ್ಲಿ ಜಿಲ್ಲೆಗೆ ಇವರ ಕೊಡುಗೆ ಏನು? ಎಂದು ಪ್ರಶ್ನಿಸಿದ್ದಾರೆ. 


ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಪ್ರಧಾನಿ ಕರೆ: ಆರೋಗ್ಯದ ಜೊತೆಗೆ ರಾಜ್ಯದ ಕೋವಿಡ್ ಪರಿಸ್ಥಿತಿ ವಿಚಾರಿಸಿದ ಪಿಎಂ ಮೋದಿ


ಜಿಲ್ಲೆಯಲ್ಲಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿ, ಸಂಪನ್ಮೂಲವನ್ನು ಲೂಟಿ ಹೊಡೆದಿರುವುದನ್ನು ಬಿಟ್ಟರೆ ಇವರೇನು ಕಡಿದು ಕಟ್ಟೆ ಹಾಕಿದ್ದಾರೆ? ಎಂದು ಡಿಕೆ ಸಹೋದರರ (DK Brothers) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 


ಕಾಂಗ್ರೆಸ್ ಪಕ್ಷವು (Congress) ಸಾಂಕ್ರಾಮಿಕ ರೋಗ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಗಳನ್ನು ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ (Mekedatu Padayatre) ನಡೆಸುತ್ತಿದೆ. ಎರಡು ಸಹ ಜಾಮೀನುರಹಿತ ಅಪರಾಧಗಳು. ಕಾನೂನು ಮತ್ತು ಸುವ್ಯವಸ್ಥೆ ಮೇಲೆ ಸರ್ಕಾರ ನಿಗಾ ಇಟ್ಟಿದೆ. ಪರಿಸ್ಥಿತಿ ಬಿಗಡಾಯಿಸಿದರೆ ಕಠಿಣ ಕ್ರಮವನ್ನ ತೆಗೆದುಕೊಳ್ಳಬಹುದು ಎಂದಿದ್ದಾರೆ. 


ಜನಪ್ರತಿನಿಧಿಗಳಾದವರಿಗೆ ಜನರ ಕೆಲಸ ಮಾಡಲು ಸಮಯ ಸಾಕಾಗಲ್ಲ. ಅಂತಹುದರಲ್ಲಿ ಏಳು ಬಾರಿ ಶಾಸಕರಾಗಿ ಗೆದ್ದು ಬಂದ ಡಿ.ಕೆ.ಶಿವಕುಮಾರ್ ,ಜಿಲ್ಲೆಯ ಅಭಿವೃದ್ಧಿ ಮಾಡುವುದನ್ನು ಬಿಟ್ಟು ತಾವೇ ವ್ಯಾಪಾರ-ವಹಿವಾಟು ನಡೆಸಿಕೊಂಡು ಕೂತಿದ್ದರು. ಕಾಂಗ್ರೆಸ್ ಪಕ್ಷ ಜನರ ನಂಬಿಕೆ ಕಳೆದುಕೊಂಡಿದೆ. ನೈತಿಕವಾಗಿ ದಿವಾಳಿ ಎದ್ದು ಹೋಗಿರುವ ದಾರಿದ್ರ್ಯದಲ್ಲಿದೆ ಎಂದು ಕಿಡಿಕಾರಿದ್ದಾರೆ. 


ಮೇಕೆದಾಟು ಯೋಜನೆಯ (Mekedatu) ಜಾರಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಈ ವಿಚಾರ ಈಗ ನ್ಯಾಯಾಲಯದಲ್ಲಿದೆ. ಈ ಹಂತದಲ್ಲಿ ಕಾಂಗ್ರೆಸ್ ಪಾದಯಾತ್ರೆ ಕೈಗೊಳ್ಳುವ ಮೂಲಕ ಇಡೀ ವಿಚಾರಕ್ಕೆ ರಾಜಕೀಯ ಬಣ್ಣ ಬಳಿಯುತ್ತಿದೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾದರೆ ಬಿಜೆಪಿ ಸರ್ಕಾರವೇ ನೇರ ಹೊಣೆ: ಸಿದ್ದರಾಮಯ್ಯ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.