ಕೊಡಗು: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಕೖಷಿ ಸಚಿವ ಬಿ.ಸಿ.ಪಾಟೀಲ್ ಇಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್(B.C.Patil), ಸಮಸ್ಯೆಗಳಲ್ಲಿ ಸಿಲುಕಿರುವ ರೈತರು ಶ್ರಮವಹಿಸಿ ಸಮಸ್ಯೆಗಳ ಸುಳಿಯಿಂದ ಹೊರಬರುವಂತಾಗಬೇಕು. ಅದು ಬಿಟ್ಟು ಹೇಡಿಗಳಂತೆ ಸಾವಿಗೆ ಶರಣಾಗಬಾರದು. ಹೆಂಡತಿ, ಮಕ್ಕಳನ್ನು ನೋಡಿಕೊಳ್ಳಲಾಗದೇ ಆತ್ಮಹತ್ಯೆ ಮಾಡಿಕೊಳ್ಳುವಾತ ಹೇಡಿ ಎಂದು ಹೇಳಿದರು. ಭೂಮಿಯನ್ನು ನಂಬಿಕೊಂಡು ಜೀವನದಲ್ಲಿ ಮುಂದೆ ಬಂದ ಅನೇಕರು ನಮ್ಮ ಮುಂದಿದ್ದಾರೆ. ಹೀಗಿರುವಾಗ ಸಮಸ್ಯೆ ಇದೆ ಎಂದು ಸಾವಿಗೆ ಶರಣಾಗುವುದು ಎಷ್ಟು ಸರಿ? ಎಂದು ಸಚಿವ ಪಾಟೀಲ್ ಪ್ರಶ್ನಿಸಿದರು.
ರಾಜ್ಯ ಬಿಜೆಪಿಗೆ 'ಶಹಬ್ಬಾಸ್' ಎಂದ ಹೆಚ್. ಡಿ ಕುಮಾರಸ್ವಾಮಿ..!
ಈಸ ಬೇಕು, ಇದ್ದು ಜಯಿಸಬೇಕು ಎಂದು ಸಂದೇಶ ನೀಡಿದ ಸಚಿವ ಪಾಟೀಲ್, ಯಾರೇ ಆತ್ಮಹತ್ಯೆ ಮಾಡಿಕೊಂಡರೂ ಅದು ಹೇಡಿಗಳ ಕೆಲಸ. ಸಕಾ೯ರ ಸದಾ ರೈತರ ನೆರವಿಗೆ ಬದ್ಧವಾಗಿದೆ, ಯಾರೂ ಸಮಸ್ಯೆಗಳಿಗೆ ಹೆದರಬೇಕಾಗಿಲ್ಲ ಎಂದು ಸಚಿವರು ಭರವಸೆ ನೀಡಿದರು.