ಬಣಜಿಗ ಸಮುದಾಯದ 2A ಸಮಸ್ಯೆ ಪರಿಹರಿಸಲಾಗುವುದು : ಸಚಿವ ನಾಗೇಂದ್ರ

ಬಣಜಿಗ ಸಮಾಜ ಹಿಂದಿನ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ತಮ್ಮ ಸಮಾಜಕ್ಕೆ ದಕ್ಕೆಯಾದರೆ ಎಲ್ಲರೂ ಒಗ್ಗಟ್ಟಾಗಿ ಹೋರಾಡುವ ಗುಣ ಅವರಲ್ಲಿದೆ. ಬಣಜಿಗ ಸಮುದಾಯದ 2ಎ ಸಮಸ್ಯೆಯನ್ನು ಆದಷ್ಟು ಬೇಗ ಬಗೆ ಹರಿಸುತ್ತೆನೆ ಎಂದು ಸಚಿವ ಬಿ. ನಾಗೇಂದ್ರ ಹೇಳಿದರು.

Written by - Prashobh Devanahalli | Edited by - Krishna N K | Last Updated : Aug 14, 2023, 09:46 AM IST
  • ಬಣಜಿಗ ಸಮಾಜ ಹಿಂದಿನ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ.
  • ಬಣಜಿಗ ಸಮುದಾಯದ 2ಎ ಸಮಸ್ಯೆಯನ್ನು ಆದಷ್ಟು ಬೇಗ ಬಗೆ ಹರಿಸುತ್ತೆನೆ.
  • ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು ಹೇಳಿಕೆ.
ಬಣಜಿಗ ಸಮುದಾಯದ 2A ಸಮಸ್ಯೆ ಪರಿಹರಿಸಲಾಗುವುದು : ಸಚಿವ ನಾಗೇಂದ್ರ title=

ಬಳ್ಳಾರಿ : ಬಣಜಿಗ ಸಮಾಜದ ಪ್ರತಿಯೊಬ್ಬರೂ ಸ್ವಾಭಿಮಾನಕ್ಕೆ ಒತ್ತು ಕೋಡುತ್ತಾರೆ. ತಮ್ಮ ಸಮಾಜದವರ ಗೌರವಕ್ಕೆ ಧಕ್ಕೆ ಬಂದರೆ ಅವರು ಸಹಿಸುವುದಿಲ್ಲ ಇದಕ್ಕೆ ಉದಾಹರಣೆ ನಮ್ಮ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು ಹೇಳಿದರು.

ನಗರದ ಬಸವ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಅಭಿನಂದನಾ ಸಮಾರಂಭದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಮಾತನಾಡಿದರು. ಬಣಜಿಗ ಸಮಾಜ ಹಿಂದಿನ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ತಮ್ಮ ಸಮಾಜಕ್ಕೆ ದಕ್ಕೆಯಾದರೆ ಎಲ್ಲರೂ ಒಗ್ಗಟ್ಟಾಗಿ ಹೋರಾಡುವ ಗುಣ ಅವರಲ್ಲಿದೆ ಎಂದರು.

ಇದನ್ನೂ ಓದಿ: ಜಾತಿ ಪ್ರಮಾಣ ಪತ್ರ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹೋರಾಟ
 
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ನಮ್ಮ ಪಕ್ಷಕ್ಕೆ ಒಬ್ಬರೆ ಬಂದಿಲ್ಲಾ ಅವರ ಜೋತೆಗೆ ಎಲ್ಲಾ ಮುಖಂಡರನ್ನು ಕರೆ ತಂದಿದ್ದಾರೆ. ನಮ್ಮ ಪಕ್ಷಕ್ಕೆ ಅವರ ದೊಡ್ಡ ಕೊಡುಗೆ ಇದೆ ಎಂದ ಅವರು ಬಣಜಿಗ ಸಮುದಾಯದ 2ಎ  ಸಮಸ್ಯೆಯನ್ನು ಆದಷ್ಟು ಬೇಗ ಬಗೆ ಹರಿಸುತ್ತೆನೆ ಎಂದರು. ಇದೇ ವೇಳೆಯಲ್ಲಿ ಪತ್ತಿನ ಸಹಕಾರ ಬ್ಯಾಂಕ್ ನಲ್ಲಿ ಐದು ಲಕ್ಷ ಹಣವನ್ನು ಬ್ಯಾಂಕ್ ಠೇವಣಿ ಇಡುತ್ತೇನೆ ಎಂದು ಮಾನ್ಯ ಸಚಿವ ಬಿ.ನಾಗೇಂದ್ರ ಅವರು ಹೇಳಿದರು.

ಈ ಸಂದರ್ಭದಲ್ಲಿ ಲಿಂಗನಾಯಕನಹಳ್ಳಿಯ ಚನ್ನವೀರ ಸ್ವಾಮೀಜಿ, ಸಂಡೂರಿನ ಪ್ರಭು ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅಲ್ಲಂ ವೀರಭದ್ರಪ್ಪ, ಹಾಸ್ಯ ನಟ ದೊಡ್ಡಣ್ಣ, ಸಂಗಮೇಶ, ವೈ.ಎಂ ಸತೀಶ್, ಕೆ.ಎಸ್ ನಾಗರಾಜ್, ಪಂಪಾಪತಿ, ಶಾಂತ ಸೇರಿದಂತೆ ಇತರರು ಹಾಜರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News