Minister B. Nagendra Resign: "ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.


COMMERCIAL BREAK
SCROLL TO CONTINUE READING

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಬಿ.ನಾಗೇಂದ್ರ (Minister B. Nagendra) ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ಮಾತನಾಡಿ, "ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು" ಎಂದರು.


ಇದನ್ನೂ ಓದಿ- ಗ್ಯಾರಂಟಿ ಯೋಜನೆ ನಿಲ್ಲಿಸೋದಿಲ್ಲ.. ಗ್ಯಾರಂಟಿ ರಾಜಕೀಯ ಉದ್ದೇಶಕ್ಕಲ್ಲ: ಗೃಹ ಸಚಿವ ಡಾ ಜಿ ಪರಮೇಶ್ವರ್


ಸರ್ಕಾರ ರಾಜೀನಾಮೆ ಸ್ವೀಕರಿಸಲಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್ (DK Shivakumar), ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ  ಎಂದು ತಿಳಿಸಿದರು. 


ಲೋಕಸಭೆ ಚುನಾವಣೆ ಫಲಿತಾಂಶದ (Loksabha Election Result) ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, "ದೇಶದಲ್ಲಿ ಇಂಡಿಯಾ ಮೈತ್ರಿಕೂಟ ಉತ್ತಮ ಪ್ರದರ್ಶನ ನೀಡಿರುವುದಕ್ಕೆ ಸಂತೋಷವಾಗಿದೆ. ನಮ್ಮ ಮೈತ್ರಿಕೂಟ ಅಧಿಕಾರದ ಸನಿಹಕ್ಕೆ ಬಂದರೂ ಸರ್ಕಾರ ರಚನೆ ಪ್ರಯತ್ನದಿಂದ ದೂರವಿರಲು ನಿರ್ಧರಿಸಿದೆ. ಪ್ರತಿಪಕ್ಷಗಳು ಬಲಿಷ್ಠವಾಗಿರಬೇಕು ಎಂದು ದೇಶ ಅಭಿಪ್ರಾಯ ಪಟ್ಟಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ರಕ್ಷಣೆಗೆ ಹೊಸ ಭರವಸೆ ಸಿಕ್ಕಿದೆ. ಭವಿಷ್ಯದ ಬಗ್ಗೆ ಎಐಸಿಸಿ ಅಧ್ಯಕ್ಷರು ತೀರ್ಮಾನ ಮಾಡಲಿದ್ದಾರೆ" ಎಂದರು. 


ಇದನ್ನೂ ಓದಿ- ಸಿಎಂ ಸಿದ್ದರಾಮಯ್ಯ ಸಿಗರೇಟ್ ಬಿಟ್ಟಿದ್ದು ಯಾವಾಗಾ ಗೊತ್ತಾ? ಈ ಬಗ್ಗೆ ಅವರು ಹೇಳಿದ್ದೇನು?


ಗ್ಯಾರಂಟಿ ಯೋಜನೆ ಬಗ್ಗೆ ಡಿಸಿಎಂ ಹೇಳಿಕೆ: 
ಗ್ಯಾರಂಟಿ ಜಾರಿ ವಿಚಾರವಾಗಿ ಕೇಳಿದಾಗ ಉತ್ತರಿಸುತ್ತಾ, "ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗುವುದು ಎಂದು ಹೇಳಿ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕಾಂಗ್ರೆಸ್ ಪಕ್ಷ ಎಂದಿಗೂ ಇಟ್ಟ ಹೆಜ್ಜೆಯನ್ನು ಹಿಂದಕ್ಕೆ ಪಡೆಯುವುದಿಲ್ಲ" ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.