ಬೆಂಗಳೂರು: ಸಂವಿಧಾನ ಎಲ್ಲ ಹಕ್ಕುಗಳನ್ನು ನೀಡಿದೆ. ಮಾತುಕತೆ ಮೂಲಕ ಎಲ್ಲ ಸಮಸ್ಯೆಯನ್ನೂ ಬಗೆಹರಿಸಿಕೊಳ್ಳಬಹುದಾಗಿದೆ. ಅದು ಬಿಟ್ಟು ಪ್ರಜಾಪ್ರಭುತ್ವ ವಿರೋಧಿ ಕೃತ್ಯದಲ್ಲಿ ತೊಡಗದಿರಿ. ರೈತರೇ ನೆನಪಿರಲಿ, ಕಾಂಗ್ರೆಸ್ ನಿಮ್ಮ ಹೆಗಲ ಮೇಲೆ ಬಂದೂಕು ಇಟ್ಟು ಗುಂಡು ಹಾರಿಸುತ್ತಿದೆ ಎಂಬುದನ್ನು ಅರಿಯಿರಿ ಎಂದು ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಟ್ವೀಟ್ ಮೂಲಕ ರೈತರಲ್ಲಿ ಮನವಿ ಮಾಡಿದ ಸಚಿವ ಬಿ ಶ್ರೀರಾಮುಲು(B.Sriramulu), ಪ್ರತಿಭಟನೆ ಮಾಡುವ, ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡುವ ಹಕ್ಕು ಎಲ್ಲರಿಗೂ ಇದೆ. ಆದರೆ, ನಿಮ್ಮೆಲ್ಲ ಬೇಡಿಕೆ ಈಡೇರಿಸುತ್ತೇವೆ ಎಂದರೂ ದಿಲ್ಲಿಯಲ್ಲಿ ಪ್ರತಿಭಟನೆ ಹೆಸರಿನಲ್ಲಿ ನಡೆಸುತ್ತಿರುವ ಹಿಂಸಾಚಾರ, ಪೊಲೀಸರ ಮೇಲೆ ದಾಳಿ ಮಾಡಿದ್ದು ಸರಿಯಲ್ಲ ಎಂದರು.


Basavaraj Horatti: ಸಭಾಪತಿ ಸ್ಥಾನಕ್ಕೆ 'ಬಸವರಾಜ್ ಹೊರಟ್ಟಿ' ಹೆಸರು ಫೈನಲ್!


ರೈತರೇ, ಕುತಂತ್ರಿಗಳ ಮಾತು ಕೇಳದಿರಿ. ಕೃಷಿ ಕಾಯ್ದೆ ಕುರಿತು ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ರೈತರನ್ನು ದಾರಿತಪ್ಪಿಸುತ್ತಲೇ ಇವೆ. ಈಗಲೂ ದಿಲ್ಲಿಯ ಹಿಂಸಾಚಾರಕ್ಕೆ ಪ್ರತಿಪಕ್ಷಗಳ ಹುನ್ನಾರವೇ ಕಾರಣವಾಗಿದೆ. ಅನ್ನ ನೀಡುವ ಕೈಗಳು ಇಂತಹ ಷಡ್ಯಂತ್ರಕ್ಕೆ ಮರುಳಾಗಿ ಕತ್ತಿ ಹಿಡಿಯಬಾರದು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಇದೇ ವೇಳೆ ಶ್ರೀರಾಮುಲು ತಿಳಿಸಿದರು.


Ramesh Jarkiholi: ರಾಜ್ಯ ರಾಜಕೀಯದ ಬಗ್ಗೆ ಹೊಸ ಸುಳಿವು ಕೊಟ್ಟ ಬೆಳಗಾವಿ ಸಾಹುಕಾರ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.