ಬೆಂಗಳೂರು: 1999ರ ಲೋಕಸಭಾ ಚುನಾವಣೆ ವೇಳೆ ಅಮೇಥಿಯಲ್ಲಿ ಸೋಲಬಹುದೆಂಬ ಭೀತಿಯಿಂದ ಬಳ್ಳಾರಿಗೆ ಓಡೋಡಿ ಬಂದು ರಾಜಕೀಯ ಪುನರ್ ಜನ್ಮ ಪಡೆದಿದ್ದಕ್ಕೆ ಪ್ರತಿಯಾಗಿ, ಜಿಲ್ಲೆಯ ಜನತೆಗೆ ಚೂರಿ ಹಾಕಿ ಹೋಗಿದ್ದ ಕಾಂಗ್ರೆಸ್ ಪಕ್ಷದ ‘ಭಾರತ್ ತೋಡೋ ಯಾತ್ರೆ’ಗೆ ಹಾರ್ದಿಕ ಸುಸ್ವಾಗತ!’ವೆಂದು ಸಚಿವ ಬಿ.ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷದ ‘ಭಾರತ್ ಜೋಡೋ ಯಾತ್ರೆ’ಯನ್ನು ಟೀಕಿಸಿದ್ದಾರೆ. ‘ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಗೆದ್ದು, ಸೌಜನ್ಯಕ್ಕಾದರೂ ಜನತೆಗೆ ಧನ್ಯವಾದಗಳನ್ನು ತಿಳಿಸದೇ, ದೆಹಲಿಯಿಂದಲೇ ರಾಜೀನಾಮೆ ಪತ್ರ ಬಿಸಾಕಿದ ಖಾಯಂ ಎಐಸಿಸಿ AICC ಅಧ್ಯಕ್ಷರ ಮುದ್ದಿನ ಪುತ್ರ ಪಾದಯಾತ್ರೆಯ ಮೂಲಕ ಬಳ್ಳಾರಿಗೆ ಆಗಮಿಸುತ್ತಿರುವುದಕ್ಕೆ ನಿಮಗಿದೋ ಭವ್ಯ ಸ್ವಾಗತ’ ಅಂತಾ ಕುಟುಕಿದ್ದಾರೆ.


ಚರ್ಮಗಂಟು ರೋಗ ನಿರ್ವಹಣೆಗೆ 13 ಕೋಟಿ ಬಿಡುಗಡೆಗೆ ಸಿಎಂ ಬೊಮ್ಮಾಯಿ ಆದೇಶ


ಕಾಂಗ್ರೆಸ್ ಪಕ್ಷ ಬಳ್ಳಾರಿಗೆ ಜಿಲ್ಲೆಗೆ ಕೊಡುಗೆ ಏನು ?. ರಾಹುಲ್ ಗಾಂಧಿಯವರೇ ನಿಮ್ಮ ಭಾಷಣದಲ್ಲಿ ಹೇಳುತ್ತೀರಾ.? ನಿಮ್ಮಬೆಸುಗೆಯ ಯಾತ್ರೆಗೆ ಜನ ಬಗ್ಗೋದಿಲ್ಲ. ಅವರನ್ನು TAKEN FOR GRANTED ಮಾಡಿಕೊಂಡಿದ್ದೀರಾ? ಏಕಂದರೆ ಬಳ್ಳಾರಿ ಜಿಲ್ಲೆಗೆ ಸೋನಿಯಾ ಗಾಂಧಿಯವರು ಒಮ್ಮೆ ಲೋಕಸಭಾ ಸದಸ್ಯರಾಗಿ ಕೊಟ್ಟ ಕೊಡುಗೆ ಶೂನ್ಯ. ಅದನ್ನು ರಾಹುಲ್‌ ಗಾಂಧಿ ಮರೆತರೂ, ಜನ ಮರೆತಿಲ್ಲ. ಯಾತ್ರೆಯ ಮೂಲಕ ಮರೆ ಮಾಚಲು ಸಾಧ್ಯವಿಲ್ಲ’ವೆಂದು ಟೀಕಿಸಿದ್ದಾರೆ.


ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ಮೋದಿ ರಾಮನಾಮ ಜಪಿಸುವಂತೆ ಮಾಡಿದ್ದಾರೆ: ಬಿಜೆಪಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.