ಮಂಡ್ಯ : ಅಪಘಾತದಲ್ಲಿ ಗಾಯಗೊಂಡಿಡು ಆಂಬ್ಯುಲೆನ್ಸ್‌ಗಾಗಿ ಕಾಯುತ್ತಿದ್ದ ಇಬ್ಬರು ಬಾಲಕರನ್ನು ತಮ್ಮ ಎಸ್ಕಾರ್ಟ್‌ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ ಸಚಿವ ಬಿ. ಸಿ. ನಾಗೇಶ್‌ ಅವರು ಮಾನವೀಯತೆ ಮೆರೆದಿದ್ದಾರೆ.


COMMERCIAL BREAK
SCROLL TO CONTINUE READING

ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಕಾರ್ಯಕ್ರಮದಿಂದ ಮರಳಿ ಹೋಗುವಾಗ ರಸ್ತೆ ಅಪಘಾತದಲ್ಲಿ ಇಬ್ಬರು ಬಾಲಕರು ಗಾಯಗೊಂಡಿದ್ದು, ಆಸ್ಪತ್ರೆಗೆ ತೆರಳಲು ಆಂಬ್ಯುಲೆನ್ಸ್‌‌ಗಾಗಿ ಕಾಯುತ್ತಿದ್ದರು. ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವರಾದ ಬಿ.ಸಿ. ನಾಗೇಶ್ ಅವರು, ತಮ್ಮ ಭದ್ರತೆ ಕರ್ತವ್ಯದಲ್ಲಿದ್ದ ಪೊಲೀಸ್ ಎಸ್ಕಾರ್ಟ್ ವಾಹನದಲ್ಲಿ ಗಾಯಾಳು ಬಾಲಕರನ್ನು ಬೇಗ ಆಸ್ಪತ್ರೆಗೆ ಕರೆದೊಯ್ಯಲು ನೆರವಾದರು.


ಇದನ್ನೂ ಓದಿ: ಮಳವಳ್ಳಿ ಅತ್ಯಚಾರ ಪ್ರಕರಣ : ಮೃತ ಬಾಲಕಿ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ


ಮಾರ್ಗ ಮಧ್ಯೆ ಆಂಬ್ಯುಲೆನ್ಸ್ ಬಂದ ಬಳಿಕ ಇಬ್ಬರು ಬಾಲಕರನ್ನು ಆಸ್ಪತ್ರೆಗೆ ಕಳುಹಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸದ್ಯ ಸಚಿವರ ಈ ಕೆಲಸಕ್ಕೆ ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.