ಶಿಕ್ಷಕರ ನೇಮಕಾತಿ ಪರೀಕ್ಷೆ ಮೇಲೆ ಶಿಕ್ಷಣ ಇಲಾಖೆ ಹದ್ದಿನ ಕಣ್ಣು: ಸಚಿವ ಬಿ.ಸಿ.ನಾಗೇಶ್
ಪಿಎಸ್‌ಐ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಯ ನೇಮಕಾತಿ ಪರೀಕ್ಷೆ ಅಕ್ರಮ ಹಿನ್ನೆಲೆ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಮೇಲೆ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಬೆಂಗಳೂರು: ಪಿಎಸ್‌ಐ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಯ ನೇಮಕಾತಿ ಪರೀಕ್ಷೆ ಅಕ್ರಮ ಹಿನ್ನೆಲೆ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಮೇಲೆ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಇದನ್ನೂ ಓದಿ:ರಾತ್ರಿ ಸಾವು ಬೆಳಗ್ಗೆ ವ್ಯಕ್ತಿಗೆ ಮರುಜೀವ... ಶವ ಮೇಲಕ್ಕೆ ಎಸೆಯುವ ಭಕ್ತ ಸಮೂಹ..!
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ಶಿಕ್ಷಣ ಇಲಾಖೆ ತಲೆ ಕೆಡಿಸಿಕಂಡಿದೆ. ಶಿಕ್ಷಕರ ನೇಮಕಾತಿ ಕುರಿತು ಗೃಹ ಇಲಾಖೆಯ ಜೊತೆ ಶಿಕ್ಷಣ ಇಲಾಖೆ ಸಭೆ ಮಾಡಲಿದೆ. ಗೃಹ ಇಲಾಖೆಯ ಜೊತೆ ವಿಧಾನಸೌಧದಲ್ಲಿ ಮಧ್ಯಾಹ್ನ ಶಿಕ್ಷಣ ಇಲಾಖೆ ಸಭೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ಮುಂದಿನ ವಾರ ಪ್ರಾಥಮಿಕ ಶಾಲಾ ಶಿಕ್ಷಕರ ಪರೀಕ್ಷೆ ನಡೆಯಲಿದೆ. ಮೇ 21-22 ರಂದು ಎರಡು ದಿನ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿದೆ. ಶಿಕ್ಷಣ ಇಲಾಖೆ ಪ್ರಶ್ನೆ ಪತ್ರಿಕೆ ಗೌಪ್ಯತೆ ಹಾಗೂ ಎರಡು ದಿನಗಳ ನಡೆಯುವ ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ ಎಂದಿದ್ದಾರೆ.
ಇದನ್ನೂ ಓದಿ:ರಾಜಕೀಯವಾಗಿ ಬೇಳೆ ಬೇಯಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ಡಿಜಿಟಲ್ ತಂತ್ರಜ್ಞಾನದ ವಸ್ತುಗಳು ವಾಚ್ ಸೇರಿದಂತೆ ಯಾವುದಕ್ಕೂ ಪರೀಕ್ಷಾ ಕೇಂದ್ರದೊಳಗೆ ಅವಕಾಶ ನೀಡದಿರಲು ಚಿಂತನೆ ನಡೆಸುತ್ತಿದ್ದೇವೆ. ಸಿಸಿಟಿವಿ ಭದ್ರತೆ ಸೇರಿದಂತೆ ನಾನಾ ಟಫ್ ರೂಲ್ಸ್ ಅಳವಡಿಸಿಕೊಳ್ಳಲು ಮುಂದಾಗಿದ್ದೇವೆ. ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಕಠಿಣ ರೂಲ್ಸ್ ಜಾರಿ ಮಾಡಲು ಶಿಕ್ಷಣ ಇಲಾಖೆ ಚರ್ಚೆಗೆ ಮುಂದಾಗಿದೆ. ನೀಟ್ ಮಾದರಿಯಲ್ಲಿ ಪರೀಕ್ಷೆ ನಡೆಸಲು ಸಹ ಯೋಚಿಸುತ್ತಿದೆ ಎಂದು ಹೇಳಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.