ನವದೆಹಲಿ: ರಾಜ್ಯದಲ್ಲಿ ಜಲಾನಯನ ಹಾಗೂ ಸೂಕ್ಷ್ಮ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂಬ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ (BC Patil) ಬುಧವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವ ಕೈಲಾಶ್ ಚೌದರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.


COMMERCIAL BREAK
SCROLL TO CONTINUE READING

ನವದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಕೃಷಿ ಸಚಿವ ಕೈಲಾಶ್ ಚೌದರಿ ಅವರನ್ನು ಭೇಟಿಯಾದ ಬಿ.ಸಿ. ಪಾಟೀಲರು, ರಾಜ್ಯದ ಕೃಷಿ ಅಭಿವೃದ್ಧಿಗಳ ಕುರಿತು ಚರ್ಚಿಸಿ, ರೈತ (Farmers) ಕಲ್ಯಾಣ ನಿಧಿಯಡಿಯಲ್ಲಿ ರಾಜ್ಯಕ್ಕೆ ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಮನವಿ ಸಲ್ಲಿಸಿದರು.


ವೈಜ್ಞಾನಿಕ ಜಲಾನಯನ ಯೋಜನೆ ಮತ್ತು ಅನುಷ್ಠಾನದ ಮೂಲಕ ಮಣ್ಣಿನ ಮತ್ತು ಜಲ ಸಂರಕ್ಷಣಾ ಚಟುವಟಿಕೆಗಳಂತಹ ಬರ ನಿವಾರಣಾ ಚಟುವಟಿಕೆಗಳನ್ನು ಕೈಗೊಳ್ಳಲು ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ- ಡಬ್ಲ್ಯೂಡಿಸಿ ಯೋಜನೆಯಡಿ ಕರ್ನಾಟಕದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಜಲಾನಯನ ಅಭಿವೃದ್ಧಿಗೆ 53 ಲಕ್ಷ ಹೆಕ್ಟೇರ್ ಪ್ರದೇಶ ಲಭ್ಯವಿದ್ದು, ಈ ಪೈಕಿ ಪ್ರತಿ ವರ್ಷ 5 ಲಕ್ಷ ಹೆಕ್ಟೇರ್ ಪ್ರದೇಶದಂತೆ ಕೇಂದ್ರ ಸರ್ಕಾರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದರು.


ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ಕೈಲಾಶ್ ಚೌದರಿ, ಈ ಬಗ್ಗೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.