B.C.Patil: `ದೆಹಲಿಯಲ್ಲಿ ಪ್ರತಿಭಟನೆ ಮಾಡ್ತಿರೋರು ಭಯೋತ್ಪದಕರು`
ಸಚಿವ ಬಿ.ಸಿ ಪಾಟೀಲ್ ರೈತರ ಪ್ರತಿಭಟನೆಗೆ ಸಂಬಂಧಪಟ್ಟಂತೆ ನೀಡಿರುವ ಈ ಹೇಳಿಕೆಯೊ ಈಗ ವಿವಾದಕ್ಕೆ ಕಾರಣ
ಕೊಪ್ಪಳ: ದೆಹಲಿಯಲ್ಲಿ ಪ್ರತಿಭಟನೆ ಮಾಡ್ತಿರೋದು ಭಯೋತ್ಪದಕರು, ಇವರಿಗೆಲ್ಲ ಬೇರೆ ಬೇರೆ ದೇಶದ ಬೆಂಬಲವಿದ್ದು, ಕಾಂಗ್ರೆಸ್‌ನವರು ಸಾಥ್ ನೀಡುತ್ತಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.
ಇಂದು ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಬಿ.ಸಿ ಪಾಟೀಲ್(B.C.Patil), ಸ್ವಾತಂತ್ರ್ಯ ಚಳುವಳಿಯ ವೇಳೆಯಲ್ಲಿ ಗಾಂಧಿಜೀಯವರು ಕೂಡ ಶಾಂತಿಯಾಗಿ ತಮ್ಮ ಹೋರಾಟವನ್ನು ನಡೆಸಿದರು. ಕೆಂಪು ಧ್ವಜವನ್ನು ಇಳಿಸಿದ್ದಾರೆ ಅಂತ ಕಿಡಿಕಾರಿದರು.
ನವದೆಹಲಿಯ ಕೆಂಪುಕೋಟೆಗೆ ರೈತರು ನುಗ್ಗಿ ರೈತರು ಬೇರೆ ಧ್ವಜವೊಂದು ಹಾರಿಸಿದ್ದಾರೆ. ಈ ನಡುವೆ ರಾಜ್ಯದಲ್ಲೂ ಕೂಡ ರೈತರ ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇವರಲ್ಲದರ ನಡುವೆ ಸಚಿವ ಬಿ.ಸಿ ಪಾಟೀಲ್ ರೈತರ ಪ್ರತಿಭಟನೆಗೆ ಸಂಬಂಧಪಟ್ಟಂತೆ ನೀಡಿರುವ ಈ ಹೇಳಿಕೆಯೊ ಈಗ ವಿವಾದಕ್ಕೆ ಕಾರಣವಾಗಿದೆ. ಅಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಭಯೋತ್ಪದಕರು, ಅವರಿಗೆ ಪಾಕಿಸ್ತಾನ ಸಪೋರ್ಟ್ ಇದೇ ಅನ್ನುವುದರ ಮೂಲಕ ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.
BJP: ಖಾತೆ ಬದಲಾವಣೆಯಿಂದ ಬೇಸತ್ತು ರಾಜೀನಾಮೆಗೆ ಮುಂದಾದ ಸಚಿವರು!?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.