ಮನೆಯಲ್ಲಿಯೇ Corona Vaccine ಪಡೆದು ವಿವಾದಕ್ಕೆ ಗುರಿಯಾದ ಸಚಿವ BC Patil
ರಾಜ್ಯ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ (BC Patil) ಅವರು ಹಿರೇಕೆರೂರಿನ ತಮ್ಮ ಮನೆಯಲ್ಲೇ ಮಂಗಳವಾರ ಸರ್ಕಾರಿ ವೈದ್ಯರಿಂದ ಕೋವಿಡ್ ಲಸಿಕೆ (Covid Vaccine) ಪಡೆದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಅವರು ಮನೆಯಲ್ಲಿಯೇ ಲಸಿಕೆ ಪಡೆದಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಬೆಂಗಳೂರು : ನಿನ್ನೆಯಷ್ಟೇ ದೇಶಾದ್ಯಂತ ಕರೋನಾ ವ್ಯಾಕ್ಸಿನೇಷನ್ ಡ್ರೈವ್‌ನ ಎರಡನೇ ಹಂತ ಪ್ರಾರಂಭವಾಗಿದೆ. ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಸ್ವತಃ ಏಮ್ಸ್ ಆಸ್ಪತ್ರೆಗೆ ತೆರಳಿ ಸೋಮವಾರ ಕರೋನಾ ವೈರಸ್ ಲಸಿಕೆ (Corona Vaccine)ಯ ಮೊದಲ ಪ್ರಮಾಣವನ್ನು ಪಡೆದಿದ್ದಾರೆ. ಇದಲ್ಲದೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಅರೋಗ್ಯ ಸಚಿವ ಡಾ. ಹರ್ಷವರ್ಧನ್ ಸೇರಿದಂತೆ ಹಲವಾರು ಸಚಿವರು ಆಸ್ಪತ್ರೆಗೆ ತಲುಪಿ ಲಸಿಕೆ ಪಡೆದರು. ಆದರೆ ಕರ್ನಾಟಕದ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಮನೆಯಲ್ಲಿಯೇ ಕರೋನಾ ಲಸಿಕೆ ಪಡೆಯುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ.
ವಾಸ್ತವವಾಗಿ ರಾಜ್ಯ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ (BC Patil) ಅವರು ಹಿರೇಕೆರೂರಿನ ತಮ್ಮ ಮನೆಯಲ್ಲೇ ಮಂಗಳವಾರ ಸರ್ಕಾರಿ ವೈದ್ಯರಿಂದ ಕೋವಿಡ್ ಲಸಿಕೆ (Covid Vaccine) ಪಡೆದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಅವರು ಮನೆಯಲ್ಲಿಯೇ ಲಸಿಕೆ ಪಡೆದಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಸದ್ಯ ಈ ಕುರಿತಂತೆ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಜನಸಾಮಾನ್ಯರಿಗೂ ಲಭ್ಯವಾಗಲಿದೆ Corona Vaccine, ನೋಂದಣಿಯ ಸಂಪೂರ್ಣ ಪ್ರಕ್ರಿಯೆ ತಿಳಿಯಿರಿ
ಗಮನಾರ್ಹವಾಗಿ ಕೋವಿಡ್ ಮಾರ್ಗಸೂಚಿ ಪ್ರಕಾರ ಜಿಲ್ಲಾಡಳಿತ ನಿಗದಿಪಡಿಸಿದ ಸರ್ಕಾರಿ ಆಸ್ಪತ್ರೆ ಅಥವಾ ಖಾಸಗಿ ಆಸ್ಪತ್ರೆಗಳಲ್ಲೇ ಕರೋನಾ ಲಸಿಕೆ (Corona Vaccine) ಪಡೆಯಬೇಕು. ಆದರೆ, ಸಚಿವ ಬಿ.ಸಿ.ಪಾಟೀಲ್ ಆರೋಗ್ಯ ಸಿಬ್ಬಂದಿಯನ್ನು ತಮ್ಮ ಮನೆಗೇ ಕರೆಸಿಕೊಂಡು ಲಸಿಕೆ ಹಾಕಿಸಿಕೊಂಡಿರುವುದು ಕೋವಿಡ್ ಮಾರ್ಗಸೂಚಿಯ ಉಲ್ಲಂಘನೆ ಎಂಬ ಆರೋಪ ಕೇಳಿಬರುತ್ತಿದೆ.
ವಾಸ್ತವವಾಗಿ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಅರೋಗ್ಯ ಕಾರ್ಯದರ್ಶಿ ಡಾ. ರಾಜೇಶ್ ಭೂಷಣ್ ಅವರಿಗೆ ಈ ಕುರಿತಂತೆ ಪ್ರಶ್ನಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ರಾಜೇಶ್ ಭೂಷಣ್ ಅವರು ಸಚಿವರು ಮನೆಯಲ್ಲಿಯೇ ಲಸಿಕೆ ಪಡೆದಿರುವ ಬಗ್ಗೆ ಮಾಹಿತಿ ಬಂದಿದೆ. ಇದನ್ನು ಶಿಷ್ಟಾಚಾರದ ಅಡಿಯಲ್ಲಿ ಅನುಮತಿಸಲಾಗುವುದಿಲ್ಲ. ಈ ವಿಷಯದಲ್ಲಿ ನಾವು ರಾಜ್ಯ ಸರ್ಕಾರದಿಂದ ವರದಿ ಕೋರಿದ್ದೇವೆ ಎಂದು ತಿಳಿಸಿದ್ದಾರೆ.
Corona Vaccination : ಲಸಿಕೆ ಹಾಕಿಸಿಕೊಳ್ಳಲು ನಿಮ್ಮ ನಂಬರ್ ಬಂದಿದೆ, ಉಪಯುಕ್ತ ಮಾಹಿತಿ ಇಲ್ಲಿದೆ.
ನನಗೆ ಕೋವಿಡ್ ಮಾರ್ಗಸೂಚಿ ಬಗ್ಗೆ ಗೊತ್ತಿರಲಿಲ್ಲ- ಸಚಿವ ಬಿ.ಸಿ. ಪಾಟೀಲ್
ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಬೆಂಕಿಯಂತೆ ಹರಡುತ್ತಿದ್ದಂತೆ ಸಚಿವ ಬಿ.ಸಿ.ಪಾಟೀಲ್ ಅವರು ಈ ಕುರಿತಂತೆ ಸ್ಪಷ್ಟನೆ ನೀಡಿದ್ದು, ಮನೆ ಬಳಿ ಬಹಳಷ್ಟು ಜನರು ಕಾಯುತ್ತಿದ್ದರು. ಹೀಗಾಗಿ ಕೆಮ್ಮು, ಜ್ವರ ಬಂದಾಗ ಹೇಗೆ ವೈದ್ಯರನ್ನು ಮನೆಗೆ ಕರೆಸಿಕೊಳ್ಳುತ್ತೇವೆಯೋ ಹಾಗೆಯೇ ಕೋವಿಡ್ ಲಸಿಕೆ ತರಿಸಿಕೊಂಡು ಹಾಕಿಸಿಕೊಂಡೆ. ಆದರೆ ನನಗೆ ಕೋವಿಡ್ ಮಾರ್ಗಸೂಚಿ ಬಗ್ಗೆ ಗೊತ್ತಿರಲಿಲ್ಲ. ಆದರೆ ಇದು ಏಕೆ ಇದ್ದಕ್ಕಿದ್ದಂತೆ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.