ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಯ ನಂತ್ರ, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದರೇ, ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಯ ನಂತ್ರ ಒಕ್ಕಲಿಗರ ಅಭಿವೃದ್ಧಿ ನಿಗಮದ ಕೂಗು ಎದ್ದಿತ್ತು. ಈ ಬಳಿಕ, ಇದೀಗ ಕುರುಬರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಕೂಗು ಎದ್ದಿದೆ. ಅಲ್ಲದೇ 400 ಕೋಟಿ ಅನುದಾನ ಕೂಡ ಕಾಯ್ದಿರಿಸುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಮೇಲೆ ಒತ್ತಡ ಹೆಚ್ಚಾಗಿದೆ.
ಈ ಕುರಿತಂತೆ ಕರ್ನಾಟಕ(Karnataka) ಪ್ರದೇಶ ಕುರುಬರ ಸಂಘವು ಸಿಎಂಗೆ ಮನವಿ ಮಾಡಿದ್ದನ್ನು ಉಲ್ಲೇಖಿಸಿ, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ ಅವರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ, ಕುರುಬರು ಭಾರತ ದೇಶದ ಮೂಲ ನಿವಾಸಿಯಾಗಿದ್ದು, ಕರ್ನಾಟದಲ್ಲಿ ಮೂರನೇ ಅತಿ ದೊಡ್ಡ ಜನಸಂಖ್ಯೆಯುಳ್ಳವರಾಗಿದ್ದಾರೆ. ಸುಮಾರು 60 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಅತ್ಯಂತ ಹಿಂದುಳಿದಿದ್ದಾರೆ.
ಕುರುಬರ ಎಸ್ಟಿ ಹೋರಾಟದ ಹಿಂದೆ ಬಿಜೆಪಿ, ಆರ್‌ಎಸ್ಎಸ್‌ನ ಕೈವಾಡವಿದೆ-ಸಿದ್ಧರಾಮಯ್ಯ
ಇಂತಹ ಜನಾಂಗದ ಸರ್ವತೋಮುಖ ಅಭಿವೃದ್ಧಿಗಾಗಿ ಕುರುಬರ ಅಭಿವೃದ್ಧಿ ನಿಗಮ ರಚನೆ ಮಾಡಿ, 400 ಕೋಟಿಗಳ ಅನುದಾನವನ್ನು ಕಾಯ್ದಿರಿಸುವಂತೆ ಕೋರಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.
ಅಸಮಾಧಾನ ಸ್ಫೋಟ: ಸಿಎಂ ಬಿಎಸ್ ವೈ ವಿರುದ್ಧ ಕಿಡಿ ಕಾರಿದ ಹೆಚ್.ವಿಶ್ವನಾಥ್!