ಅಂಗಾಂಗ ದಾನ ದಿನಾಚರಣೆಗೆ ರಾಯಭಾರಿಯಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನ ಆಹ್ವಾನಿಸಿದ ಸಚಿವ ದಿನೇಶ್ ಗುಂಡೂರಾವ್

Dinesh Gundurao : ರಾಜ್ಯದಲ್ಲಿ ಅಂಗಾಂಗ ದಾನ ಕುರಿತ ಜಾಗೃತಿಗೆ ರಾಯಭಾರಿಯಾಗುವಂತೆ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಹ್ವಾನಿಸಿದ್ದಾರೆ.   

Written by - Prashobh Devanahalli | Edited by - Savita M B | Last Updated : Jul 23, 2023, 05:43 PM IST
  • ವರನಟ ಡಾ.ರಾಜಕುಮಾರ್ ಅವರಂತೆಯೇ ಪುನೀತ್ ರಾಜಕುಮಾರ್ ತಮ್ಮ ಕಣ್ಣುಗಳನ್ನ ದಾನ ಮಾಡಿದ್ದರು
  • ದೊಡ್ಮನೆ ಕುಟುಂಬ ಅಂಗಾಂಗ ದಾನಕ್ಕೆ ಪ್ರೇರಣೆಯಾಗಿರುವುದನ್ನ ಗಮನಿಸಿರುವ ಸಚಿವರು
  • ಅಂಗಾಂಗ ದಾನ ದಿನಾಚರಣೆಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನ ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಾರೆ.
ಅಂಗಾಂಗ ದಾನ ದಿನಾಚರಣೆಗೆ ರಾಯಭಾರಿಯಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನ ಆಹ್ವಾನಿಸಿದ ಸಚಿವ ದಿನೇಶ್ ಗುಂಡೂರಾವ್ title=

Ashwini Puneethrajkumar : ದೊಡ್ಮನೆ ಕುಟುಂಬ ಅಂಗಾಂಗ ದಾನಕ್ಕೆ ಪ್ರೇರಣೆಯಾಗಿರುವುದನ್ನ ಗಮನಿಸಿರುವ ಸಚಿವರು, ಆರೋಗ್ಯ ಇಲಾಖೆಯ ವತಿಯಿಂದ ಅಗಸ್ಟ್ 3 ರಂದು ಆಚರಿಸುವ ಅಂಗಾಂಗ ದಾನ ದಿನಾಚರಣೆಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನ ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಾರೆ. 

ವರನಟ ಡಾ.ರಾಜಕುಮಾರ್ ಅವರಂತೆಯೇ ಪುನೀತ್ ರಾಜಕುಮಾರ್ ತಮ್ಮ ಕಣ್ಣುಗಳನ್ನ ದಾನ ಮಾಡಿದ್ದರು. ಪುನೀತ್ ರಾಜಕುಮಾರ್ ಅವರು ಕಣ್ಣುಗಳ ದಾನ ರಾಜ್ಯದಲ್ಲಿ ಸಾವಿರಾರು ಜನರಿಗೆ ಅಂಗಾಂಗ ದಾನ ಮಾಡಲು ಪ್ರೇರಣೆಯಾಗಿತ್ತು. ಅಲ್ಲದೇ ರಾಜ್ಯದಲ್ಲಿ ಅಂಗಾಂಗ ದಾನ ಪ್ರಮಾಣ ಏರಿಕೆ ಕೂಡಾ ಕಂಡಿತ್ತು. ಅನೇಕರು ದಿ.ಪುನೀತ್ ರಾಜಕುಮಾರ್ ಅವರನ್ನೇ ಮಾದರಿಯನ್ನಾಗಿಟ್ಟುಕೊಂಡು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಇದೀಗ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಅಂಗಾಂಗ ದಾನ ಜಾಗೃತಿಗೆ ರಾಯಭಾರಿಯಾಗುವಂತೆ ಆರೋಗ್ಯ ಇಲಾಖೆ ಆಹ್ವಾನ ನೀಡಿದೆ. 

ಅಂಗಾಂಗ ದಾನದ ಮೂಲಕ ಒಬ್ಬ ದಾನಿ ತನ್ನ ಸಾವಿನ ಬಳಿಕವೂ 8 ಜನರಿಗೆ ಜೀವದಾನ ಮಾಡಬಹುದಾಗಿದೆ. ಅಲ್ಲದೇ ಅಂಗಾಂಶ ದಾನದ ಮೂಲಕ 50 ಜನರ ಜೀವವನ್ನ ಉಳಿಸಬಹುದಾಗಿದೆ. ಜೀವನದ ಸಾರ್ಥಕತೆ ಕಾಣಬಹುದಾದ  ಅಂಗಾಂಗ ದಾನಕ್ಕೆ ಸರ್ಕಾರದಿಂದ ಹೆಚ್ಚು ಪ್ರೋತ್ಸಾಹ ನೀಡುವತ್ತ ಕಾರ್ಯಕ್ರಮಗಳನ್ನ ರೂಪಿಸಲು ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದ್ದಾರೆ. 

ಇದನ್ನೂ ಓದಿ-ಕಾಂತರಾಜು ವರದಿ ಜಾರಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ: ಸಚಿವ ತಂಗಡಗಿ

ಅಗಸ್ಟ್ 03 ರಂದು ಅಂಗಾಂಗ ದಾನ ದಿನಾಚರಣೆಗೆ ಆಚರಿಸುತ್ತಿರುವ ರಾಜ್ಯ ಆರೋಗ್ಯ ಇಲಾಖೆ,  ಅಂಗಾಂಗ ದಾನ ಮಾಡಿದ ರಾಜ್ಯದ 150 ಕುಟುಂಬಗಳನ್ನ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ.  ಅಂಗಾಂಗ ದಾನದ ಪ್ರಮಾಣ ಪ್ರತಿ ಮಿಲಿಯನ್‌ ಜನಸಂಖ್ಯೆಗೆ 0.08 ರಷ್ಟಿದೆ. ಸುಮಾರು 3 ಲಕ್ಷ ಜನರು ಮೂತ್ರಪಿಂಡ ಕಸಿಗಾಗಿ ಕಾಯುತ್ತಿದ್ದಾರೆ. ಆದರೆ ಪ್ರತಿ ವರ್ಷ ಕೇವಲ 10,000 ಜನರು ಮಾತ್ರ ಕಸಿ ಪಡೆಯುತ್ತಾರೆ.

ಭಾರತದಲ್ಲಿ ಸುಮಾರು 50,000 ರೋಗಳಗೆ ಹೃದಯ ಕಸಿ ಅಗತ್ಯವಿದೆ. ಆದರೆ 1% ಜನರಿಗೆ ಮಾತ್ರ ಅಂಗಾಂಗವನ್ನು ಪಡೆಯುತ್ತಿದ್ದಾರೆ. 2 ಲಕ್ಷ ಭಾರತೀಯರಿಗೆ ಕಾರ್ನಿಯಾ ಕಸಿ ಅಗತ್ಯವಿದೆ. ಆದರೆ ಪ್ರತಿ ವರ್ಷ ಕೇವಲ 50,000 ಕಾರ್ನಿಯಗಳನ್ನು ಮಾತ್ರ ಸಂಗ್ರಹಿಸಲಾಗುತ್ತಿದೆ.

ಇದನ್ನೂ ಓದಿ-PSI recruitment scam: ತಾವೇ ಮುಖ್ಯ ಆರೋಪಿಯಂತೆ ಬೊಮ್ಮಾಯಿ ಆತಂಕ ಪಡುತ್ತಿರುವುದೇಕೆ?

ರಾಜ್ಯ ಸರ್ಕಾರವು ಮಾನವ ಅಂಗಾಂಗಗಳ ಕೊರತೆಯನ್ನು ನೀಲಸಲು ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದ್ದು, ನಿಮ್ಹಾನ್ಸ್ ಸೇಲದಂತೆ ಸರ್ಕಾರಿ ವೈದ್ಯಕೀಯಕಾಲೇಜುಗಳಲ್ಲಿ ಮಾನವ ಅಂಗಾಂಗ ಹಿಂಪಡೆಯುವ ಕೇಂದ್ರವನ್ನು ಸ್ಥಾಪಿಸಲಾಗಿದೆ, ಈ ಕೇಂದ್ರಗಳಲ್ಲಿ ಅಂಗಾಂಗ ಹಿಂಪಡೆಯುವಿಕೆ ಪ್ರಾರಂಭಿಸಲಾಗಿದೆ. ಮೆದುಳು ನಿಷ್ಕ್ರಿಯ ಹೊಂದದ ರೋಗಿಗಳನ್ನು ಗುರುತಿಸಿ ಅಂಗಾಂಗ ದಾನ ಮಾಡುವ ಕುರಿತು ಸಮಾಲೋಚನೆಗಳನ್ನ ಸಂಬಂಧಿಸಿದವರೊಂದಿಗೆ ನಡೆಸಲಾಗುತ್ತಿದೆ.‌

ಸರ್ಕಾರದ ವತಿಯಿಂದ ಬಡರೋಗಳಿಗೆ ಉಚಿತ ಅಂಗಾಂಗ ಕಸಿ ಮಾಡುವ ಯೋಜನೆ ಆರಂಭಿಸಲಾಗಿದ್ದು, ಇದುವರೆಗೂ 73 ರೋಗಿಗಳು ಪ್ರಯೋಜನ ಪಡೆದಿದ್ದಾರೆ. ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ ನರವಿಜ್ಞಾನ ಸಂಸ್ಥೆ ಹಾಗೂ ಕರ್ನಾಟಕ ವೈದ್ಯಕೀಯ ಸಂಸ್ಥೆ, ಕಿಮ್ಸ್ ಹುಬ್ಬಳ್ಳಿಯಲ್ಲಿ ಕಿಡ್ನಿ ಕಸಿ ಮಾಡಲಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News