Dr K Sudhakar: 'ಸಭೆ, ಸಮಾರಂಭಗಳಲ್ಲಿ ಹೆಚ್ಚು ಜನರು ಸೇರಿದಂತೆ ಕ್ರಮ'

ಪಂಚತಾರಾ ಹೋಟೆಲ್, ಕಲ್ಯಾಣ ಮಂಟಪ ಮೊದಲಾದವುಗಳಿಗೆ ಕೊರೊನಾ ಹರಡದಂತೆ ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

Last Updated : Mar 10, 2021, 05:48 PM IST
  • ಮದುವೆ ಮೊದಲಾದ ಸಭೆ, ಸಮಾರಂಭಗಳಲ್ಲಿ ಹೆಚ್ಚು ಜನರು ಸೇರದಂತೆ ಈಗಾಗಲೇ ಸೂಚಿಸಲಾಗಿದೆ.
  • ಗಡಿ ಭಾಗಗಳಲ್ಲಿ ಪ್ರಯಾಣಕ್ಕೆ ನಿರ್ಬಂಧ ಹೇರಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
  • ಪಂಚತಾರಾ ಹೋಟೆಲ್, ಕಲ್ಯಾಣ ಮಂಟಪ ಮೊದಲಾದವುಗಳಿಗೆ ಕೊರೊನಾ ಹರಡದಂತೆ ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
Dr K Sudhakar: 'ಸಭೆ, ಸಮಾರಂಭಗಳಲ್ಲಿ ಹೆಚ್ಚು ಜನರು ಸೇರಿದಂತೆ ಕ್ರಮ' title=

ಬೆಂಗಳೂರು: ಮದುವೆ ಮೊದಲಾದ ಸಭೆ, ಸಮಾರಂಭಗಳಲ್ಲಿ ಹೆಚ್ಚು ಜನರು ಸೇರದಂತೆ ಈಗಾಗಲೇ ಸೂಚಿಸಲಾಗಿದೆ. ಆದರೆ ಗಡಿ ಭಾಗಗಳಲ್ಲಿ ಪ್ರಯಾಣಕ್ಕೆ ನಿರ್ಬಂಧ ಹೇರಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್(Dr K Sudhakar), ಪಂಚತಾರಾ ಹೋಟೆಲ್, ಕಲ್ಯಾಣ ಮಂಟಪ ಮೊದಲಾದವುಗಳಿಗೆ ಕೊರೊನಾ ಹರಡದಂತೆ ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ತಡರಾತ್ರಿ ಪಾರ್ಟಿಗಳು, ಹೆಚ್ಚು ಜನರ ಸೇರುವುದನ್ನು ತಡೆಗಟ್ಟಲು ಮಾರ್ಗಸೂಚಿ ನೀಡಲಾಗಿದೆ. ಪಕ್ಕದ ರಾಜ್ಯ ಮಹಾರಾಷ್ಟ್ರ, ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಆದರೆ ಪ್ರಯಾಣಕ್ಕೆ ನಿರ್ಬಂಧ ಹೇರಿಲ್ಲ ಎಂದರು.

ST Somashekar: 'CD ಮಾಡಿಸಿದ್ದು 100% ಕಾಂಗ್ರೆಸ್ ಪಕ್ಷದವರೇ'

ಕೋವಿಡ್ ಬೆಳವಣಿಗೆಗಳನ್ನು ಗಮನಿಸಲಾಗುತ್ತಿದೆ. ಇದೇ ಸಮಯದಲ್ಲಿ 3,500 ಕೇಂದ್ರಗಳಲ್ಲಿ ಕೋವಿಡ್(Covid) ಲಸಿಕೆ ನೀಡಲಾಗುತ್ತಿದೆ. ಜೊತೆಗೆ ಪರೀಕ್ಷೆ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

Sindagi By Poll: ದಳಪತಿಗಳಿಗೆ ಬಿಗ್ ಶಾಕ್: JDS‌ ಅಭ್ಯರ್ಥಿಯಾಗಬೇಕದ್ದ ನಾಯಕ ಕಾಂಗ್ರೆಸ್ ಸೇರ್ಪಡೆ!

ತೇಜೋವಧೆ ಮಾಡುವಂಥ ಅಪ್ರಮಾಣೀಕೃತ ಸುದ್ದಿಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯ ನಿರ್ಬಂಧ ಹೇರಿರುವ ಕುರಿತಂತೆ ಪ್ರತಿಕ್ರಿಯಿಸಿದ ಸಚಿವರು, ಮಾಧ್ಯಮಗಳು ಪ್ರಜಾಪ್ರಭುತ್ವದ ಸ್ಥಂಭವಾಗಿದೆ. ವೀಡಿಯೋ(Video) ಪ್ರಸಾರದ ವಿಚಾರದಲ್ಲಿ ಮಾಧ್ಯಮಗಳು ಪರಿಶೀಲಿಸಬೇಕಿತ್ತು. ಮಾಧ್ಯಮಗಳು ವೀಡಿಯೋ ಪಡೆದಾಗ ಅದನ್ನು ಪರಿಶೀಲಿಸಬೇಕು. ಸತ್ಯ ಪರಿಶೀಲಿಸದೆ ಯಾವುದನ್ನೂ ಪ್ರಸಾರ ಮಾಡಬಾರದು. ವೀಡಿಯೋ ಹಿಂದೆ ರಾಜಕೀಯ ಸೇರಿದಂತೆ ಬೇರೆ ಬೇರೆ ಕಾರಣಗಳಿವೆ ಎಂದರು.

HD Revanna: ಮತ್ತೊಂದು CD ಸ್ಫೋಟ: ಸದನದಲ್ಲಿ CD ತೋರಿಸಿದ ಎಚ್.ಡಿ.ರೇವಣ್ಣ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News